ಚಿಕ್ಕಮಗಳೂರು: ವಿಕಲಚೇತನರು ಸಮಾಜಕ್ಕೆ ಹೊರೆಯಲ್ಲ; ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಡಬಲ್ಲವರಾಗಿದ್ದಾರೆ. ಘನತೆಯಿಂದ, ಗೌರವಯುತವಾಗಿ ಬಾಳನ್ನು ಕಟ್ಟಿಕೊಳ್ಳಲು ಅವರಿಗೆ ಎಲ್ಲರ ಸಹಾಯ ಬೇಕಾಗಿದೆ ಎಂದು ಶಾಸಕರಾದ ಹೆಚ್,ಡಿ ತಮ್ಮಯ್ಯ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನಗರಸಭೆ, ವಾರ್ತಾ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ರೋಟರಿ ಇನ್ನರ್ ವೀಲ್ ಟ್ರಸ್ಟ್, ಜೀವನ ಸಂಧ್ಯಾ ವೃದ್ಧಾಶ್ರಮ, ಅನ್ನಪೂರ್ಣ ವೃದ್ಧಾಶ್ರಮ, ಎಸ್.ಪಿ. ಐ.ಡಿ ಸಂಸ್ಥೆ, ಶ್ರೀ ನಿವೇದಿತಾ ವಿದ್ಯಾ ಸಂಸ್ಥೆ. ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲೆ, ಕೆಂಪನಹಳ್ಳಿ, ಶ್ರೀ ಶಕ್ತಿ ಮಧ್ಯ ವ್ಯಸನ ಕೇಂದ್ರ, ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ವಿವಿಧೋದ್ದೇಶ, ಗ್ರಾಮೀಣ, ನಗರ ಪುನರ್ವಸತಿ ಕಾರ್ಯಕರ್ತರ ಸಂಯುಕ್ತಾಶ್ರಯದಲ್ಲಿ ಇಂದು ನಗರದ ನೇತಾಜಿ ಸುಭಾಷ್ ಚಂದ್ರಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ೨೦೨೫-೨೬ನೇ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಪ್ರಗತಿಯಲ್ಲಿ ವಿಶೇ? ಚೇತನರೂ ಸಮಾನವಾಗಿ ಭಾಗಿಯಾಗಬೇಕು. ಎಲ್ಲರೂ ಅವರನ್ನು ಸಮಾನ ದೃಷ್ಟಿಯಿಂದ ನೋಡಬೇಕು. ವಿಕಲಚೇತನರಿಗೆ ಸಹಾಯ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿ. ಇದೇ ನಿಜವಾದ ಸಾಮಾಜಿಕ ನ್ಯಾಯ ಎಂದು ತಿಳಿಸಿದರು. ಪೋ?ಕರು ವಿಕಲಚೇತನ ಮಗು ಹುಟ್ಟಿದೆ ಎಂದು ಅಳುತ್ತಾ ಕೂರದೆ ಆ ಮಗುವನ್ನು ಸ್ವತಂತ್ರವಾಗುಳಿಯಲು ಅಗತ್ಯವಾದ ಕ್ರಮ ಕೈಗೊಳ್ಳಬೇಕು. ಎಲ್ಲಿ ಹೋದರೂ ಅವರ ಬಗ್ಗೆ ನಿಗಾ ಇರಿಸಿಕೊಂಡು ಸಬಲೀಕರಣಗೊಳಿಸಬೇಕು ಎಂದು ಸಲಹೆ ನೀಡಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ದಿವ್ಯಾಂಗ ಚೇತನರಲ್ಲದೇ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರು ಸೇರಿದಂತೆ ೩ ಲಕ್ಷಕ್ಕಿಂತ ಕಡಿಮೆ ಆದಾಯವಿರುವ ಎಲ್ಲರಿಗೂ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳನ್ನು ನಡೆಸಲು ಉಚಿತವಾಗಿ ವಕೀಲರನ್ನು ನೇಮಿಸಿಕೊಡಲಾಗುವುದು ಎಂದು ಹೇಳಿದರು.
ಒಂದು ವೇಳೆ ಪ್ರಕರಣ ದಾಖಲಿಸುವ ಸಂದರ್ಭ ನ್ಯಾಯಾಲಯದ ಶುಲ್ಕ ಪಾವತಿಸಲು ಹಣ ಇಲ್ಲದಿದ್ದರೆ ಕಾನೂನು ಸೇವಾ ಪ್ರಾಧಿಕಾರವೇ ನ್ಯಾಯಾಲಯದ ಶುಲ್ಕ ಭರಿಸುತ್ತದೆ, ವಕೀಲರಿಗೆ ಒಂದು ಪ್ರಕರಣಕ್ಕೆ ಇಂತಿಷ್ಟು ಶುಲ್ಕವೆಂದು ನೀಡಲಾಗುತ್ತದೆ ಎಂದ ಅವರು ಅಸಹಾಯಕರಿಗೆ ಸಹಾಯ ಮಾಡುವ ದೃಷ್ಟಿಯಿಂದ ಪ್ರತಿ ತಾಲೂಕಿನಲ್ಲಿಯೂ ಸಹಾ ಕಾನೂನು ಸೇವಾ ಸಮಿತಿಗಳಿದ್ದು ಅವುಗಳ ಸದುಪಯೋಗ ಪಡೆಯಬಹುದೆಂದು ತಿಳಿಸಿದರು.
ಜಿ,ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ಪೋ?ಕರು ಮಕ್ಕಳಿಗೆ ಯಾವುದೇ ನ್ಯೂನತೆ ಇದ್ದರೂ ಅದನ್ನು ಸ್ವೀಕರಿಸುವ ಮನೋಭಾವ ಹೊಂದಬೇಕು. ಆ ಮಗುವಿಗೆ ತಾನೇನು ಸಹಕಾರ, ಬೆಂಬಲ ನೀಡಬಹುದು ಎಂಬ ಬಗ್ಗೆ ಆಲೋಚಿಸಬೇಕು. ಅವರ ಸ್ವಂತ ಕಾಲಿನ ಮೇಲೆ ಅವರು ನಿಲ್ಲುವುದಕ್ಕೆ ಅವಕಾಶ ಮಾಡಿಕೊಡಬೇಕು. ಆ ಮಗುವಿಗಾಗಿಯೇ ಜೀವನವನ್ನು ಮುಡಿಪಾಗಿಟ್ಟಿರುವ ಪೋ?ಕರಿಗೆ ಧನ್ಯವಾದಗಳನ್ನು ಹೇಳಬೇಕು. ಅಂಗವಿಕಲರಿಗೆ ಬೇಕಾದ ಎಲ್ಲ ಸೌಲಭ್ಯಗಳನ್ನು ನಿಸ್ಸಂಕೋಚವಾಗಿ ಕೇಳಿ ಪಡೆಯಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್, ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲೆ ಅಧ್ಯಕ್ಷ ಡಾ.ಜೆ.ಪಿ.ಕೃಷ್ಣೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ್ ವೈ.ಆಲದಾರ್ತಿ, ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷ ಗೋಪಾಲಕೃಷ್ಣ, ಆಶಾಕಿರಣ ಅಂಧ ಮಕ್ಕಳ ವಸತಿಯುತ ಪಾಠಶಾಲೆ ಉಪಾಧ್ಯಕ್ಷ ನಸ್ರುಲ್ಲಾ ಷರೀಫ್, ಕರ್ನಾಟಕ ಕಿವುಡರ ಸಂಘದ ಅಧ್ಯಕ್ಷ ಶಂಕರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಎಂ.ವೀರಭದ್ರಯ್ಯ, ವಿವಿಧ ಸಂಘ-ಸಂಸ್ಥೆಗಳ ಮುಖಂಡರು ಕಾರ್ಯಕ್ರಮದಲ್ಲಿದ್ದರು.
Disabled people are not a burden on society.
Leave a comment