Home ಜಿಲ್ಲೆಯಲ್ಲಿ ಮಳೆಯ ಹಾನಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಅಧಿಕಾರಿಗಳ ಸಭೆ
HomechikamagalurLatest Newsnamma chikmagalur

ಜಿಲ್ಲೆಯಲ್ಲಿ ಮಳೆಯ ಹಾನಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರಿಂದ ವಿವಿಧ ಅಧಿಕಾರಿಗಳ ಸಭೆ

Share
Share

ಚಿಕ್ಕಮಗಳೂರು: ಗಾಳಿ ಮಳೆಯಿಂದಾಗಿ ಮರಗಳು ರಸ್ತೆ ಮೇಲೆ ಬಿದ್ದು ಜೀವ ಹಾನಿ ಸೇರಿದಂತೆ ಯಾವುದೇ ಅವಘಡ ಸಂಭವಿಸಿದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಂಗಣದಲ್ಲಿ ಶನಿವಾರ ಸಂಜೆ ಮಳೆಯಿಂದ ಆದ ಹಾನಿಗೆ ಸಂಬಂಧಪಟ್ಟಂತೆ ವಿವಿಧ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ರಸ್ತೆ ಪಕ್ಕದಲ್ಲಿರುವ ಮರಗಳ ಟೊಂಗೆ ಕತ್ತರಿಸಲು ಹಾಗೂ ಬೀಳುವ ಸ್ಥಿತಿಯಲ್ಲಿರುವ ಮರಗಳನ್ನು ತೆರವುಗೊಳಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ನೀಡುತ್ತಿಲ್ಲ ಎಂಬ ದೂರು ಕೇಳಿ ಬರುತ್ತಿದೆ. ಹೀಗಾದರೆ ಮರ ಬಿದ್ದು ಯಾವುದೇ ಅನಾಹುತ ಸಂಭವಿಸಿದರೆ ಅದಕ್ಕೆ ಅರಣ್ಯ ಇಲಾಖೆಯವರೇ ಹೊಣೆಯಾಗುತ್ತಾರೆ ಎಂದರು.

ರಸ್ತೆ ಬದಿಯ ಮರಗಳ ರೆಂಬೆ ಕತ್ತರಿಸಲು ಅನುಮತಿ ನೀಡದ ಅರಣ್ಯ ಇಲಾಖೆ ಅಧಿಕಾರಿಗಳು ಇಲ್ಲಸಲ್ಲದ ಸಬೂಬು ಹೇಳುತ್ತಾರೆ. ಅವರಿಗೆ ಬೇಕಾದ ಕಡೆ ಕಾನೂನು ಸಡಿಲಗೊಳ್ಳುತ್ತವೆ ಎಂಬುದು ನನಗೆ ಗೊತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಲೆನಾಡು ಭಾಗದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ರಾತ್ರಿ ವೇಳೆ ವಾಹನ ಸಂಚಾರದ ಸಂದರ್ಭದಲ್ಲಿ ಮರಗಳು ಬೀಳುವುದು ವಾಹನ ಚಾಲಕರ ಗಮನಕ್ಕೆ ಬರುವುದಿಲ್ಲ. ಹೀಗಾಗಿ ಅಪಾಯ ಸಂಭವಿಸುವ ಸಾಧ್ಯತೆಯಿರುವ ರಸ್ತೆ ಪಕ್ಕದ ಮರಗಳ ರೆಂಬೆ ಕತ್ತರಿಸಬೇಕು. ಇದು ಸಾಧ್ಯವಾಗದೇ ಇದ್ದರೆ ಅರಣ್ಯ ಇಲಾಖೆಯವರು ದೆಹಲಿಗೆ ಹೋಗಲಿ ಎಂದು ಕಿಡಿಕಾರಿದರು.

ಗಾಳಿ ಮಳೆಯಿಂದಾಗಿ ಜಿಲ್ಲೆಯಲ್ಲಿ ವಿದ್ಯುತ್ ಕಂಬಗಳು ಬಿದ್ದಾಗ ಕೂಡಲೇ ಅವುಗಳನ್ನು ಸರಿಪಡಿಸುವ ಕೆಲಸ ಮಾಡಬೇಕು. ಜೊತೆಗೆ ಬಗ್ಗಿರುವ ಕಂಬಗಳನ್ನು ಸರಿಪಡಿಸಬೇಕು. ವಿದ್ಯುತ್ ಕಂಬ ಹಾಗೂ ತಂತಿ ಮೇಲೆ ಮರ ಬೀಳುವ ಸಾಧ್ಯತೆ ಇದ್ದಲ್ಲಿ ಅವುಗಳನ್ನು ತೆರವುಗೊಳಿಸಬೇಕು ಎಂದು ಎಂದು ಸಚಿವ ಕೆಜೆ ಜಾರ್ಜ್ ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಮೆಸ್ಕಾಂ ಅಧಿಕಾರಿಗಳು ರಸ್ತೆ ಪಕ್ಕದಲ್ಲಿ ಲೈನ್ ಮೇಲೆ ಬೀಳುವ ಹಂತದಲ್ಲಿರುವ ಮರಗಳ ರೆಂಬೆ ಕತ್ತರಿಸಲು ಸಮಸ್ಯೆಯಿಲ್ಲ. ಆದರೆ ಎಸ್ಟೇಟ್ ನಲ್ಲಿ ಹಾದು ಹೋಗಿರುವ ಲೈನ್ ಬಳಿ ಇರುವ ಮರಗಳ ರೆಂಬೆ ಕತ್ತರಿಸುವುದು ಸಾಧ್ಯವಾಗುತ್ತಿಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.

ಈ ವೇಳೆ ಮಾತನಾಡಿದ ಶಾಸಕ ಎಚ್.ಡಿ.ತಮ್ಮಯ್ಯ, ಜಿಲ್ಲೆಯಲ್ಲಿ ಲೈನ್ ಮ್ಯಾನ್ ಗಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ವಿದ್ಯುತ್ ಕಂಬಗಳು ಬಿದ್ದಾಗ ಶೀಘ್ರವೇ ಅವುಗಳನ್ನು ದುರಸ್ತಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಜಿಲ್ಲೆಗೆ ಹೆಚ್ಚುವರಿ ಲೈನ್ ಮ್ಯಾನ್ಗಳನ್ನು ನೀಡಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಸಿದ ಸಚಿವ ಕೆ.ಜೆ.ಜಾರ್ಜ್, ಲೈನ್ ಮಂಗಳ ನೇಮಕಾತಿ ಅಂತಿಮ ಹಂತದಲ್ಲಿದೆ. ನೇಮಕಾತಿ ನಡೆದು ಅವರು ಕರ್ತವ್ಯಕ್ಕೆ ಹಾಜರಾದಾಕ್ಷಣ ಸಮಸ್ಯೆ ಪರಿಹಾರವಾಗಲಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಮುಂಗಾರುಪೂರ್ವ ಹಾಗೂ ಮುಂಗಾರು ಮಳೆ ಆರಂಭದ ವೇಳೆ ಒಟ್ಟು 24 ಮನೆಗಳು ಉರುಳಿದ್ದು, ಎಲ್ಲರಿಗೂ ಪರಿಹಾರ ನೀಡಲಾಗಿದೆ. ಜೊತೆಗೆ 66 ಮನೆಗಳಿಗೆ ಭಾಗಶಹ ಹಾನಿಯಾಗಿದ್ದು ಅವರಿಗೂ ಪರಿಹಾರ ನೀಡಲಾಗಿದೆ ಎಂದು ಕಂದಾಯ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಶಾಸಕ ಜಿ.ಎಚ್. ಶ್ರೀನಿವಾಸ್, ಟಿ.ಡಿ.ರಾಜೇಗೌಡ, ಡಿಸಿ ಮೀನಾ ನಾಗರಾಜ್, ಜಿಪಂ ಸಿಇಒ ಎಚ್.ಎಸ್.ಕೀರ್ತನಾ, ಎಸ್ಪಿ ವಿಕ್ರಮ ಅಮಟೆ, ಎಡಿಸಿ ನಾರಾಯ ರಡ್ಡಿ ಕನಕರಡ್ಡಿ, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಸುಜಾತ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು

District in-charge minister holds meeting with various officials regarding rain damage in the district

 

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....