Home namma chikmagalur chikamagalur ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ
chikamagalurHomeLatest Newsnamma chikmagalur

ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳು ಮನೆ ಬಾಗಿಲಿಗೆ

Share
Share

ಚಿಕ್ಕಮಗಳೂರು: ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಜಿಲ್ಲೆಯ ಎಲ್ಲಾ ಎಲ್‌ಪಿಜಿ ವಿತರಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಅವರು ತಿಳಿಸಿದ್ದಾರೆ.

ಈಗಾಗಲೇ ಸಿಲಿಂಡರ್‌ಗಳ ಸಮರ್ಪಕ ಪೂರೈಕೆಗಾಗಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಎಲ್‌ಪಿಜಿ ವಿತರಕರೊಂದಿಗೆ ಸಮಾಲೋಚನೆ ನಡೆಸಲಾಗಿದೆ. ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳ ಸರಬರಾಜು ಕಾರ್ಯ ಸಮರ್ಪಕವಾಗಿ ನಡೆಯುತ್ತಿದೆ.

ನಗರ, ಪಟ್ಟಣ ಪ್ರದೇಶದ ಗ್ರಾಹಕರು ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ ೨೫ ದಿನಗಳ ನಂತರ ಇನ್ನೊಂದು ಸಿಲಿಂಡರ್ ಅನ್ನು ಬುಕ್ ಮಾಡಲು ಹಾಗೂ ಗ್ರಾಮಾಂತರ ಪ್ರದೇಶದ ಗ್ರಾಹಕರು ಒಂದು ಗೃಹಬಳಕೆ ಸಿಲಿಂಡರನ್ನು ಬುಕ್ ಮಾಡಿದ ೪೫ ದಿನಗಳ ನಂತರ ಇನ್ನೊಂದು ಸಿಲಿಂಡರ್ ಅನ್ನು ಬುಕ್ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಹಕರು ಅಡುಗೆ ಅನಿಲ ಮಿತಬಳಕೆ ಮಾಡುವಂತೆ ಕೋರಲಾಗಿದೆ.

ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಅಗತ್ಯವಿರುವ ಪ್ರಮಾಣದಲ್ಲಿ ಮಾತ್ರ ಗ್ಯಾಸ್ ಸಿಲಿಂಡರ್ ಪಡೆಯುವಂತೆ ಹಾಗೂ ಗೃಹಬಳಕೆ ಸಿಲಿಂಡರನ್ನು ಈ ಹಿಂದಿನಂತೆ ಗ್ರಾಹಕರ ಮನೆ ಬಾಗಿಲಿಗೆ ಸರಬರಾಜು ಮಾಡುವುದರಿಂದ ಗ್ರಾಹಕರು ಸಿಲಿಂಡರ್ ಪಡೆಯಲು ಗ್ಯಾಸ್ ಏಜೆನ್ಸಿಗೆ ತೆರಳದಂತೆ ವಿನಂತಿಸಲಾಗಿದೆ. ಎಲ್‌ಪಿಜಿ ವಿತರಣೆಯಲ್ಲಿ ಏನಾದರೂ ಸಮಸ್ಯೆಗಳು ಕಂಡು ಬಂದಲ್ಲಿ ಈ ದೂರವಾಣಿ ಸಂಖ್ಯೆಗಳ (೦೮೨೬೨-೨೩೭೭೧೫, ೯೪೮೩೩೨೫೯೪೪) ಮೂಲಕ ಸಂಪರ್ಕಿಸಬಹುದು.

ಯಾವುದೇ ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ೧೯೫೫ ಹಾಗೂ ದಿ ಲಿಕ್ವಿಫೈಡ್ ಪೆಟ್ರೋಲಿಯಂ ಗ್ಯಾಸ್ (ರೆಗ್ಯೂಲೇಷನ್ ಆಫ್ ಸಪ್ಲೈ ಅಂಡ್ ಡಿಸ್ಟ್ರಿಬ್ಯೂಷನ್) ಆರ್ಡರ್ ೨೦೦೦ರ ಅನ್ವಯ ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ ಸಾರ್ವಜನಿಕರು ಗೃಹಬಳಕೆ ಗ್ಯಾಸ್ ವಿತರಣಾ ವ್ಯವಸ್ಥೆ ಸುಗಮವಾಗಿ ನಡೆಯಲು ಸಹಕರಿಸುವಂತೆ ಅವರು ಕೋರಿದ್ದಾರೆ.

Domestic gas cylinders delivered to your doorstep

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...