Home ಸಿ.ಟಿ.ರವಿ ಕ್ಷಮೆಗೆ ಜಿಲ್ಲಾ ಸವಿತಾ ಸಮಾಜ ಆಗ್ರಹ
HomechikamagalurLatest News

ಸಿ.ಟಿ.ರವಿ ಕ್ಷಮೆಗೆ ಜಿಲ್ಲಾ ಸವಿತಾ ಸಮಾಜ ಆಗ್ರಹ

Share
Share

ಚಿಕ್ಕಮಗಳೂರು: ವೈದ್ಯಕೀಯ ಕಾಲೇಜು ಮೂಲಸೌಕರ್ಯ ಪರಿಶೀಲನೆ ವೇಳೆ ಸವಿತಾ ಸಮಾಜಕ್ಕೆ ಅವಮಾನ ಮಾಡುವ ಪದವನ್ನು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಬಳಸಿದ್ದು, ಕೂಡಲೇ ಕ್ಷಮೆ ಕೇಳಬೇಕು ಎಂದು ಜಿಲ್ಲಾ ಸವಿತಾ ಸಮಾಜ ಆಗ್ರಹಿಸಿದೆ.

‘ನಾಲ್ಕು ಬಾರಿ ಶಾಸಕರಾಗಿ, ಸಚಿವರಾಗಿ, ಬಿಜೆಪಿಯ ರಾಜ್ಯ, ರಾಷ್ಟ್ರ ಮಟ್ಟದ ಹುದ್ದೆಗಳ ಜವಾಬ್ದಾರಿಗಳನ್ನು ಸಿ.ಟಿ.ರವಿ ಅವರು ನಿರ್ವಹಿಸಿದ್ದಾರೆ. ಎಲ್ಲಾ ವಿಷಯಗಳ ಅರಿವು ಹೊಂದಿರುವ ಅವರೇ ಈ ರೀತಿ ಮಾತನಾಡಿದರೆ ತಿಳಿವಳಿಕೆ ಇಲ್ಲದವರ ಪಾಡೇನು’ ಎಂದು ಸವಿತಾ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ವಿಶ್ವನಾಥ ಸಂಕಲ್ಪ ಪ್ರಶ್ನಿಸಿದ್ದಾರೆ.

‘ಸಿ.ಟಿ.ರವಿ ಅವರು ಸಮಾಜದೊಂದಿಗೆ ಸಲುಗೆ ಹೊಂದಿದ್ದಾರೆ. ಅವರೇ ಈ ರೀತಿಯ ಪದ ಬಳಸಿರುವುದರಿಂದ ಸಮಾಜಕ್ಕೆ ನೋವಾಗಿದೆ. ಅಚಾತುರ್ಯ ಅರಿತು ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು. ಇನ್ನಾದರೂ ನಿಷೇಧಿತ ಪದ ಬಳಸದಂತೆ ಕಠಿಣ ಕಾನೂನು ತರುವಂತೆ ಸದನದಲ್ಲಿ ಅವರೇ ಮಾತನಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ದಶಕಗಳ ಹೋರಾಟದ ಫಲವಾಗಿ ಸರ್ಕಾರವು ಅವಮಾನಿತ ಪದ ಬಳಕೆ ನಿಷೇಧ ಮಾಡಿ ಮೂಗಿಗೆ ತುಪ್ಪ ಸವರಿದೆ. ಈ ಪದ ಬಳಸುವವರ ವಿರುದ್ಧ ಪ್ರಕರಣ ದಾಖಲಿಸಬೇಕು. ನ್ಯಾಯಾಲಯಕ್ಕೆ ಹೋಗಿ ಕನಿಷ್ಠ ₹100 ದಂಡ ಕಟ್ಟುವ ಕಾನೂನು ತರಬೇಕಿದೆ. ಈ ಬಗ್ಗೆ ಎಷ್ಟು ಬಾರಿ ಮನವಿ ಮಾಡಿದರೂ ಸರ್ಕಾರ ಗಮನ ಹರಿಸಿಲ್ಲ. ಸಿ.ಟಿ.ರವಿ ಅವರು ಅಧಿವೇಶನ ದಲ್ಲಿ ವಿಷಯ ಪ್ರಸ್ತಾಪಿಸಬೇಕು ಎಂದು ಆಗ್ರಹಿಸಿದ್ದಾರೆ.

District Savita Samaj demands pardon for C.T. Ravi

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...