Home namma chikmagalur ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಜಿಲ್ಲಾ ಬೆಳೆಗಾರರ ಸಂಘ ಆಗ್ರಹ
namma chikmagalurchikamagalurHomeLatest News

ಜಂಟಿ ಸಮೀಕ್ಷೆ ನಡೆಸಿ ಬೆಳೆ ಪರಿಹಾರ ನೀಡಲು ಜಿಲ್ಲಾ ಬೆಳೆಗಾರರ ಸಂಘ ಆಗ್ರಹ

Share
Share

ಚಿಕ್ಕಮಗಳೂರು: ರಾಜ್ಯಸರ್ಕಾರ ತೋಟಗಾರಿಕೆ, ಕೃಷಿ ಮತ್ತು ಕಾಫಿಮಂಡಳಿ ಅಧಿಕಾರಿಗಳನ್ನೊಳಗೊಂಡ ಜಂಟಿ ಸಮೀಕ್ಷೆ ನಡೆಸಿ ಆಯಾ ತಾಲ್ಲೂಕು ವ್ಯಾಪ್ತಿಯಲ್ಲಿ ಬೆಳೆ ನಷ್ಟವನ್ನು ಅಂದಾಜಿಸಿ ಬೆಳೆಗಾರರಿಗೆ ರಾಷ್ಟ್ರೀಯ ವಿಪತ್ತು ನಿಧಿ ಮತ್ತು ರಾಜ್ಯ ವಿಪತ್ತು ನಿಧಿಯಿಂದ ಪರಿಹಾರ ನೀಡಲು ಸೂಚಿಸಬೇಕೆಂದು ಜಿಲ್ಲಾ ಬೆಳೆಗಾರರ ಸಂಘ ಒತ್ತಾಯಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಸಂಘದ ಜಿಲ್ಲಾಧ್ಯಕ್ಷ ಕೆ.ಯು. ರತೀಶ್ ಕುಮಾರ್ ಬೆಳೆ ನಷ್ಟವಾಗಿರುವ ತೋಟಗಳಿಗೆ ಅಧಿಕಾರಿಗಳನ್ನು ಕರೆದೊಯ್ಯಲು ಸಿದ್ದವಿದ್ದು, ಇನ್ನೂ ಎರಡು ತಿಂಗಳು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ ಎಂದು ಹೇಳಿದರು.

ಕಳೆದ ನಾಲ್ಕೈದು ವರ್ಷಗಳಿಂದ ಅತಿವೃಷ್ಟಿ ಹಾನಿಯಿಂದಾಗಿ ತೊಂದರೆ ಅನುಭವಿಸುತ್ತಿದ್ದು, ಇದರ ಜೊತೆಗೆ ಗಾಯದ ಮೇಲೆ ಬರೆ ಎಳೆದಂತೆ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ಬ್ಯಾಂಕ್‌ಗಳು ಸರ್ಫೇಸಿ ಕಾಯ್ದೆ ಅನ್ವಯ ಆನ್ಲೈನ್ ಮೂಲಕ ಹರಾಜು ಮಾಡಲು ಮುಂದಾಗುತ್ತಿರುವ ಕ್ರಮವನ್ನು ಖಂಡಿಸಿದರು.

ಈಗ ನಡೆಯುತ್ತಿರುವ ಮುಂಗಾರು ಸಂಸತ್ ಅಧಿವೇಶನದಲ್ಲಿ ಕಾಫಿ ಬೆಳೆಯುವ ಪ್ರದೇಶದ ಮೂರು ಜಿಲ್ಲೆಗಳ ಸಂಸದರು ಒಟ್ಟಾಗಿ ಕಾಫಿಗೆ ಸರ್ಫೇಸಿ ಕಾಯ್ದೆ ಅನ್ವಯವಾಗದಂತೆ ಲಿಖಿತ ರೂಪದಲ್ಲಿ ಆದೇಶಿಸಬೇಕೆಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹಾಗೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಒತ್ತಾಯಿಸಲು ಬೆಳೆಗಾರರ ನಿಯೋಗ ಹೋಗಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಕಾಫಿ ಬೆಳೆಗಾರರ ಪ್ರದೇಶಗಳಾದ ಮೂಡಿಗೆರೆ ತಾಲ್ಲೂಕು ಹಾಗೂ ಚಿಕ್ಕಮಗಳೂರು ತಾಲ್ಲೂಕಿನ ಖಾಂಡ್ಯ, ಜಾಗರ,ಆವತಿ, ವಸ್ತಾರೆ, ಆಲ್ದೂರು ಮತ್ತು ಕಸಬಾ ಹೋಬಳಿಗಳು, ಕೊಪ್ಪ, ಶೃಂಗೇರಿ, ಎನ್.ಆರ್. ಪುರ ತಾಲ್ಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಕಾಫಿ, ಕಾಳುಮೆಣಸು, ಅಡಿಕೆ ಮುಂತಾದ ಬೆಳೆಗಳು ನೆಲಕಚ್ಚಿ ನಷ್ಟ ಅನುಭವಿಸುತ್ತಿವೆ ಎಂದು ವಿವರಿಸಿದರು.

ಈಗ ಕಾಫಿಗೆ ಉತ್ತಮ ಬೆಲೆ ಬಂದಿದ್ದರೂ ಸೂರ್ಯನ ಕಿರಣಗಳಿಲ್ಲದೆ ವ್ಯಾಪಕ ಮಳೆಯಾಗಿ ಕಪ್ಪು ಕೊಳೆರೋಗ ಬಾದಿಸುತ್ತಿರುವುದರಿಂದ ಫಸಲು ನಾಶವಾಗುತ್ತಿದ್ದು, ಬೆಳೆಗಾರರನ್ನು ಸಂಕಷ್ಟಕ್ಕೀಡುಮಾಡಿದೆ. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ಮಲೆನಾಡು ಭಾಗದಲ್ಲಿ ಶೇ.೯೦ ರಷ್ಟು ಕಾಳುಮೆಣಸಿನ ಫಸಲು ಇಲ್ಲವಾಗಿದೆ ಎಂದು ತಿಳಿಸಿದರು.

ಸಂಘದ ಉಪಾಧ್ಯಕ್ಷ ಬಿ.ಆರ್. ಬಾಲಕೃಷ್ಣ ಮಾತನಾಡಿ, ಕಾಡಾನೆ, ಕಾಡುಪ್ರಾಣಿಗಳು ಮತ್ತು ಮಾನವ ಸಂಘರ್ಷ ದಿನೇ ದಿನೆ ಹೆಚ್ಚಾಗುತ್ತಿರುವುದರ ಜೊತೆಗೆ ಜೀವಹಾನಿಯೂ ಸಂಭವಿಸುತ್ತಿದೆ. ಕಾಫಿ ತೋಟಗಳಲ್ಲಿ ಬೀಡುಬಿಟ್ಟಿರುವ ಆನೆಗಳನ್ನು ಇನ್ನಷ್ಟು ಪ್ರಾಣಹಾನಿ ಸಂಭವಿಸುವ ಮುಂಚೆ ಸೆರೆಹಿಡಿದು ಸ್ಥಳಾಂತರಿಸಬೇಕೆಂದು ಒತ್ತಾಯಿಸಿದರು.

ಕಾಫಿ ಬೆಳೆಗಾರರಿಗೆ ಪೂರಕವಾಗಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೂ ಸಂಘ ಮುಂದಾಗಿದೆ. ಕಾಡುಕೋಣ, ಕಾಡುಹಂದಿ, ಕೋತಿಗಳ ಕಾಟದಿಂದಾಗಿ ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಭಯಭೀತರಾಗಿ ಇಂಜರಿಯುತ್ತಿದ್ದಾರೆ. ಸರ್ಕಾರ ನಿರ್ಲಕ್ಷ ವಹಿಸದೆ ಆನೆ ಕಾರಿಡಾರ್ ಸ್ಥಾಪನೆ ಸೇರಿದಂತೆ ಕಾಡುಪ್ರಾಣಿಗಳ ತೊಂದರೆಗೆ ಶಾಶ್ವತ ಪರಿಹಾರ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಕೆರೆಮಕ್ಕಿ ಮಹೇಶ್ ಉಪಸ್ಥಿತರಿದ್ದರು.

District Growers Association demands joint survey and crop compensation

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...