ಚಿಕ್ಕಮಗಳೂರು: ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಮೇ ೧೮ ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ ೧೮ ರಂದು ಮಧ್ಯಾಹ್ನ ೧೨ ಗಂಟೆಗೆ ಐಡಿಎಸ್ಜಿ ಕಾಲೇಜು ಮೈದಾನದ ಹೆಲಿಪ್ಯಾಡ್ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದು, ಮಧ್ಯಾಹ್ನ ೧೨.೧೫ಕ್ಕೆ ಬ್ಯಾನ್ಯನ್ ಬುಲೋವಾರ್ಡ್ನಲ್ಲಿ ನಡೆಯುವ ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು,
ಮಧ್ಯಾಹ್ನ ೧ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ/ ಚರ್ಚೆ ನಡೆಸುವರು.
ಮಧ್ಯಾಹ್ನ ೨.೧೫ ಗಂಟೆಗೆ ಐಡಿಎಸ್ಜಿ ಕಾಲೇಜು ಮೈದಾನದ ಹೆಲಿಪ್ಯಾಡ್ನಿಂದ ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳುವರು ಎಂದು ಸನ್ಮಾನ್ಯ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿಗಳು ಹಾಗೂ ಪದನಿಮಿತ್ತ ಸರ್ಕಾರದ ವಿಶೇಷ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
District tour of Chief Minister Siddaramaiah
Leave a comment