Home namma chikmagalur chikamagalur ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
chikamagalurHomeLatest Newsnamma chikmagalur

ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

Share
Share
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೬-೨೭ನೇ ಸಾಲಿನ ಪ್ರಕೃತಿ ವಿಕೋಪ ನಿರ್ವಹಣೆಯ ತಯಾರಿ ಕುರಿತು ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ  ಜಾನುವಾರುಗಳ ಮೇವಿಗೆ ತೊಂದರೆಯಾಗದಂತೆ ಯೋಜನೆ ರೂಪಿಸಬೇಕು. ಮೇವು ಜಿಲ್ಲೆಯಿಂದ ಬೇರೆ ಕಡೆಗೆ ಹೋಗದಂತೆ ನೋಡಿಕೊಳ್ಳಬೇಕು. ರೈತರಿಗೆ ಮೇವಿನ ಕಿಟ್‌ಗಳನ್ನು ವಿತರಿಸಲು ಕ್ರಮ ವಹಿಸಬೇಕಲ್ಲದೆ, ಅಮೃತ್‌ಮಹಲ್ ಕಾವಲಿನಲ್ಲಿ ಮೇವು ಬೆಳೆಯುವಂತೆ ತಿಳಿಸಿದರು.
ಪಶು ಸಂಗೋಪನಾ ಇಲಾಖೆ ಅಧಿಕಾರಿ ಮಾತನಾಡಿ, ಜಿಲ್ಲೆಯಲ್ಲಿ ೩೦ ವಾರಗಳಿಗೆ ಸಾಕಾಗುವಷ್ಟು ಮೇವು ಲಭ್ಯವಿದೆ. ಕೊಳವೆ ಬಾವಿ ಇರುವ ರೈತರಿಗೆ ಮೇವು ಕಿಟ್‌ಗಳನ್ನು ವಿತರಿಸಿ ಮೇವು ಬೆಳೆಯಲು ಕ್ರಮ ವಹಿಸಲಾಗುವುದು. ಮೇವಿಗೆ ಕೊರತೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಂ.ತಿರುಮಲೇಶ್ ಸಭೆಗೆ ಮಾಹಿತಿ ನೀಡಿ, ಜಿಲ್ಲೆಯಲ್ಲಿ ಈವರೆಗೆ ೫೬೪೭ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಕಳೆದ ವರ್ಷ ಇದೇ ಅವಧಿಗೆ ೧೭,೧೩೮ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗಿತ್ತು. ರೈತರು ಹೆಸರು, ಉದ್ದು, ಅಲಸಂದೆ, ನೆಲಗಡಲೆ, ಹತ್ತಿ, ಸೂರ್ಯಕಾಂತಿ, ಎಳ್ಳು, ಮುಸುಕಿನ ಜೋಳ ಬಿತ್ತನೆ ಮಾಡಿದ್ದಾರೆ. ಬಿತ್ತನೆಯಾಗಿರುವ ಪೈರು ಮಳೆಯ ಕೊರತೆಯಿಂದ ಒಣಗುತ್ತಿದೆ. ಬಿತ್ತನೆಯಾಗದ ಪ್ರದೇಶದಲ್ಲಿ ರೈತರು ಭೂಮಿ ಹದ ಮಾಡಿಕೊಂಡು ಬಿತ್ತನೆ ಮಾಡಲು ಮಳೆಗಾಗಿ ಕಾಯುತ್ತಿದ್ದಾರೆ. ಬಿತ್ತನೆ ಬೀಜ ಹಾಗೂ ರಸಗೊಬ್ಬರ ದಾಸ್ತಾನಿದ್ದು, ಯಾವುದೇ ಕೊರತೆ ಇರುವುದಿಲ್ಲ ಎಂದರು.
ಮತ್ತೆ ಮಾತನಾಡಿದ ಜಿಲ್ಲಾಧಿಕಾರಿಗಳು, ಬೆಳೆ ವಿಮೆ ಮಾಡಿಸಲು ರೈತರಿಗೆ ಪ್ರೇರಣೆ ನೀಡಬೇಕು. ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಬೇಕು. ಎಲ್ಲಾ ತಾಲ್ಲೂಕುಗಳಲ್ಲೂ ತಹಸೀಲ್ದಾರರು ಪ್ರತೀ ವಾರ ಸಭೆ ನಡೆಸಿ ಬಿತ್ತನೆ ವ್ಯವಸ್ಥೆ, ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಸಂಬಂಧಿಸಿದಂತೆ ಮಾಹಿತಿ ಒದಗಿಸಬೇಕು. ಶಾಲಾ ಕಟ್ಟಡಗಳು, ಅಂಗನವಾಡಿ, ವಿದ್ಯಾರ್ಥಿ ನಿಲಯಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕಟ್ಟಡಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳಬೇಕು. ಹಾನಿಯಾಗಿರುವ ಕಟ್ಟಡಗಳನ್ನು ದುರಸ್ತಿಪಡಿಸಲು ಕ್ರಮ ವಹಿಸಬೇಕು. ರಸ್ತೆ ಪಕ್ಕದಲ್ಲಿ ಮಳೆಯಿಂದ ರಸ್ತೆಯ ಇಕ್ಕೆಲಗಳಲ್ಲಿ ಗುಡ್ಡ ಕುಸಿತ ಉಂಟಾದರೆ, ಮರಗಳು ಬಿದ್ದು ಸಂಚಾರಕ್ಕೆ ಅಡಚಣೆಯಾಗುವ ಸಂಭಾವ್ಯ ಸ್ಥಳಗಳನ್ನು ಗುರುತಿಸಿ ಈಗಲೇ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ ಮಾತನಾಡಿ, ೨೦ ಗ್ರಾಮ ಪಂಚಾಯಿತಿ ವ್ಯಾಪ್ರಿಯ ೨೭ ಗ್ರಾಮಗಳು ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿದ್ದು, ೮ ಹಳ್ಳಿಗಳಿಗೆ ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಇವುಗಳಲ್ಲಿ ಮೂರು ಇಲಾಖಾ ಟ್ಯಾಂಕರ್‌ಗಳು, ಐದು ಖಾಸಗಿ ಟ್ಯಾಂಕರ್‌ಗಳಾಗಿವೆ. ಉಳಿದಂತೆ ೧೯ ಖಾಸಗಿ ಬೋರ್‌ವೆಲ್‌ಗಳನ್ನು ಪಡೆದು ನೀರು ಸರಬರಾಜು ನೀಡಲಾಗುತ್ತಿದೆ ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ನಂಜುಂಡೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪವಿಭಾಗಾಧಿಕಾರಿ ನಟೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಹೆಚ್.ಕೆ.ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮಂಜುನಾಥ್, ಎಲ್ಲಾ ತಾಲ್ಲೂಕುಗಳ ತಹಸೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.
District Collector instructs to take action to prevent shortage of fodder for cattle
Share

Leave a comment

Leave a Reply

Your email address will not be published. Required fields are marked *

Don't Miss

ಹೆತ್ತ ತಂದೆಯನ್ನೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ಮಗ

ತರೀಕೆರೆ: ಕುಡಿತದ ಚಟ ಹಾಗೂ ಮನೆಯಿಂದ ಹೊರದಬ್ಬುತ್ತಾರೆಂಬ ಆತಂಕಕ್ಕೆ ಹೆತ್ತ ತಂದೆಯನ್ನೇ ಮಗನೊಬ್ಬ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ವಡ್ಡರದಿಬ್ಬ ಗ್ರಾಮದಲ್ಲಿ ನಡೆದಿದೆ....

ಸೋಮಯ್ಯಾ ಗಣಾಚಾರಿಗೆ ಎಂಎಲ್‌ಸಿ ಸ್ಥಾನ ನೀಡುವಂತೆ ಒತ್ತಾಯ

ಚಿಕ್ಕಮಗಳೂರು: ವಿಜಯಪುರ ಜಿಲ್ಲೆಯ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖ ನಾಯಕ ಸೋಮಯ್ಯಾ ಗಣಾಚಾರಿ ಅವರಿಗೆ ವಿಧಾನ ಪರಿಷತ್ ಸದಸ್ಯತ್ವ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ 33ಕ್ಕೂ...

Related Articles

ಅದ್ದೂರಿ ಮೆರವಣಿಗೆ ಮೂಲಕ ಹಿಂದೂ ಮಹಾಗಣಪತಿ ವಿಸರ್ಜನೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಮುಖ ಗಣಪತಿಗಳಲ್ಲೊಂದಾದ ಚಿಕ್ಕಮಗಳೂರಿನ ಹಿಂದುಮಹಾ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆ ಶನಿವಾರ ವಿಜೃಂಭಣೆಯಿAದ ನೆರವೇರಿತು....

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ...

ಆಕ್ಸಿಸ್ ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ₹2.79 ಲಕ್ಷ ವಂಚನೆ

ಚಿಕ್ಕಮಗಳೂರು: ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಮಹಿಳೆಯೊಬ್ಬರಿಂದ ಕ್ರೆಡಿಟ್ ಕಾರ್ಡ್ ವಿವರ...