Home namma chikmagalur ಜಿಲ್ಲಾ ಉಸ್ತುವಾರಿ ಸಚಿವರಿಂದ ಎತ್ತಿನ ಹೊಳೆ ಯೋಜನೆ ನೀರಿನಲ್ಲಿ ರಾಜಕೀಯ
namma chikmagalurchikamagalurHomeLatest News

ಜಿಲ್ಲಾ ಉಸ್ತುವಾರಿ ಸಚಿವರಿಂದ ಎತ್ತಿನ ಹೊಳೆ ಯೋಜನೆ ನೀರಿನಲ್ಲಿ ರಾಜಕೀಯ

Share
Share

ಚಿಕ್ಕಮಗಳೂರು: ಜಿಲ್ಲೆಗೆ ಶಾಶ್ವತವಲ್ಲದ ಎತ್ತಿನ ಹೊಳೆ ಯೋಜನೆ ನೀರಿನಲ್ಲಿ ರಾಜಕೀಯ ಮಾಡಲು ಹೊರಟಿರುವ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು ಈ ಯೋಜನೆ ನೀರನ್ನು ಜಿಲ್ಲೆಗೆ ಖಾಯಂಗೊಳಿಸಲು ಪ್ರಯತ್ನಿಸಲಿ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲ್ಮರುಡಪ್ಪ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎತ್ತಿನ ಹೊಳೆ ನೀರನ್ನು ಪ್ರಾಯೋಗಿಕವಾಗಿ ಎತ್ತಿ ನಾಲೆಗಳಿಗೆ ಬಿಡಬೇಕಾಗಿತ್ತು. ಆದರೆ ನಾಲೆಗಳ ಕಾಮಗಾರಿ ನಡೆಯದೆ ಇರುವುದರಿಂದ ಈ ನೀರನ್ನು ಮೂಲ ಯೋಜನೆಯಲ್ಲಿರದ ಬೆಳವಾಡಿ ಮತ್ತು ದೇವನೂರು ಕೆರೆಗಳಿಗೆ ಹರಿಸಲಾಗುತ್ತಿದೆ ಎಂದು ಹೇಳಿದರು.

ಈ ನೀರನ್ನು ಶಾಶ್ವತವಾಗಿ ಈ ಭಾಗದ ಕೆರೆಗಳಿಗೆ ಹರಿಸಿ ಸಚಿವರು ತಮ್ಮ ಬದ್ಧತೆಯನ್ನು ಪ್ರದರ್ಶನ ಮಾಡಬೇಕೆ ವಿನಾ ಸುಳ್ಳು ಹೇಳಿ ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಬಿಜೆಪಿ ಅಧಿಕಾರದಲ್ಲಿದ್ದಾಗ ಆರಂಭಿಸಿದ ರಣಘಟ್ಟ ಯೋಜನೆ ಅಂತಿಮ ಹಂತದಲ್ಲಿದ್ದು ಅದನ್ನು ಶೀಘ್ರವಾಗಿ ಪೂರ್ಣಗೊಳಿಸಿ ಬದ್ದತೆ ತೋರಲಿ ಎಂದು ಒತ್ತಾಯಿಸಿದರು.

ಜಿಲ್ಲಾ ಸಚಿವರು ಬಿಜೆಪಿಯವರಿಗೆ ಮಾಹಿತಿ ಕೊರತೆ ಇದೆ ಎಂದು ಹೇಳಿದ್ದಾರೆ. ಜಿಲ್ಲೆಯಲ್ಲಿ ಒಂದೇ ಒಂದು ಮನೆ, ನಿವೇಶನ ನೀಡಿಲ್ಲ, ಬಿಪಿಎಲ್ ಕಾರ್ಡ್ ನೀಡಿಲ್ಲ, ನಮೂನೆ ೫೦,೫೩, ೫೭ ರಡಿ ಭೂಮಿ ಹಕ್ಕು ನೀಡಿಲ್ಲ ಎಂದು ನಾವು ಆರೋಪಿಸಿದ್ದೆವು. ಆದರೆ, ಸಚಿವರು ಈ ಪ್ರಶ್ನೆಗಳಿಗೆ ಉತ್ತರಿಸುವಲ್ಲಿ ವಿಫಲರಾಗಿದ್ದಾರೆ ಎಂದು ದೂರಿದರು.

ನಮ್ಮ ಸರಕಾರ ಇದ್ದಾಗ ಭದ್ರಾ ಉಪಕಣಿವೆ ಯೋಜನೆಯಲ್ಲಿ ೧೯೭ ಕೆರೆಗಳಿಗೆ ಅಂದಾಜು ೧೧೮೧.೮೦ ಕೋಟಿ ರೂ. ಮಂಜೂರು ಮಾಡಿಸಿ ಕಡೂರು, ತರೀಕೆರೆ ಮತ್ತು ಚಿಕ್ಕಮಗಳೂರು ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಯನ್ನು ಮಂಜೂರು ಮಾಡಿಸಿ ಮೊದಲ ಹಂತದ ಕಾಮಗಾರಿ ಮುಗಿದಿದೆ. ೨ನೇ ಹಂತದ ಕಾಮಗಾರಿ ಕುಂಟುತ್ತಾ ಸಾಗಿದೆ. ಅದಕ್ಕೆ ಬೇಗ ಹಣ ಮಂಜೂರು ಮಾಡಿಸಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲು ಸಚಿವರು ಮತ್ತು ಶಾಸಕರು ಇಚ್ಛಾಶಕ್ತಿ ತೋರಬೇಕು ಎಂದು ಆಗ್ರಹಿಸಿದರು.

ಮೊನ್ನೆ ಬೆಳವಾಡಿ ಕೆರೆಗೆ ಬಾಗಿನ ಬಿಟ್ಟು ಕಾರ್ಯಕ್ರಮ ಜಿಲ್ಲಾಡಳಿತ ಆಯೋಜಿಸಿದ್ದೋ ಅಥವಾ ಕಾಂಗ್ರೆಸ್ ಆಯೋಜಿಸಿದ್ದೋ ಎಂಬುದನ್ನು ಜಿಲ್ಲಾಧಿಕಾರಿಗಳು ಸ್ಪಷ್ಟಪಡಿಸಬೇಕಿದೆ. ಜಿಲ್ಲಾಡಳಿತ ಆಯೋಜಿಸಿದ್ದರೆ ಕಾಂಗ್ರೆಸ್ ಕಾರ್ಯಕತರು ವೇದಿಕೆ ಹಂಚಿಕೊಂಡಿದ್ದು ಏಕೆ ಎಂದು ಪ್ರಶ್ನಿಸಿದ ಅವರು, ಕಾಂಗ್ರೆಸ್ ಆಯೋಜಿಸಿದ್ದರೆ ಅಧಿಕಾರಿಗಳು ವೇದಿಕೆ ಮೇಲೆ ಕೂತಿದ್ದೇಕೆ ಎಂಬುದನ್ನು ಅವರು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ವಿಜಯ್‌ಕುಮಾರ್, ಹಿರೇಮಗಳೂರುಪುಟ್ಟಸ್ವಾಮಿ, ದಿನೇಶ್‌ಕೋಟೆ, ಸಚಿನ್‌ಗೌಡ, ಕೇಶವ್ ಇದ್ದರು.

District in-charge minister throws politics into Yettina Hole project water

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...