Home namma chikmagalur chikamagalur ಟ್ರೇಡಿಂಗ್ ನೆಪದಲ್ಲಿ ವೈದ್ಯರಿಗೆ ಲಕ್ಷಾಂತರ ವಂಚನೆ
chikamagalurHomeLatest Newsnamma chikmagalur

ಟ್ರೇಡಿಂಗ್ ನೆಪದಲ್ಲಿ ವೈದ್ಯರಿಗೆ ಲಕ್ಷಾಂತರ ವಂಚನೆ

Share
Share

ಚಿಕ್ಕಮಗಳೂರು: ಆಸ್ಟೈನ್ ಟ್ರೇಡಿಂಗ್ ನೆಪದಲ್ಲಿ ವೈದ್ಯರೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಪ್ರಕರಣ ಕಾಫಿನಾಡಿನಲ್ಲಿ ಬೆಳಕಿಗೆ ಬಂದಿದೆ.

ನಗರದ ನಿವಾಸಿಯಾದ ವೈದ್ಯರೊಬ್ಬರು ವಂಚನೆಗೆ ಒಳಗಾದವರು. ಇವರು ಜನಪ್ರಿಯ ಕ್ರಿಸ್ಟೋಕರೆನ್ಸಿ ಟ್ರೇಡಿಂಗ್ ಆಪ್ ಆದ ‘ಬೈನಾನ್ಸ್’ ಮೂಲಕ ಕಳೆದ ಮೂರು ವರ್ಷಗಳಿಂದ ಟ್ರೇಡಿಂಗ್ ಮಾಡುತ್ತಿದ್ದರು. ಈ ವೇಳೆ, USಆಖಿ ಖರೀದಿಸಲು P೨P ಮಾಧ್ಯಮದ ಮೂಲಕ ಅಶೋಕ ಮೀನಾ ಎಂಬ ವ್ಯಕ್ತಿಯನ್ನು ಸಂಪರ್ಕಿಸಿದ್ದಾರೆ.

ದೂರಿನ ವಿವರದಂತೆ, ಆರೋಪಿ ಅಶೋಕ ಮೀನಾ ಎಂಬಾತನ UPI ಐಡಿ ಹಾಗೂ ಬ್ಯಾಂಕ್ ಖಾತೆಗೆ ವೈದರು ಎರಡು ಕಂತುಗಳಲ್ಲಿ (೫೦,೦೦೦ ರೂ. ಮತ್ತು ೫೧,೦೦೦ ರೂ.) ಒಟ್ಟು ೧,೦೧,೦೦೦ ರೂಪಾಯಿಗಳನ್ನು ವರ್ಗಾವಣೆ ಮಾಡಿದ್ದಾರೆ. ಆದರೆ, ಹಣ ಪಡೆದ ನಂತರ ಆರೋಪಿಯು ಯನ್ನು ನೀಡದೆ ವಂಚಿಸಿದ್ದಾನೆ. ಅಲ್ಲದೆ, ವಾಟ್ಸಾಪ್ ನಲ್ಲಿ ಡಾಕ್ಟರ್ ಅವರನ್ನು ಬ್ಲಾಕ್ ಮಾಡಿ ಸಂಪರ್ಕಕ್ಕೆ ಸಿಗದಂತೆ ಕಣ್ಮರೆಯಾಗಿದ್ದಾನೆ.

ತನ್ನ ಹಣವನ್ನು ಪಡೆದು ಮೋಸ ಮಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ವೈದ್ಯರು ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆನ್ ಲೈನ್ ಟ್ರೇಡಿಂಗ್ ಮಾಡುವಾಗ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Doctors cheated of lakhs under the pretext of trading

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧ ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ’ರಾಷ್ಟ್ರೀಯ ಲೋಕ್ ಅದಾಲತ್’ ಹಮ್ಮಿಕೊಳ್ಳಲಾಗಿದೆ ಎಂದು ಗೌ.ಪ್ರಧಾನ ಜಿಲ್ಲಾ...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ ಸಂಚಾರ) ಬಂದ ಕಾರೊಂದು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿಗೆ ದುಡುಕುತನದಿಂದ ಡಿಕ್ಕಿ ಹೊಡೆದ ಪರಿಣಾಮ...

Related Articles

ಅಮೃತ್ 2.0 ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಮೃತ್ 2.0 ಯೋಜನೆಯಡಿ ಅನುಷ್ಠಾನಗೊಳ್ಳುತ್ತಿರುವ ಕುಡಿಯುವ ನೀರಿನ...

ವಿಕಲಚೇತನ ವ್ಯಕ್ತಿಯ ₹8 ಲಕ್ಷ ಬ್ಯಾಂಕ್ ಸಾಲ ಕೇವಲ ₹15,000 ಕ್ಕೆ ಇತ್ಯರ್ಥ

ಚಿಕ್ಕಮಗಳೂರು:  ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಮ್ಮಿಕೊಂಡಿದ್ದ ಮೆಗಾ ಲೋಕ ಅದಾಲತ್‌ನಲ್ಲಿ ನ್ಯಾಯಾಂಗದ ವಿಶೇಷ...

ಎಟಿಎಂ ಕಾರ್ಡ್ ಬದಲಿಸಿ ₹3.09 ಲಕ್ಷ ವಂಚನೆ

ಕಡೂರು: ಪಟ್ಟಣದ ಜೈನ್ ಟೆಂಪಲ್ ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂನಲ್ಲಿ ಹಣ ಹಿಂಪಡೆಯಲು ಯತ್ನಿಸುತ್ತಿದ್ದ ವೇಳೆ...

ಕೆಪಿಟಿಸಿಎಲ್ ಸಿಎಸ್‌ಆರ್ ಅನುದಾನ ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಕಣ್ಣಾವಲಿಗೆ ನೆರವು

ಚಿಕ್ಕಮಗಳೂರು: ಸರ್ಕಾರದ ಅನುದಾನದ ಕೊರತೆ ನಡುವೆ ಕೆಪಿಟಿಸಿಎಲ್ ಸಿಎಸ್‌ಆರ್ (ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ನಿಧಿ) ಅನುದಾನ...