Home namma chikmagalur ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಿ
namma chikmagalurchikamagalurHomeLatest News

ಸಾರ್ವಜನಿಕರಿಗೆ ತೊಂದರೆಯಾಗದಂತೆ ಪಡಿತರ ವಿತರಿಸಿ

Share
????????????????????????????????????
Share

ಚಿಕ್ಕಮಗಳೂರು: ಸರ್ಕಾರಿ ನ್ಯಾಯಬೆಲೆ ಅಂಗಡಿಗಳು ಸೂಕ್ತ ಸಮಯದಲ್ಲಿ ಕುಂದು ಕೊರತೆ ಆಗದಂತೆ ಪಡಿತರ ವಿತರಣೆ ಮಾಡಬೇಕು. ಕಾಳಸಂತೆಯಲ್ಲಿ ಅಕ್ಕಿ ಮಾರಾಟದಂತೆ ನಿಗಾವಹಿಸ ಬೇಕು ಎಂದು ತಾಲ್ಲೂಕು ಗ್ಯಾರಂಟಿ ಪ್ರಾಧಿಕಾರದ ಉಪಾಧ್ಯಕ್ಷ ಅನ್ಸರ್ ಆಲಿ ಹೇಳಿದರು.

ನಗರದ ಟಿ.ಎ.ಪಿ.ಸಿ.ಎಂ.ಎಸ್ ಸಭಾಂಗಣದಲ್ಲಿ ಶುಕ್ರವಾರ ಆಹಾರ ಮತ್ತು ನಾಗರೀಕ ಇಲಾಖೆಯಿಂದ ಆಯೋಜಿಸಿದ್ಧ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪಡಿತರ ಕಾರ್ಡಿನಲ್ಲಿ ೭೫ ವರ್ಷ ವಯೋಮಾನದ ವ್ಯಕ್ತಿಗೆ ಸರ್ಕಾರದ ಆದೇಶದಂತೆ ಮನೆಗೆ ನ್ಯಾಯ ಬೆಲೆ ಅಂಗಡಿದಾರರು ಪಡಿತರ ವಿತರಿಸುವ ಕೆಲಸ ಮಾಡಬೇಕು. ಪ್ರತಿ ಪಡಿತರ ಅಂಗಡಿಗಳಲ್ಲಿ ಸಮಯದ ಫಲಕ ಕಡ್ಡಾಯಗೊಳಿಸಿದರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

ಹೊರರಾಜ್ಯ ಅಥವಾ ಜಿಲ್ಲೆಗಳಿಂದ ಬಂದ ಕೂಲಿಕಾರ್ಮಿಕರಿಗೆ ಕಾರ್ಡ್‌ಗನುಸಾರ ನ್ಯಾಯಬೆಲೆ ಅಂಗ ಡಿಗಳು ಪಡಿತರ ವಿತರಿಸಲು ಮೊದಲ ಆದ್ಯತೆ ನೀಡಬೇಕು. ಈಚೆಗೆ ಕಾಳಸಂತೆಯಲ್ಲಿ ಅಕ್ಕಿ ಲಾರಿಯನ್ನುಪೊ ಲೀಸ್ ಇಲಾಖೆ ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದು, ಈ ಬಗ್ಗೆ ಅಂಗಡಿದಾರರು ಜಾಗೃತಿ ವಹಿಸು ವುದು ಕಡ್ಡಾಯ ಎಂದರು.

ನ್ಯಾಯಬೆಲೆ ಅಂಗಡಿ ಮಾಲೀಕರು ಪ್ರತಿ ತಿಂಗಳು ಮಾಸಿಕ ಸಭೆಗೆ ಹಾಜರಾಗಿ ಕುಂದುಕೊರತೆಗಳಿದ್ದಲ್ಲಿ ಸಭೆಯ ಗಮನಕ್ಕೆ ತಂದಲ್ಲಿ ಸೂಕ್ತ ಪರಿಹಾರಕ್ಕೆ ಶ್ರಮಿಸಲಾಗುವುದು ಎಂದ ಅವರು ಬಡ ವರ್ಗದ ಜನತೆಗೆ ಅಕ್ಕಿಯಲ್ಲಿ ಯಾವುದೇ ಮೋಸವಾಗದಂತೆ ಕಟ್ಟುನಿಟ್ಟಿನ ಕ್ರಮ ವಹಿಸುವುದು ಮಾಲೀಕರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಒಟ್ಟಾರೆ ನ್ಯಾಯಬೆಲೆ ಅಂಗಡಿಗಳು ಸರ್ಕಾರದ ಆದೇಶವನ್ನು ಪರಿಪಾಲಿಸಿ ಪಡಿತರದಾರರ ಸ್ನೇಹಿಯಾ ಗಿ ಕಾರ್ಯನಿರ್ವಹಿಸಬೇಕು. ಒಂದು ವೇಳೆ ಅಂಗಡಿ ಮಾಲೀಕರೇ ಸರ್ಕಾರದ ಅಕ್ಕಿಯನ್ನು ಕಾಳಸಂತೆಯಲ್ಲಿ ಮಾರಾಟಕ್ಕೆ ಮುಂದಾದರೆ ಕಾನೂನಾತ್ಮಕವಾಗಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಎಚ್ಚರಿಸಿದರು.

ಆಹಾರ ಮತ್ತು ನಾಗರೀಕ ಇಲಾಖೆ ಶಿರಸ್ತೇದಾರ್ ಜನಾರ್ಧನ್ ಮಾತನಾಡಿ ಪಡಿತರ ವಿತರಣೆಯಲ್ಲಿ ನ್ಯಾಯಬದ್ಧವಾಗಿ ಅಂಗಡಿದಾರರು ಕೆಲಸ ಮಾಡಬೇಕು. ತೂಕದಲ್ಲಿ ವ್ಯತ್ಯಾಸ, ಪಡಿತರದಾರರಿಂದ ದೂರುಗ ಳು ಬಂದಲ್ಲಿ ಇಲಾಖೆ ಸೂಕ್ತ ಕ್ರಮಕ್ಕೆ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ನಿರೀಕ್ಷಕರಾದ ಪ್ರಕಾಶ್, ತೇಜಸ್, ಶಶಿಕುಮಾರ್, ಲೋಹಿತ್, ಗ್ಯಾರಂಟಿ ಸದಸ್ಯರಾದ ನಾಗೇಶ್‌ರಾಜ್ ಅರಸ್, ರೋಹಿತ್, ಗೌಸ್‌ಮೊಹಿಯುದ್ದೀನ್ ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರು, ಕಾರ್ಯದರ್ಶಿಗಳು, ಚಿಲ್ಲರೆ ಗುತ್ತಿಗೆದಾರರು ಹಾಜರಿದ್ದರು.

Distribute rations without causing any inconvenience to the public.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...