Home Latest News ಡಿ.ಜಿ.ಪಿ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ
Latest NewsBanagaloreHomeState News

ಡಿ.ಜಿ.ಪಿ ಅಲೋಕ್ ಮೋಹನ್ ಸೇವಾವಧಿ ವಿಸ್ತರಣೆ

Share
Share

ಬೆಂಗಳೂರು: ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ವಿಸ್ತರಿಸಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.

ಏಪ್ರಿಲ್ 30 ರಂದು ನಿವೃತ್ತಿ ಹೊಂದಬೇಕಿದ್ದ ಅಲೋಕ್ ಮೋಹನ್ ಅವರ ಸೇವಾವಧಿಯನ್ನು ಮೇ 21ರ ವರೆಗೆ ವಿಸ್ತರಣೆ ಮಾಡಲಾಗಿದೆ. ಈ ಮೂಲಕ ಪೊಲೀಸ್ ಇಲಾಖೆಗೆ ನೂತನ ಸಾರಥಿಯ ಆಯ್ಕೆಗೆ ಕೊಂಚ ಬ್ರೇಕ್ ಬಿದ್ದಿದೆ.

ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಭೆಯಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ ಹಾಗೂ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭಾಗವಹಿಸಿದ್ದರು.

ಇನ್ನು ರಾಜ್ಯ ಸರ್ಕಾರ ಹೊಸ ಡಿಜಿಪಿ ನೇಮಕ ಪ್ರಕ್ರಿಯೆಯನ್ನೂ ಆರಂಭಿಸಿದ್ದು, ನಿಯಮದಂತೆ ನಾಲ್ಕು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರುಗಳನ್ನು ಕೇಂದ್ರಕ್ಕೆ ಶಿಫಾರಸು ಮಾಡಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಡಿಜಿಯಾಗಿರುವ ಪ್ರಶಾಂತ್ ಕುಮಾರ್ ಠಾಕೂರ್, ಸಿಐಡಿ ಡಿಜಿಯಾಗಿರುವ ಡಾ.ಎಂ.ಎ.ಸಲೀಂ, ಪೊಲೀಸ್ ಗೃಹ ನಿರ್ಮಾಣ ವಿಭಾಗದ ಡಿಜಿಯಾಗಿರುವ ರಾಮಚಂದ್ರ ರಾವ್, ಸಿಐಡಿ ಸೈಬರ್ ವಿಭಾಗದ ಡಿಜಿಪಿ ಪ್ರಣಬ್ ಮೊಹಂತಿ ಅವರ ಹೆಸರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಆಯ್ಕೆ ಸಮಿತಿ ಕೇಂದ್ರಕ್ಕೆ ಶಿಫಾರಸು ಮಾಡಿದೆ.
DGP Alok Mohan’s term extended
Share

Leave a comment

Leave a Reply

Your email address will not be published. Required fields are marked *

Don't Miss

ನರಹಂತಕ ಆನೆ ಸೆರೆಗೆ ಸಾಕಾನೆಗಳ ತಂಡ ಆಗಮನ

ಚಿಕ್ಕಮಗಳೂರು: ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಕಾರ್ಮಿಕ ಬಲಿ; ಸೆರೆಗೆ ಸಾಕಾನೆಗಳ ತಂಡ ಆಗಮನ ಚಿಕ್ಕಮಗಳೂರು ತಾಲ್ಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ಕೂಲಿ ಕಾರ್ಮಿಕ...

ನೈತಿಕ ಪೊಲೀಸ್ ಗಿರಿ ಪ್ರಕರಣ – ಗಂಭೀರವಾಗಿ ಪರಿಗಣನೆ

ಚಿಕ್ಕಮಗಳೂರು: ಕಾಫಿನಾಡಿನ ಸಂತೇ ಮೈದಾನದ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣವನ್ನು ಜಿಲ್ಲಾ ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್...

Related Articles

ಕಿಸಿಂಗ್, ಕಿಸಿಂಗ್ ರಾಮಚಂದ್ರ -ಸ್ಮಗ್ಲಿಂಗ್, ಸ್ಮಗ್ಲಿಂಗ್ ರನ್ಯಾ ರಾವ್‌

ಅಪ್ಪ ರಾಮಚಂದ್ರ ರಾವ್ ಗೆ ಚಿನ್ನವೀಡು ಕಾಟ,ಮಲ ಮಗಳು ರನ್ಯಾ ರಾವ್ ಗೆ ಚಿನ್ನ ಕಳವಿನ...

ಪ್ರವಾಸ ಮುಂದೂಡಲು ಜಿಲ್ಲಾಡಳಿತ ಮನವಿ

ಚಿಕ್ಕಮಗಳೂರು:  ಐ.ಡಿ. ಪೀಠ ಹಾಗೂ ಸುತ್ತಮುತ್ತಲಿನ ತಾಲ್ಲೂಕಿನ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಮಾಣಿಕ್ಯಧಾರಾ ಹಾಗೂ...

ಫೆ.೨೮-ಮಾ.೧೭ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ

ಚಿಕ್ಕಮಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ ೨೮ ರಿಂದ ಮಾರ್ಚ್ ೧೭ರವರೆಗೆ ನಡೆಯಲಿದ್ದು, ಪರೀಕ್ಷೆಗಳನ್ನು...

ಕಾಡುಕೋಣ ದಾಳಿಗೆ ಕೃಷಿಕನಿಗೆ ಗಾಯ

ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ...