Home namma chikmagalur chikamagalur ಕಡೂರು ರೈಲ್ವೆ ನಿಲ್ದಾಣದಲ್ಲಿ ಕೈಕೊಟ್ಟ ಡಿಜಿಟಲ್ ಪಾವತಿ ವ್ಯವಸ್ಥೆ
chikamagalurHomeLatest Newsnamma chikmagalur

ಕಡೂರು ರೈಲ್ವೆ ನಿಲ್ದಾಣದಲ್ಲಿ ಕೈಕೊಟ್ಟ ಡಿಜಿಟಲ್ ಪಾವತಿ ವ್ಯವಸ್ಥೆ

Share
Share

ಚಿಕ್ಕಮಗಳೂರು: ಕಡೂರು ರೈಲ್ವೆ ನಿಲ್ದಾಣದಲ್ಲಿ ಯುಪಿಐ ಮೂಲಕ ಹಣ ಪಾವತಿಸಿ ಟಿಕೆಟ್ ಪಡೆಯಲು ಸಾಧ್ಯವಾಗದೆ ಶುಕ್ರವಾರ ಪ್ರಯಾಣಿಕರು ತೊಂದರೆ ಅನುಭವಿಸಿದರು.

ಇದರಿಂದ ನಗದು ಕೊಂಡೊಯ್ಯುವ ಅನಿವಾರ್ಯತೆ ತಪ್ಪಿ ಮೊಬೈಲ್ ಮೂಲಕವೇ ಹಣ ಪಾವತಿಸಿ ಟಿಕೆಟ್ ಪಡೆಯುತ್ತಾರೆ. ಆದರೆ, ಸರ್ವರ್ ಸಮಸ್ಯೆ ಎದುರಾದ ಹಿನ್ನೆಲೆಯಲ್ಲಿ ಕಡೂರು ರೈಲ್ವೆ ನಿಲ್ದಾಣದಲ್ಲಿ ಈ ಸೇವೆ ಬಳಸಲಾಗಿಲ್ಲ.

ಕೊನೆಯ ಕ್ಷಣದಲ್ಲಿ ರೈಲ್ವೆ ಸಿಬ್ಬಂದಿ ಯುಪಿಐ ಪಾವತಿ ವ್ಯವಸ್ಥೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದರಿಂದ, ನಗದು ಹಣವಿಲ್ಲದೆ ಬಂದಿದ್ದ ಪ್ರಯಾಣಿಕರು ತೊಂದರೆ ಅನುಭವಿಸಬೇಕಾಯಿತು. ಪ್ರಯಾಣದ ತುರ್ತಿನಲ್ಲಿದ್ದವರು ಟಿಕೆಟ್ ಪಡೆಯಲು ಪರದಾಡುವ ಪರಿಸ್ಥಿತಿ ಉಂಟಾಯಿತು.

ಡಿಜಿಟಲ್ ಪಾವತಿ ವ್ಯಾಪಕವಾಗಿ ಬಳಕೆಯಲ್ಲಿದೆ. ಪ್ರಯಾಣಿಕರು ನಗದಿಗಿಂತ ಮೊಬೈಲ್ ಪಾವತಿಯನ್ನೇ ಹೆಚ್ಚು ಅವಲಂಬಿಸಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ವರ್ ಸಮಸ್ಯೆಯಿಂದ ಯುಪಿಐ ಸೇವೆ ಸ್ಥಗಿತವಾದರೆ ಪರ್ಯಾಯ ವ್ಯವಸ್ಥೆ ಕಲ್ಪಿಸುವುದು ಅಥವಾ ಪ್ರಯಾಣಿಕರಿಗೆ ಮುಂಚಿತವಾಗಿ ಮಾಹಿತಿ ನೀಡುವುದು ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ರೈಲ್ವೆ ಇಲಾಖೆ ಸರ್ವರ್ ಸಮಸ್ಯೆ ತ್ವರಿತವಾಗಿ ಪರಿಹರಿಸಿ, ಯುಪಿಐ ಪಾವತಿ ವ್ಯವಸ್ಥೆ ಸುಗಮವಾಗಿ ಕಾರ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ತಾಂತ್ರಿಕ ದೋಷದಿಂದ ಸೇವೆ ಲಭ್ಯವಿಲ್ಲದ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮೊದಲೇ ತಿಳಿಸುವಂತೆ ಟಿಕೆಟ್ ಕೌಂಟರ್ ಬಳಿ ಮಾಹಿತಿ ಫಲಕ ಅಳವಡಿಸಬೇಕು ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

Digital payment system fails at Kadur railway station

Share

Leave a comment

Leave a Reply

Your email address will not be published. Required fields are marked *

Don't Miss

ಪ್ರಧಾನ ಮಂತ್ರಿ ವಿಕಸಿತ ಭಾರತ ಸಂಕಲ್ಪದಡಿ ತರೀಕೆರೆ ಅಭಿವೃದ್ಧಿಗೆ ಆದ್ಯತೆ

ತರೀಕೆರೆ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿಕಸಿತ ಭಾರತ ಸಂಕಲ್ಪದಂತೆ ತರೀಕೆರೆ ಪಟ್ಟಣದ ಅಭಿವೃದ್ಧಿಗೆ ಆದ್ಯತೆ ನೀಡಿ ಶ್ರಮಿಸಲಾಗುವುದು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು....

ಬಾಬಾ ಬುಡನ್ ದರ್ಗಾ ವಿವಾದ: ಪೊಲೀಸರ ‘ಬಿ’ ರಿಪೋರ್ಟ್‌ಗೆ ಆಕ್ಷೇಪ

ಚಿಕ್ಕಮಗಳೂರು: ಚಿಕ್ಕಮಗಳೂರಿನ ಐತಿಹಾಸಿಕ ಶ್ರೀ ಗುರು ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ನಡೆದಿದೆಯೆನ್ನಲಾದ ಅಕ್ರಮ ಕೃತ್ಯಗಳ ಕುರಿತು ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿರುವ ‘ಬಿ’ ಫೈನಲ್ ವರದಿಯನ್ನು ವಿರೋಧಿಸಿ, ನ್ಯಾಯಾಲಯದಲ್ಲಿ ಪ್ರೊಟೆಸ್ಟ್ ಪೆಟಿಷನ್...

Related Articles

ಮೂರು ದಿನಗಳ ಕಾಲ ನಗರದಲ್ಲಿ ಕುಡಿಯುವ ನೀರಿನ ಪೂರೈಕೆ

ಚಿಕ್ಕಮಗಳೂರು: ಕಾಫಿನಾಡಿನ ನಗರವಾಸಿಗಳಿಗೆ ಮುಂದಿನ ಮೂರು ದಿನಗಳ ಕಾಲ ಕುಡಿಯುವ ನೀರಿನ ಪೂರೈಕೆಯಲ್ಲಿ ಭಾರಿ ವ್ಯತ್ಯಯ...

ಚಿಕ್ಕನಕೊಡಿಗೆ ಬಳಿ ಅಪಘಾತದಲ್ಲಿ 80 ವರ್ಷದ ವೃದ್ಧ ಸಾವು

ಕೊಪ್ಪ: ತೀರ್ಥಹಳ್ಳಿ–ಕೊಪ್ಪ ಮುಖ್ಯ ರಸ್ತೆಯ ಚಿಕ್ಕನಕೊಡಿಗೆ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ 80...

₹1.49 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

ಅಜ್ಜಂಪುರ: ಮನೆಯ ಬೀರುವಿನ ಬೀಗ ಮುರಿದು ₹1.49 ಲಕ್ಷ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು...

₹4.94 ಲಕ್ಷ ಮೌಲ್ಯದ ವೈದ್ಯಕೀಯ ಉಪಕರಣಗಳ ಕಳವು

ಚಿಕ್ಕಮಗಳೂರು: ನಗರದ ಆಜಾದ್ ಪಾರ್ಕ್‌ ಸಮೀಪದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಹಳೆಯ ಕಟ್ಟಡದಲ್ಲಿ ಸಂಗ್ರಹಿಸಿಡಲಾಗಿದ್ದ ₹4.94...