Home namma chikmagalur ಈದ್ ಮಿಲಾದ್ ಹಬ್ಬ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕಲಿಕಾ ವಸ್ತು ವಿತರಣೆ
namma chikmagalurchikamagalurHomeLatest News

ಈದ್ ಮಿಲಾದ್ ಹಬ್ಬ ಪ್ರಯುಕ್ತ ವಿದ್ಯಾರ್ಥಿಗಳಿಗೆ ಕಲಿಕಾ ವಸ್ತು ವಿತರಣೆ

Share
Share

ಚಿಕ್ಕಮಗಳೂರು:  ಪ್ರವಾದಿ ಮೊಹಮ್ಮದ್ ಪೈಗಂಬರ್ ಜನ್ಮದಿನ ಹಾಗೂ ಈದ್ ಮಿಲಾದ್ ಹಬ್ಬದ ಅಂಗವಾಗಿ ಮೊಹರಂ ಚಾರಿಟೆಬಲ್ ಟ್ರಸ್ಟ್ ಹಾಗೂ ಮೊಹರಂ ಮುಜವರ್ ಕಮಿಟಿ ವತಿಯಿಂದ ನಗರದ ತಮಿಳು ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಲೇಖನಿ ಪರಿಕರ, ನೋಟ್‌ಪುಸ್ತಕ ವಿತರಿಸುವ ಮೂಲಕ ಶನಿವಾರ ಅರ್ಥಪೂರ್ಣವಾಗಿ ಆಚರಿಸಿದರು.

ಈ ವೇಳೆ ಮಾತನಾಡಿದ ಮೊಹರಂ ಮುಜಾವರ್ ಕಮಿಟಿ ಅಧ್ಯಕ್ಷ ವಜೀರ್ ಅಹಮದ್ ಈದ್ ಮಿಲಾದ್ ಹಬ್ಬವು ಮುಸಲ್ಮಾನರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು ಈ ದಿನವನ್ನು ಪ್ರವಾದಿಯವರ ದಯೆ, ಸಹಾನುಭೂತಿ ಮತ್ತು ಶಾಂತಿಯ ಬೋಧನೆಗಳನ್ನು ನೆನಪಿಸಿಕೊಳ್ಳುವ ಮತ್ತು ಗೌರವಿಸುವ ದಿನವೆಂ ದು ಪರಿಗಣಿಸಲಾಗಿದೆ ಎಂದರು.

ಸದಸ್ಯ ರಾಹಿಲ್ ಪಾ? ಮಾತನಾಡಿ ಪ್ರತಿಯೊಬ್ಬರೂ ಈದ್ ಮಿಲಾದ್ ಹಬ್ಬವನ್ನು ವಿವಿಧ ರೀತಿ ಯಲ್ಲಿ ಆಚರಿಸುತ್ತಾರೆ. ಆದರೆ ನಾವು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕಲಿಕಾ ವಸ್ತುಗಳನ್ನು ನೀಡುವುದರ ಮೂಲಕ ಈದ್ ಮಿಲಾದ್ ಹಬ್ಬವನ್ನು ಆಚರಿಸಿ ಪ್ರೇರಣೆಯಾಗುತ್ತಿದ್ದೇವೆ ಎಂದರು.

ಈ ಸಂದರ್ಭದಲ್ಲಿ ಕಮಿಟಿ ಸದಸ್ಯರಾದ ಅಝರ್ ಪಾ?, ಮೊಹಮ್ಮದ್ ಖಾಸಿಂ, ನಾಸಿರ್, ಸಲ್ಮಾನ್, ಇರ್ಫಾನ್, ಅಸ್ಲಾಂ, ಅಕ್ಬರ್, ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಿ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Distribution of learning materials to students on the occasion of Eid Milad

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...