Home namma chikmagalur chikamagalur ಷೇರುದಾರರಿಗೆ ಅನುಕೂಲಕ್ಕೆ ಆಡಳಿತ ವ್ಯವಸ್ಥೆ ಡಿಜಿಟಲೀಕರಣ
chikamagalurHomeLatest Newsnamma chikmagalur

ಷೇರುದಾರರಿಗೆ ಅನುಕೂಲಕ್ಕೆ ಆಡಳಿತ ವ್ಯವಸ್ಥೆ ಡಿಜಿಟಲೀಕರಣ

Share
Oplus_16908288
Share

ಚಿಕ್ಕಮಗಳೂರು: ಚಿಕ್ಕಮಗಳೂರು ಟೌನ್ ಕೋ-ಆಪರೇಟಿವ್ ಸೊಸೈಟಿಯ ಆಡಳಿತ ವ್ಯವಸ್ಥೆಯನ್ನು ಷೇರುದಾರರಿಗೆ ಅನುಕೂಲ ಆಗುವಂತೆ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ವರಸಿದ್ದಿ ವೇಣುಗೊಪಾಲ ಹೇಳಿದರು.

ಅವರು ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಹಿಂದೆ ಚೆಕ್ ಮೂಲಕ ಸಾಲವಿತರಣೆ ಮಾಡುತ್ತಿದ್ದು ಇದೀಗ ನೇರವಾಗಿ ಬ್ಯಾಂಕ್ ಖಾತೆಗೆ ಆರ್‌ಟಿಜಿಎಸ್, ನೆಫ್ಟ್ ಮೂಲಕ ವರ್ಗಾವಣೆ ಮಾಡಲಾಗುತ್ತಿದೆ. ಸಾಲಗಳ ವಸೂಲಾತಿಯನ್ನು ಮೊಬೈಲ್ ಆಪ್ ಬಳಸಿ ಪಾರದರ್ಶಕವಾದ ವಸೂಲಾತಿ ನಡೆಯುತ್ತಿದೆ. ಕಳೆದ ವರ್ಷ ನಮ್ಮ ಆಡಳಿತ ಮಂಡಳಿ ನೀಡಿದ್ದ ಭರವಸೆಯನ್ನು ಸಂಪೂರ್ಣ ಈಡೇರಿಸಿದೆ ಎಂದು ತಿಳಿಸಿದರು.

ಕಳೆದ ೧೫ ವರ್ಷದಲ್ಲಿ ಬಾಕಿ ಇದ್ದ ೧.೫ ಕೋಟಿ ರೂ ಸಾಲವನ್ನು ವಸೂಲಿ ಮಾಡಲಾಗಿದೆ. ಸುಮಾರು ೧೨೫ ಮಂದಿ ಸಾಲಗಾರರನ್ನು ಕಚೇರಿಗೆ ಕರೆಸಿ ತಿಳಿಹೇಳಿ ಸಾಲ ಕಟ್ಟುವಂತೆ ಮನವೊಲಿಸಿದ್ದೇವೆ. ಪುನಾ ಈ ವರ್ಷ ೧೦೦ ಮಂದಿ ಷೇರುದಾರರಿಗೆ ಸಾಲ ವಿತರಿಸಿದ್ದೇವೆ. ಸಂಘಕ್ಕೆ ೧೫೦ ಕ್ಕೂ ಅಧಿಕ ಸದಸ್ಯರನ್ನು ನೊಂದಾಯಿಸಿಕೊಳ್ಳಲಾಗಿದೆ. ಷೇರುದಾರರಿಂದ ಸಂಘದ ಬಂಡವಾಳ ವೃದ್ದಿಸಿಕೊಳ್ಳಲಾಗಿದೆ ಎಂದರು.

ನಮ್ಮ ಸಂಸ್ಥೆಯಲ್ಲಿ ಸಂಘದ ಹಿರಿಯ ಸದಸ್ಯರಿಗೆ ಅಧಿಕ ಬಡ್ಡಿ ನೀಡಲಾಗುತ್ತಿದೆ. ಸಂಘದ ಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ ಅವರು, ಸಂಘದ ಷೇರು ೫೦೦ ರೂ.ಗಳಿದ್ದು ಇದನ್ನು ೨ ಸಾವಿರ ರೂ. ಗೆ ಹೆಚ್ಚಿಸಲು ಕಾರ್ಯಕಾರಿ ಮಂಡಳಿ ತೀರ್ಮಾನಿಸಿ ಮಹಾಸಭೆಯಲ್ಲಿ ಒಪ್ಪಿಗೆ ಪಡೆಯಲಾಗಿದೆ. ಹಿಗಾಗಿ ಎಲ್ಲ ಸದಸ್ಯರು ೨ ಸಾವಿರ ರೂ. ಷೇರು ಹಣವನ್ನು ಭರ್ತಿಮಾಡುವಂತೆ ವಿನಂತಿಸುತ್ತೇನೆ ಎಂದು ಹೇಳಿದರು.

ಪತ್ರಿಕಾ ಗೋಷ್ಠಿಯಲ್ಲಿ ಉಪಾಧ್ಯಕ್ಷೆ ಹಾಲಮ್ಮ ರಾಮಚಂದ್ರ, ನಿರ್ದೇಶಕರಾದ ರಘು, ಗಂಗಾಧರ, ಪ್ರಶಾಂತ್, ಕುಮಾರ್, ರವಿ ಕುಮಾರ್, ಈಶ್ವರಪ್ಪ ಕೋಟೆ, ಕೇಶವ ಮೂರ್ತಿ , ಕಾರ್ಯದರ್ಶಿ ಗಾಯತ್ರಿ ಉಪಸ್ಥಿತರಿದ್ದರು.

Digitalization of the governance system for the benefit of shareholders

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...