Home namma chikmagalur chikamagalur ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ
chikamagalurHomeLatest Newsnamma chikmagalur

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

Share
Share

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ.

ಈ ಕುರಿತು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ರಾಹಿಲ್ ಶರೀಫ್ ಅವರು ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಅಸಭ್ಯವಾಗಿ ವರ್ತಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿದ್ದವು.

ಈ ವರ್ತನೆಗಳ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆಯಾಗಿದೆ ಎಂದು ಪರಿಗಣಿಸಲಾಗಿದೆ. ಇಂತಹ ನಡವಳಿಕೆಗಳಿಂದ ಕಾಂಗ್ರೆಸ್ ಪಕ್ಷ ಮತ್ತು ಸಂಘಟನೆಗೆ ಮುಜುಗರ ಉಂಟಾಗಿರುವ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ ಅವರನ್ನು ಪಕ್ಷದಿಂದ ಉಚ್ಚಾಟಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ಅಂಶುಮಂತ್ ಆದೇಶಿಸಿದ್ದಾರೆ.

District Youth Congress Vice President Rahil Sharif expelled from the party

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...