ಚಿಕ್ಕಮಗಳೂರು: ಮಾಜಿ ಸಚಿವ, ಕಾರ್ಕಳ ಶಾಸಕ, ವಿ. ಸುನೀಲ್ ಕುಮಾರ್ ಅವರು ತಮ್ಮ ತಂದೆಯ ಸ್ಮರಣಾರ್ಥ ನಗರದ ಸಂಜೀವಿನಿ ವಿದ್ಯಾಸಂಸ್ಥೆಗೆ ೨೦ ಕಂಪ್ಯೂಟರ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಆಪ್ತರೊಂದಿಗೆ ಶನಿವಾರ ಸಂಸ್ಥೆಗೆ ಆಗಮಿಸಿದ ಅವರು ಕಂಪ್ಯೂಟರ್ ಕೊಠಡಿಯನ್ನು ಉದ್ಘಾಟಿಸಿ, ಸಂಸ್ಥೆಯ ಅಧ್ಯಕ್ಷೆ ಎಸ್.ಶಾಂತಕುಮಾರಿ ಅವರಿಗೆ ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು.
ಇದೇ ವೇಳೆ ಸಂಸ್ಥೆಯಲ್ಲಿ ಆಯೋಜಿಸಿದ್ದ ರೈತ ದಿನಾಚರಣೆ ಮತ್ತು ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ವಿದ್ಯಾರ್ಥಿಗಳಿಂದ ನಡೆದ ಫಲ ಪುಷ್ಪ ಪ್ರದರ್ಶನವನ್ನು ವೀಕ್ಷಿಸುವುದರ ಜೊತೆಗೆ ವಿದ್ಯಾರ್ಥಿಗಳು, ಆಡಳಿತ ಮಂಡಳಿ ಪದಾಧಿಕಾರಿಗಳು ಹಾಗೂ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳಿಗೆ ರಾಖಿ ಕಟ್ಟಿ ಸಂಭ್ರಮಿಸಿದರು.
ಈ ವೇಳೆ ಸಂಸ್ಥೆಯ ವತಿಯಿಂದ ಶಾಸಕ ವಿ.ಸುನಿಲ್ ಕುಮಾರ್ ಮತ್ತು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಸನ್ಮಾನಿಸಲಾಯಿತು.
ಸಂಜೀವಿನಿ ವಿದ್ಯಾಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ,ಮೋಹನ್, ಖಜಾಂಚಿ ಗೋಪಿನಾಥ್, ಕಾರ್ಯಕಾರಿ ಮಂಡಳಿ ಸದಸ್ಯರಾದ ಮಲ್ಲಿಕಾರ್ಜುನ್, ರಂಗನಾಥ್, ಪ್ರಾಂಶುಪಾಲೆ ಎಸ್.ಆರ್. ಹೇಮ, ಉಪ ಪ್ರಾಂಶುಪಾಲೆ ಕುಮುದ ಎಂ ಕಿಣಿ, ವಿಶ್ವ ಹಿಂದೂ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಯೋಗೀಶ್ ರಾಜ್ ಅರಸ್ ಹಾಜರಿದ್ದರು.
Donation of 20 computers to Sanjeevini Educational Institution
Leave a comment