Home namma chikmagalur chikamagalur ಕೇಂದ್ರದ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ
chikamagalurHomeLatest Newsnamma chikmagalur

ಕೇಂದ್ರದ ಬಿಜೆಪಿ ಸರ್ಕಾರದ ಕ್ರಮ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Share
Share

ಚಿಕ್ಕಮಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯ್ತಿಗಳಿಗೆ ೧೫ನೇ ಹಣಕಾಸು ಯೋಜನೆ ಅನುದಾನ ಮತ್ತು ಉದ್ಯೋಗ ಖಾತ್ರಿ ಅನುದಾನ ಬಿಡುಗಡೆ ಮಾಡದ ಕೇಂದ್ರದ ಬಿಜೆಪಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಯಿತು.

ಆಜಾದ್ ಪಾರ್ಕ್ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಪಂಚರಾಜ್ಯ ಚುನಾವಣೆಗೆ ಮುನ್ನಾ ಒಂದು ರೀತಿ, ಚುನಾವಣೆ ಮುಗಿದ ನಂತರ ಮತ್ತೊಂದು ರೀತಿ ಕೇಂದ್ರ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ದೂರಿದರು.

೨೦೧೫ ರಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಎನ್‌ಆರ್‌ಇಜಿ ಯೋಜನೆಯ ಹೆಸರನ್ನೂ ಈಗಿನ ಕೇಂದ್ರದ ಬಿಜೆಪಿ ಸರ್ಕಾರ ಬದಲಾಯಿಸಿದೆ. ಅಲ್ಲದೆ ಅನುದಾನವನ್ನೂ ಕಡಿತಗೊಳಿಸಿದೆ. ಅವರಿಗೆ ಬಡವರು, ಕೂಲಿ ಕಾರ್ಮಿಕರ ಬಗ್ಗೆ ಕಾಳಜಿ ಇದ್ದಿದ್ದರೆ ಇಂತಹ ಕ್ರಮಕ್ಕೆ ಮುಂದಾಗುತ್ತಿರಲಿಲ್ಲ ಎಂದರು.

ಶೇ ೬೦:೪೦ ಅನುಪಾತದ ಉದ್ಯೋಗ ಖಾತ್ರಿ ಯೋಜನೆಯನ್ನು ಶೇ.೯:೧೦ ಅನುಪಾತಕ್ಕೆ ಇಂದಿನ ಬಿಜೆಪಿ ಸರ್ಕಾರ ಬದಲಿಸಿದೆ. ನಮ್ಮ ಜಿಲ್ಲೆಯಲ್ಲಿ ಜೆಜೆಎಂ ಮತ್ತು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ರೂ. ಹಣ ಬಿಡುಗಡೆ ಆಗಿಲ್ಲ. ಆದರೆ ರಾಜ್ಯ ಸರ್ಕಾರದ ಪಾಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಬಿಡುಗಡೆ ಮಾಡಿದ್ದಾರೆ ಎಂದರು.

ಪಂಚರಾಜ್ಯ ಚುನಾವಣೆ ಮುಗಿದ ಮರು ದಿನವೇ ವಾಣಿಜ್ಯ ಅನಿಲ ಸಿಲಿಂಡರ್ ಬೆಲೆಯನ್ನು ಕೇಂದ್ರ ಸರ್ಕಾರ ೯೦೦ ರೂ. ಹೆಚ್ಚಿಸಿದೆ. ಇದೀಗ ಪೆಟ್ರೋಲ್, ಡೀಸೆಲ್ ಬೆಲೆ ಲೀಟರ್‌ಗೆ ತಲಾ ೩ ರೂ. ಹೆಚ್ಚಿಸಲಾಗಿದೆ. ಕೇಂದ್ರದ ದ್ವಿಮುಖ ನೀತಿಯನ್ನು ಜನರು ಅರಿತುಕೊಳ್ಳಬೇಕು ಎಂದು ಹೇಳಿದರು.

ಎನ್‌ಆರ್‌ಇಜಿ ಯೋಜನೆಯಿಂದ ರೈತರಿಗೆ ಕೃಷಿ ಹೊಂಡ ಬದು ನಿರ್ಮಾಣ ಹೀಗೆ ಸಾಕಷ್ಟು ಅನುಕೂಲಗಳನ್ನು ಕಲ್ಪಿಸಲಾಗುತ್ತಿತ್ತು. ಆದರೆ ಈಗಿನ ಸರ್ಕಾರ ಎಲ್ಲಾ ವ್ಯಯಕ್ತಿಕ ಸೌಲಭ್ಯಗಳನ್ನು ತೆಗೆದುಹಾಕಿ ಯೋಜನೆಯನ್ನು ಬದಲಾಯಿಸಲಾಗಿದೆ. ಮುಂದೆ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ. ಆಗ ಈ ಯೋಜನೆಯನ್ನು ಮತ್ತೆ ಯಥಾ ಪ್ರಕಾರ ಜಾರಿಗೆ ತರಲಿದೆ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಬಂಡಾರಿ ಮಾತನಾಡಿ, ಪಂಚರಾಜ್ಯ ಚುನಾವಣೆ ಸಂದರ್ಭದಲ್ಲಿ ನೂರಾರು ರ್‍ಯಾಲಿಗಳಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಬೆಲೆ ಏರಿಕೆ ಬಗ್ಗೆಯಾಗಲಿ, ಮಿತ ವ್ಯಯದ ಬಗ್ಗೆಯಾಗಲಿ ಮಾತನಾಡಲೇ ಇಲ್ಲ. ಚುನಾವಣೆಗೆ ಮುನ್ನ ತಮ್ಮ ಬೆಂಗಾವಲು ವಾಹನಗಳನ್ನು ಕಡಿತ ಮಾಡಲಿಲ್ಲ. ಆದರೆ ಚುನಾವಣೆ ನಂತರ ಫಲಿತಾಂಶ ಬಂದ ನಂತರ ಬೆಲೆ ಏರಿಕೆ ಮಾಡುವ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ದೂರಿದರು.

ಕಾಂಗ್ರೆಸ್ ಪಕ್ಷ ಜಾರಿಗೆ ತಂದಿರುವ ಗ್ಯಾರಂಟಿ ಸೇರಿದಂತೆ ಹಲವು ಯೋಜನೆಗಳನ್ನು ಬಿಜೆಪಿ ಅನುಸರಿಸುತ್ತಿದೆ. ಆದರೆ ನರೇಗ ಯೋಜನೆಯ ಹೆಸರು ಬದಲಿಸುವ ಮತ್ತು ಅದರ ಸ್ವರೂಪ ಬದಲಿಸುವ ಅವಶ್ಯಕತೆ ಏನಿತ್ತು ಎಂದ ಅವರು ಅದರಲ್ಲಿ ಮಹಾತ್ಮ ಗಾಂಧಿ ಹೆಸರಿತ್ತು ಎನ್ನುವ ಒಂದೇ ಕಾರಣಕ್ಕೆ ಬದಲಾವಣೆ ಮಾಡಲಾಗಿದೆ ಎಂದು ದೂರಿದರು.

ಹೆಸರು ಬದಲಿಸಿದ ನಂತರವೂ ಒಂದು ರೂ. ಹಣ ಬಿಡುಗಡೆ ಮಾಡಿಲ್ಲ. ರಾಜ್ಯದಿಂದ ೫ ರಿಂದ ೬ ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹಿಸುತ್ತಿರುವ ಕೇಂದ್ರ ಸರ್ಕಾರ ನಮಗೆ ನ್ಯಾಯಯುತವಾಗಿ ಸಿಗಬೇಕಾದ ಅನುದಾನ ಕೊಡುತ್ತಿಲ್ಲ ಇದನ್ನು ಖಂಡಿಸುತ್ತೇವೆ ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಆಂಶುಮಂತ್ ಮಾತನಾಡಿ, ೧೫ ನೇ ಹಣಕಾಸು ಯೋಜನೆಯ ೩೫೦ ಕೋಟಿ ರೂ. ಅನುದಾನ ಈ ಜಿಲ್ಲೆಗೆ ಬರಬೇಕಿದೆ. ಅದನ್ನು ತರುವುದನ್ನು ಬಿಟ್ಟು ಬಿಜೆಪಿಯವರು ಕೇವಲ ಅಪ ಪ್ರಚಾರದಲ್ಲಿ ತೊಡಗಿದ್ದಾರೆ. ಪ್ರತಿ ಹಂತದಲ್ಲಿ ಬೆಲೆ ಏರಿಕೆ ಮಾಡಿ ಸಾಮಾನ್ಯರ ಬದುಕನ್ನು ಬಿಜೆಪಿ ನಾಶಪಡಿಸಿದೆ ಎಂದು ಆರೋಪಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಕ್ಷದ ಮುಖಂಡರುಗಳಾದ ಎಂ.ಎಲ್.ಮೂರ್ತಿ,  ಕೆಪೆಕ್ ಅಧ್ಯಕ್ಷ ಬಿ.ಹೆಚ್.ಹರೀಶ್, ಜಿ.ಪಂ. ಮಾಜಿ ಸದಸ್ಯ ಅನಂತು, ವಿವಿಧ ಬ್ಲಾಕ್ ಅಧ್ಯಕ್ಷರು ಮತ್ತಿತರರು ಭಾಗವಹಿಸಿದ್ದರು.

District Congress protests condemning the action of the BJP government at the center

Share

Leave a comment

Leave a Reply

Your email address will not be published. Required fields are marked *

Don't Miss

ಕಳವಾದ ₹11 ಲಕ್ಷ ಮೌಲ್ಯದ ಚಿನ್ನ-ಬೆಳ್ಳಿ ವಶ

ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಮೆಣಸೆ ಗ್ರಾಮದ ಕನ್ಯಾಕುಮಾರಿ ದೇವಸ್ಥಾನ ಹಾಗೂ ಯಡದಳ್ಳಿಯ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನಗಳಲ್ಲಿ ಒಡವೆ ಹಾಗೂ ಹಣ ಕಳ್ಳತನ ಮಾಡಿದ್ದ ಇಬ್ಬರು ಅಂತರ್ ಜಿಲ್ಲಾ ಆರೋಪಿಗಳನ್ನು...

ಐಡಿಎಸ್‌ಜಿ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣ

ಚಿಕ್ಕಮಗಳೂರು: ಶಿಕ್ಷಣ, ಜೀವನದ ಒಂದು ಭಾಗ. ಇದರ ಬಗ್ಗೆ ವಿದ್ಯಾರ್ಥಿಗಳು ಅರಿಯಬೇಕು, ಪಠ್ಯದ ಜತೆಗೆ, ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೋಳ್ಳುವುದರಿಂದ ಜ್ಞಾನಾರ್ಜನೆಗೆ ಸಹಕಾರಿ ಆಗಲಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಅವರು ಹೇಳಿದರು. ನಗರದ...

Related Articles

ಶಾಸಕ ಎಚ್.ಡಿ.ತಮ್ಮಯ್ಯರಿಂದ ಸೈಕಲ್ ತುಳಿ ಸಮಸ್ಯೆ ತಿಳಿ ಕಾರ್ಯಕ್ರಮ

ಚಿಕ್ಕಮಗಳೂರು:  ನಗರದ ವಿವಿಧೆಡೆ ಶಾಸಕ ಎಚ್.ಡಿ.ತಮ್ಮಯ್ಯ ಅವರು ಅಧಿಕಾರಿಗಳೊಂದಿಗೆ ಹಾಗೂ ಸ್ಥಳೀಯ ನಗರಸಭಾ ಸದಸ್ಯರೊಂದಿಗೆ ಶುಕ್ರವಾರ...

ಗ್ರಾಮದ ರಸ್ತೆ ಬಿಡಿಸಿಕೊಡಲು ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರು:  ಚಿಕ್ಕಹಳ್ಳ ಗ್ರಾಮದ ರಸ್ತೆಯನ್ನು ಪ್ರಭಾವಿ ವ್ಯಕ್ತಿಗಳು ಮುಟ್ಟುಗೋಲು ಹಾಕಿ ಕೊಂಡಿರುವ ನಡೆಯನ್ನು ಖಂಡಿಸಿ ಶುಕ್ರವಾರ...

ಶಿಕ್ಷಕರು-ಉಪನ್ಯಾಸಕರ ನೇಮಕ ಮಾಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು

ಚಿಕ್ಕಮಗಳೂರು- ಸಂವಿಧಾನ ಬದ್ಧ ಹಕ್ಕುಗಳಾದ ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ...

ಬೈಕ್‌ಗೆ ಟಿಪ್ಪರ್ ಡಿಕ್ಕಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಮೂಡಿಗೆರೆ: ಅತಿ ವೇಗದಲ್ಲಿ ಬಂದ ಟಿಪ್ಪರ್ ಬೈಕ್‌ಗೆ ಬಲವಾಗಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ...