Home namma chikmagalur chikamagalur ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ SIR ಪರಿಷ್ಕರಣೆಯಲ್ಲಿ 8,54,852 ನಮೂನೆಗಳ ಡಿಜಿಟಲೀಕರಣ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳ ಕಾರ್ಯಾಲಯದ ಪತ್ರಿಕಾ ಪ್ರಕಟಣೆಯ ಪ್ರಕಾರ, ಮತಗಟ್ಟೆ ಅಧಿಕಾರಿಗಳು (BLO) ಮನೆ-ಮನೆಗೆ ಭೇಟಿ ನೀಡಿ ಗಣತಿ ನಮೂನೆಗಳನ್ನು (Enumeration Forms) ವಿತರಿಸಿದ್ದು ಅದನ್ನು ಡಿಜಿಟಲೀಕರಣ ಗೊಳಿಸುವ ಪ್ರಕ್ರಿಯೆ ಭರದಿಂದ ಸಾಗಿದೆ.

ಜಿಲ್ಲೆಯಲ್ಲಿ ಜೂನ್ 16 ರ ವೇಳೆಗೆ ಒಟ್ಟು 9,60,231 ನೋಂದಾಯಿತ ಮತದಾರರಿದ್ದು, ಎಲ್ಲಾ ಮತದಾರರಿಗೂ ಗಣತಿ ನಮೂನೆಗಳನ್ನು ಶೇ.100 ರಷ್ಟು ವಿತರಿಸಲಾಗಿದೆ. ಜಿಲ್ಲೆಯಾದ್ಯಂತ ಒಟ್ಟು 1,230 ಮತಗಟ್ಟೆಗಳ ವ್ಯಾಪ್ತಿಯಲ್ಲಿ ಅಧಿಕಾರಿಗಳು ನಿರಂತರವಾಗಿ ಶ್ರಮಿಸುತ್ತಿದ್ದು, ಇದುವರೆಗೆ ಬರೋಬ್ಬರಿ 8,54,852 ನಮೂನೆಗಳನ್ನು ಯಶಸ್ವಿಯಾಗಿ ಡಿಜಿಟಲೀಕರಣ (Digitized) ಗೊಳಿಸಲಾಗಿದೆ.

ವಿಧಾನಸಭಾ ಕ್ಷೇತ್ರವಾರು ಅಂಕಿ-ಅಂಶಗಳನ್ನು ನೋಡುವುದಾದರೆ, ಶೃಂಗೇರಿಯಲ್ಲಿ 1,55,636, ಮೂಡಿಗೆರೆಯಲ್ಲಿ 1,51,851, ಚಿಕ್ಕಮಗಳೂರಿನಲ್ಲಿ 1,90,684, ತರೀಕೆರೆಯಲ್ಲಿ 1,70,980 ಹಾಗೂ ಕಡೂರು ಕ್ಷೇತ್ರದಲ್ಲಿ 1,85,701 ನಮೂನೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಂಡಿದೆ.

ಇನ್ನು ಜಿಲ್ಲೆಯಾದ್ಯಂತ ಒಟ್ಟು 79,817 ನಮೂನೆಗಳು ಸಂಗ್ರಹಿಸಲು ಸಾಧ್ಯವಾಗದ (ASDDO – ಅಲಭ್ಯ/ಸ್ಥಳಾಂತರ) ವರ್ಗದಲ್ಲಿ ಗುರುತಿಸಿಕೊಂಡಿವೆ. ಪ್ರಜಾಪ್ರಭುತ್ವದ ಅಡಿಪಾಯವಾದ ಮತದಾನ ಹಕ್ಕನ್ನು ಪ್ರತಿಯೊಬ್ಬರಿಗೂ ತಲುಪಿಸುವ ಈ ಅಭಿಯಾನವು ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

Digitization of 854852 forms in SIR revision in the district

Share

Leave a comment

Leave a Reply

Your email address will not be published. Required fields are marked *

Don't Miss

ಇಂದಿನಿಂದ ಜಿಲ್ಲೆಯಲ್ಲಿ ಸಂಘಟನ್ ಸೃಜನ ಅಭಿಯಾನ

ಚಿಕ್ಕಮಗಳೂರು: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ತೀರ್ಮಾನದಂತೆ ದೇಶದಾದ್ಯಂತ ‘ಸಂಘಟನ್ ಸೃಜನ ಅಭಿಯಾನ’ ನಡೆಸುತ್ತಿದ್ದು, ಜಿಲ್ಲೆಯಲ್ಲೂ ಇಂದಿನಿಂದ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಎಐಸಿಸಿ ಮಾಜಿ ಕಾರ್ಯದರ್ಶಿ, ಗುಜರಾತ್ ಉಸ್ತುವಾರಿ ಬಿಶ್ವರಂಜನ್ ಮೊಹಾಂತಿ...

ಮುಂದುವರಿದ ಟಿ.ಡಿ.ರಾಜೇಗೌಡ-ಗೊಂದಲದಲ್ಲಿ ಗಾಯಿತ್ರಿ ?

ಚಿಕ್ಕಮಗಳೂರು: ಶಾಸಕ ಟಿ.ಡಿ.ರಾಜೇಗೌಡ v/s ಮಾಜಿ ಶಾಸಕ ಡಿ.ಎನ್.ಜೀವರಾಜ್ ಮಧ್ಯೆ ನಡೆದಿರುವ ಶಾಸಕ ಸ್ಥಾನನ ಪೈಪೋಟಿಯಲ್ಲಿ ಸದ್ಯಕ್ಕೆ ಟಿ.ಡಿ.ರಾಜೇಗೌಡರ ಕೈ ಮೇಲಾಗಿದೆ.ಸುಪ್ರೀಂ ಕೋರ್ಟ್ ಜುಲೈ ತಿಂಗಳವರೆಗೆ ರಾಜೇಗೌಡ ಶಾಸಕ ಸ್ಥಾನದಲ್ಲಿ ಮುಂದುವರೆಯಲಿದ್ದಾರೆ...

Related Articles

ದತ್ತಪೀಠ ಮಾರ್ಗದ ಕವಿಕಲ್ ಗಂಡಿ ಬಳಿ ಗುಡ್ಡ ಕುಸಿತ

ಚಿಕ್ಕಮಗಳೂರು: ಪಶ್ಚಿಮ ಘಟ್ಟಗಳ ತಪ್ಪಲು ಹಾಗೂ ರಾಜ್ಯದ ಅತಿ ಎತ್ತರದ ಶಿಖರ ಮುಳ್ಳಯ್ಯನಗಿರಿ ಪರ್ವತ ಶ್ರೇಣಿಯಲ್ಲಿ...

ಮರು ಮತ ಎಣಿಕೆಯಲ್ಲಿ ಗಾಯತ್ರಿ ಶಾಂತೇಗೌಡಗೆ 9 ಮತಗಳ ಗೆಲವು

ಚಿಕ್ಕಮಗಳೂರು:  ಚಿಕ್ಕಮಗಳೂರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದ ಮಹತ್ವದ ಪ್ರಕರಣದಲ್ಲಿ...

ಎನ್‌ಆರ್‌ಪುರ, ಶೃಂಗೇರಿ – ಕೊಪ್ಪ ತಾಲ್ಲೂಕಿನ ಶಾಲೆಗಳಿಗೆ ಇಂದು ರಜೆ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆ, ಪ್ರವಾಹ ಹಾಗೂ ಭೂಕುಸಿತದ...

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಹಸುಗಳು ಸಾವು

ಕಳಸ: ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಮೂರು ಹಸುಗಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ...