Home namma chikmagalur ಪ್ರಕೃತಿ ವಿಕೋಪ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ
namma chikmagalurchikamagalurHomeLatest News

ಪ್ರಕೃತಿ ವಿಕೋಪ ತಡೆಗಟ್ಟಲು ಜಿಲ್ಲಾಡಳಿತ ಸನ್ನದ್ಧ

Share
Share

ಚಿಕ್ಕಮಗಳೂರು:  ಮಳೆಗಾಲದಲ್ಲಿ ಅನಾಹುತಗಳನ್ನು ತಡೆಗಟ್ಟಿ ಮಜಾಗ್ರತಾ ಕ್ರಮ ಕೈಗೊಳ್ಳಲು ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡಗನ್ನು ಸಚಿಸಲಾಗಿದ ಎಂದು ಜಿಲ್ಲಾ ಉಸ್ತುವಾರಿಯನ್ನೂ ಹೊಂದಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಮಳೆಗಾಲ ಆರಂಭವಾಗಿರುವ ಹಿನ್ನಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮಳೆ ಸೇರಿದಂತೆ ಪ್ರಕೃತಿ ವಿಕೋಪಳನ್ನು ಎದುರಿಸಲು ಜಿಲ್ಲಾಡಳಿತ ಸನ್ನದ್ಧವಾಗಿದೆ ಎಂದರು.

ಜಿಲ್ಲೆಯೂ ಸೇರಿದಂತೆ ರಾಜ್ಯದಲ್ಲಿ ಈ ಬಾರಿ ಅವಧಿಗೂ ಮುನ್ನ ಮಳೆ ಆರಂಭವಾಗಿದ್ದು, ಮಳೆ ಹಾಗೂ ಗಾಳಿಗೆ ಹಲವೆಡೆ ಅನಾಹುತ ಸಂಭವಿಸಿದೆ. ಗಾಳಿ ಮಳೆಗೆ ಜಿಲ್ಲೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ವ್ಯಕ್ತಿಗಳ ಕುಟುಂಬಗಳಿಗೆ ಪರಿಹಾರ ನೀಡಲಾಗಿದೆ ಎಂದರು.

ವಾಡಿಕೆಯ ಪ್ರಕಾರ ಜೂನ್‌ 5 ರಂದು ಮಳೆ ಆರಂಭವಾಗಬೇಕಾಗಿತ್ತು. ಆದರೆ, ಮೇ ತಿಂಗಳ ಮೊದಲ ವಾರದಿಂದಲೇ ಮಳೆ ಆರಂಭವಾಗಿದೆ. ಮಳೆ ಬಂದಿದ್ದರಿಂದ ಎಲ್ಲರಿಗೂ ಒಳ್ಳೆಯದಾಗಿದೆ. ಜತೆಗೆ ಅನಾಹುತವೂ ಸಂಭವಿಸಿದೆ. ಭಾರೀ ಮಳೆ ಆಗುವ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಒಳಗೊಂಡ ವಿಶೇಷ ತಂಡಗಳನ್ನು ರಚನೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.

ತಾವು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಈ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ತೆಗೆದುಕೊಳ್ಳಲಾಗಿದೆ. ಅತಿವೃಷ್ಠಿ ಎದುರಿಸಲು ಸಿಬ್ಬಂದಿಗಳ ಜತೆಗೆ ಬೇಕಾದ ಸಲಕರಣೆಗಳನ್ನು ಇಟ್ಟುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಜಿಲ್ಲಾಧಿಕಾರಿಗಳು, ಜಿಲ್ಲಾ ರಕ್ಷಣಾಧಿಕಾರಿ, ಜಿಲ್ಲಾ ಪಂಚಾಯ್ತಿ ಸಿಇಓ ಉಸ್ತುವಾರಿ ನೋಡಿಕೊಲ್ಳುತ್ತಿದ್ದಾರೆ ಎಂದರು.

ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಆಗಬಾರದೆಂಬ ಉದ್ದೇಶದಿಂದ ಲೈನ್‌ಮೆನ್‌ಗಳ ಜತೆಗೆ 110 ಮಂದಿ ಗ್ಯಾಂಗ್‌ ಮೆನ್‌ಗಳನ್ನು ಕೊಡಲಾಗಿದೆ. ಅವರಿಗೆ ಅಗತ್ಯ ವಾಹನಗಳನ್ನು ಸಹ ನೀಡಲಾಗಿದೆ. ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ನೋಡಲ್‌ ಅಧಿಕಾರಿಗಳ್ನು ನೇಮಿಸಿಕೊಳ್ಳಲಾಗಿದ್ದು, ದಿನದ 24 ಗಂಟೆ ಕೆಲಸ ಮಾಡುತ್ತಿದ್ದಾರೆ ಎಂದರು.

ರಾಷ್ಟ್ರೀಯ ಹೆದ್ದಾರಿ ಭಾಗದಲ್ಲಿ ಭೂ ಕುಸಿತ ಉಂಟಾಗುತ್ತಿದೆ. ಕೆಲವೆಡೆ ಮರಗಳನ್ನು ತೆಗೆಯಲು ಅರಣ್ಯ ಇಲಾಖೆಯವರು ಅನುಮತಿ ನೀಡುತ್ತಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸಭೆಯಲ್ಲಿ ಹೇಳಿದ್ದರು. ಹೀಗಾಗಿ ಕೆಲವು ಸಂದರ್ಭದಲ್ಲಿ ನಿಯಮಗಳನ್ನು ಸರಳಗೊಳಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರು, ಮಳೆಗಾಲ ಮುಗಿಯುವವರೆಗೆ ಅಧಿಕಾರಿಗಳು ಹೆಚ್ಚು ಎಚ್ಚರಿಕೆ ಮತ್ತು ಜವಾಬ್ದಾರಿಯಿಂದಕೆಲಸ ಮಾಡಬೇಕು ಎಂದು ಸೂಚಿಸಿದರು.

District administration prepared to prevent natural disasters

Share

Leave a comment

Leave a Reply

Your email address will not be published. Required fields are marked *

Don't Miss

ಕೊಪ್ಪ ತಾಲ್ಲೂಕಿನಲ್ಲಿ ಕಾಡುಕೋಣಗಳ ಉಪಟಳ

ಕೊಪ್ಪ: ಕಾಡುಕೋಣಗಳ ಉಪಟಳ ದಿನೇ ದಿನೇ ಮಿತಿ ಮೀರುತ್ತಿದ್ದು, ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಏಕಾಏಕಿ ಕಾಡುಕೋಣ ದಾಳಿಗೆ ಯತ್ನಿಸಿದ ಆತಂಕಕಾರಿ ಘಟನೆ ಕೊಪ್ಪ ಅರಣ್ಯ ವಲಯ ವ್ಯಾಪ್ತಿಯ...

ಕೆಂಪುಬಸ್ ಬಲೂ ಗ್ಯಾರಂಟಿ ಡೇಂಜರ್ ? ಡೇಂಜರ್ ? ಕೆಟ್ಟು ನಿಲ್ಲುವ ಬಸ್ಸುಗಳು

ಚಿಕ್ಕಮಗಳೂರು:  ಚಿಕ್ಕಮಗಳೂರು ಕೆ.ಎಸ್.ಆರ್.ಟಿ.ಸಿ ಬಸ್ಸುಗಳು ಬಲೂ ಡೇಂಜರ್ ಯಾವಾಗ ಎಲ್ಲಿ ಕೆಟ್ಟು ನಿಲ್ಲುತ್ತವೆ ಎಂದು ಪ್ರಯಾಣಿಕರು ದೂರುವುದು ಸಾಮಾನ್ಯವಾಗಿದ್ದು ಜೊತೆಗೆ ತಳ್ಳು ಮಾಡಲ್ ಐಸಾ ಎಂದು ಬಸ್ಸುಗಳನ್ನು ತಳ್ಳುವ ದೃಶ್ಯ ಸಾಮಾನ್ಯವಾಗಿ...

Related Articles

ಕಾಡಾನೆ ದಾಳಿ ಖಂಡಿಸಿ ನರಸಿಂಹರಾಜಪುರ ಬಂದ್‌ ಯಶಸ್ವಿ

ನರಸಿಂಹರಾಜಪುರ: ಬಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆನ್ನಂಗಿ ಗ್ರಾಮದ ರೈತ ಕೃಷ್ಣಮೂರ್ತಿ ಅವರು ಬುಧವಾರ ಕಾಡಾನೆ...

20 ವರ್ಷ ಅಧಿಕಾರದಲ್ಲಿದ್ದರೂ ಜಿಲ್ಲೆಯ ಅಭಿವೃದ್ಧಿಗೆ ರವಿ ಕೊಡುಗೆ ಏನು?

ಚಿಕ್ಕಮಗಳೂರು: ಸುಮಾರು 20 ವರ್ಷಗಳ ಕಾಲ ಶಾಸಕರಾಗಿ ಅಧಿಕಾರ ಅನುಭವಿಸಿರುವ ಸಿ.ಟಿ. ರವಿ ಅವರು ಜಿಲ್ಲೆಗೆ...

ಮನೆಗೆ ನುಗ್ಗಿ ₹3.44 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ಹಾಗೂ ನಗದು ಕಳವು

ಚಿಕ್ಕಮಗಳೂರು, ನ.20: ಮನೆಯಲ್ಲಿ ಯಾರೂ ಇಲ್ಲದ ಸಮಯವನ್ನು ಗಮನಿಸಿ ಕಳ್ಳರು ಮನೆಗೆ ನುಗ್ಗಿ ₹3.44 ಲಕ್ಷ...

ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವಿಗೆ ಶ್ರಮಿಸಬೇಕು

ಚಿಕ್ಕಮಗಳೂರು: ಮುಂಬರುವ ಗ್ರಾಮ ಪಂಚಾಯಿತಿ, ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳು ಪಕ್ಷದ ಸಂಘಟನೆಗೆ...