Home Latest News ಮಕ್ಕಳಲ್ಲಿ ಶಿಸ್ತುಬದ್ಧ ಜೀವನ-ಸಾಮಾಜಿಕ ಕಳಕಳಿ ಅಗತ್ಯ
Latest NewschikamagalurHomenamma chikmagalur

ಮಕ್ಕಳಲ್ಲಿ ಶಿಸ್ತುಬದ್ಧ ಜೀವನ-ಸಾಮಾಜಿಕ ಕಳಕಳಿ ಅಗತ್ಯ

Share
????????????????????????????????????
Share

ಚಿಕ್ಕಮಗಳೂರು:  ಮಕ್ಕಳು ವಿದ್ಯಾರ್ಥಿದೆಸೆಯಿಂದಲೇ ಶಿಸ್ತುಬದ್ಧ ಜೀವನ, ಸಾಮಾಜಿಕ ಕಳಕಳಿ ಅಳವಡಿಸಿಕೊಳ್ಳಬೇಕು. ಸಮಾಜವನ್ನು ಎದುರಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಲ್ಲಿ ಜಗತ್ತಿನ ಪ್ರೀತಿಯನ್ನು ಸಂಪಾದಿಸಬಹುದು ಎಂದು ನಿವೃತ್ತ ಉಪನ್ಯಾಸಕ ಬಿ.ಟಿ.ತಿಪ್ಪೇರುದ್ರಪ್ಪ ಹೇಳಿದರು.

ನಗರದ ಜಿಲ್ಲಾ ಸ್ಕೌಟ್ಸ್ ಭವನದಲ್ಲಿ ಶುಕ್ರವಾರ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆಯ ೨೦೨೪-೨೫ನೇ ಸಾಲಿನ ಜಿಲ್ಲಾ ಮಟ್ಟದ ಎಸ್.ಎಸ್.ಎಲ್.ಸಿ. ಹಾಗೂ ಪಿಯುಸಿ ಪ್ರತಿಭಾನ್ವಿತ ಸ್ಕೌಟ್ಸ್-ಗೈಡ್ಸ್ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಭೆ ಎಂಬುದು ಮಕ್ಕಳ ಜನನದಿಂದಲೇ ಅಡಗಿರುತ್ತದೆ. ಅನಾವರಣಗೊಳಿಸುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಹೀಗಾಗಿ ಎಳೆ ವಯಸ್ಸಿನಿಂದಲೇ ಮಕ್ಕಳಿಗೆ ಆಸಕ್ತಿ ಹೊಂದಿರುವ ವಿಷಯಕ್ಕೆ ಪ್ರೋತ್ಸಾಹಿಸುವ ಕೆಲಸಕ್ಕೆ ಶಿಕ್ಷಕರು ಮಾಡಬೇಕು. ಆ ನಿಟ್ಟಿನಲ್ಲಿ ಸ್ಕೌಟ್ಸ್-ಗೈಡ್ಸ್ ಸಂಸ್ಥೆ ಮಕ್ಕಳಲ್ಲಿ ದೇಶಪ್ರೇಮದ ಬೀಜವನ್ನು ಬಿತ್ತುತ್ತಿರುವುದು ಶ್ಲಾಘನೀಯ ಕೆಲಸ ಎಂದರು.

ವಿದ್ಯಾರ್ಥಿಗಳು ಅಂಕ ಗಳಿಕೆಗಷ್ಟೇ ಸೀಮಿತರಾಗಬಾರದು. ಪ್ರಪಂಚದ ಆಳವನ್ನು ಅಧ್ಯಯನ ನಡೆಸಬೇ ಕಿದೆ. ಪ್ರತಿ ಮಕ್ಕಳಲ್ಲಿ ಕೌಶಲ್ಯತೆ, ಜಾಣ್ಮೆಯಿದೆ. ಅವುಗಳನ್ನು ಸದ್ಬಳಕೆ ಮಾಡಿಕೊಂಡು ಸಾಗುವ ನಿಟ್ಟಿನಲ್ಲಿ ಮಕ್ಕಳು ಪ್ರಯತ್ನಿಸಬೇಕು. ಕಠಿಣ ಪರಿಶ್ರಮದಿಂದಲೇ ಇಂದು ದೇಶದ ಅನೇಕ ಮಹಾನೀಯ ವ್ಯಕ್ತಿಗಳು ಜಗ ತ್ತಿನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಸಲಹೆ ಮಾಡಿದರು.

ಆಧುನಿಕ ಜಗತ್ತಿನಲ್ಲಿ ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರವನ್ನು ಕಲಿಸಬೇಕು. ಶಿಸ್ತು, ಸಮಯಪ್ರಜ್ಞೆ, ವಿನಯತೆ, ವಿದೇಯತೆ ಹಾಗೂ ಸದಾ ಒಳ್ಳೆಯ ಕಾರ್ಯಕ್ಕೆ ಬೆಂಬಲಿಸುವ ಪರಿಪಾಠವನ್ನು ಬೋಧಿಸಿದಾಗ ಸಮಾಜದಲ್ಲಿ ಸನ್ನಡತೆಯ ವ್ಯಕ್ತಿತ್ವ ರೂಪುಗೊಳ್ಳಲು ಸಾಧ್ಯ. ಜೊತೆಗೆ ಮಕ್ಕಳು ಏಕಮಾತ್ರ ಸಂಕಲ್ಪದೊಂದಿಗೆ ಜೀವನ ರೂಪಿಸಿಕೊಳ್ಳಬೇಕು ಎಂದರು.

ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಸಂಪಾದಿಸುವ ಮೊದಲು ಸಹನೆ, ತಾಳ್ಮೆ ಯಥೆಚ್ಚ ವಾಗಿ ತುಂಬಿರಬೇಕು. ಅಹಂಕಾರ, ಅಸಡ್ಡೆ ಅಥವಾ ಸಮಯವನ್ನು ಪಾಲಿಸದೇ ಕಾಲಕಳೆದರೆ ವಿದ್ಯಾರ್ಥಿ ಬದುಕು ದುಸ್ತರವಾಗುವುದರಲ್ಲಿ ಸಂಶಯವಿಲ್ಲ. ಹೀಗಾಗಿ ಶಿಸ್ತುಬದ್ಧ ಜೀವನ, ಎಲ್ಲರನ್ನು ಸ್ನೇಹ-ಪ್ರೀತಿಯಿ ಂದ ಗಳಿಸಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರನಾಯ್ಕ್ ಮಾತನಾಡಿ ಇತ್ತೀಚಿನ ಮಕ್ಕಳಲ್ಲಿ ಮೊಬೈಲ್ ಹಾವಳಿ ಹೆಚ್ಚು ಆವರಿಸಿಕೊಂಡಿದೆ. ತಲೆತಗ್ಗಿಸಿ ಪುಸ್ತಕ ಓದಿದರೆ, ಭವಿಷ್ಯದಲ್ಲಿ ತಲೆಎತ್ತುವಂತೆ ಮಾಡುತ್ತದೆ. ಅದೇ ಮೊಬೈಲ್ ದಾಸರಾದರೆ ಜೀವನಮೂರ್ತಿ ತಲೆಬಗ್ಗಿಸಿಕೊಂಡೇ ಇರಬೇಕಾಗುತ್ತದೆ ಎಂ ದು ಎಚ್ಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತ ಎಂ. ಎನ್.ಷಡಕ್ಷರಿ ಯುವಜನರು ದೈಹಿಕವಾಗಿ, ಮಾನಸಿಕವಾಗಿ, ಸಾಮಾಜಿಕವಾಗಿ ಮತ್ತು ಆಧ್ಯಾತ್ಮಿಕವಾಗಿ ಅಭಿ ವೃದ್ಧಿ ಹೊಂದಲು ಸ್ಕೌಟ್ಸ್ ಮತ್ತು ಗೈಡ್ಸ್ ಸಹಾಯ ಮಾಡುವ ಜೊತೆಗೆ ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುತ್ತದೆ ಎಂದು ತಿಳಿಸಿದರು.

ಇದೇ ವೇಳೆ ಹನ್ನೊಂದು ಶಾಲೆಗಳಿಂದ ಸುಮಾರು ೭೦ಕ್ಕೂ ಹೆಚ್ಚು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿ ಗಳು ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿಹೆಚ್ಚು ಗಳಿಸಿದವರಿಗೆ ಅಭಿನಂದನೆ, ನೆನಪಿನ ಕಾಣಿಕೆ ಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ನೀಲಕಂಠ ಚಾರ್, ತರಬೇತಿ ಆಯುಕ್ತೆ ಸಂಧ್ಯಾರಾಣಿ, ಜಿಲ್ಲಾ ಸಂಘಟಕ ಕಿರಣ್‌ಕುಮಾರ್, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿ ತರಿದ್ದರು.

Disciplined life and social concern are necessary for children.

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...