Home Latest News ದೇವಿರಮ್ಮ ಬೆಟ್ಟ ಹತ್ತುವಾಗ ರೀಲ್ಸ್ ಮಾಡಿದ್ರೆ ಹುಷಾರ್ : ಎಸ್ಪಿ ವಿಕ್ರಮ್ ಅಮಟೆ ವಾರ್ನಿಂಗ್
Latest News

ದೇವಿರಮ್ಮ ಬೆಟ್ಟ ಹತ್ತುವಾಗ ರೀಲ್ಸ್ ಮಾಡಿದ್ರೆ ಹುಷಾರ್ : ಎಸ್ಪಿ ವಿಕ್ರಮ್ ಅಮಟೆ ವಾರ್ನಿಂಗ್

Share
Share

ಚಿಕ್ಕಮಗಳೂರು : ಸಮುದ್ರ ಮಟ್ಟದಿಂದ ಸುಮಾರು 3 ಸಾವಿರ ಅಡಿ ಎತ್ತರದ ಪಿರಮಿಡ್ ಆಕಾರದ ಬೆಟ್ಡದ ತುದಿಯಲ್ಲಿ ನೆಲೆ‌ ನಿಂತು ವರ್ಷಕ್ಕೊಮ್ಮೆ ದರ್ಶನ ನೀಡೋ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ ಬಿಂಡಿಗ ದೇವೀರಮ್ಮನ ಭಕ್ತರಿಗೆ ಖಾಕಿ ಪಡೆ ಕಠಿಣ ಸಂದೇಶ ರವಾನಿಸಿದೆ. ಮಳೆ ಬಂದು ಬೆಟ್ಟ ಜಾರುತ್ತಿದೆ. ಬೆಟ್ಟ ಹತ್ತುವಾಗ ಮಾರ್ಗ ಮಧ್ಯೆ ಸೆಲ್ಫಿ ತೆಗೆದುಕೊಳ್ಳುವುದು, ರೀಲ್ಸ್ ಮಾಡುವುದು, ಫೋಟೋ ಸೆಷನ್ ಮಾಡುವುದು ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ Dr ವಿಕ್ರಂ ಅಮಟೆ ಎಚ್ಚರಿಕೆ ನೀಡಿದ್ದಾರೆ. ನಾಳೆ ಬುಧವಾರ ಸಂಜೆ 4 ಗಂಟೆಯಿಂದ ಗುರುವಾರ ಸಂಜೆವರೆಗೂ ಬೆಟ್ಟ ಹತ್ತಿ ದೇವೀರಮ್ಮನ ದರ್ಶನಕ್ಕೆ ದೇವಾಲಯ ಆಡಳಿತ ಮಂಡಳಿ ಅವಕಾಶ ಕಲ್ಪಿಸಿದೆ. ಹಾಗಾಗಿ, ಸುಮಾರು 1 ಲಕ್ಷಕ್ಕೂ ಅಧಿಕ ಭಕ್ತರು ಬೆಟ್ಟ ಹತ್ತುವ ಸಾಧ್ಯತೆ ಇದ್ದು ಜಿಲ್ಲಾಡಳಿತ ಸರ್ವ ಸಕಲ‌ ಸಿದ್ಧತೆ ಮಾಡಿಕೊಂಡಿದೆ. ಆದರೆ, ಬೆಟ್ಡ ಹತ್ತುವ ಮಾರ್ಗದಲ್ಲಿ ಡ್ಯಾನ್ಸ್ ಮಾಡುವುದು, ಫೋಟೋ ಸೆಷನ್ ಮಾಡುವುದು, ಸೆಲ್ಫಿಗಾಗಿ ಭಕ್ತರಿಗೆ ತೊಂದರೆ ಕೊಡುವುದು, ರೀಲ್ಸ್ ಮಾಡುವುದು ಕಂಡು ಬಂದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಚಿಕ್ಕಮಗಳೂರಿನ ಊರ ದೇವತೆ ದೇವೀರಮ್ಮನ ನೋಡಲು ಲಕ್ಷಕ್ಕೂ ಅಧಿಕ ಭಕ್ತರು ಬರುವ ಹಿನ್ನೆಲೆ ಪೊಲೀಸರ ಬೆಟ್ಟ ಹತ್ತುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದ್ದಾರೆ. ಮಲ್ಲೇನಹಳ್ಳಿ ಮಾರ್ಗ, ಮಾಣಿಕ್ಯಾಧಾರ ಮಾರ್ಗ, ಅರಿಶಿನಗುಪ್ಪೆ ಹಾಗೂ ಕಾಫಿ ತೋಟದ ಒಳಗಿಂದ ಒಟ್ಟು ನಾಲ್ಕು ಮಾರ್ಗದಲ್ಲಿ ಹತ್ತುವ ಬೆಟ್ಟಕ್ಕೆ ನಾಲ್ಕು ಮಾರ್ಗದಲ್ಲೂ ಪೊಲೀಸರು ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಿದ್ದಾರೆ. ಸುಮಾರು 3 ಕಿ.ಮೀ. ಎತ್ತದ ಬೆಟ್ಟದಲ್ಲಿ ಪ್ರತಿ 1 ಕಿ.ಮೀ.ಗೆ ಒಂದು ಪೊಲೀಸರ ತಂಡವನ್ನ ನಿಯೋಜನೆ ಮಾಡಲಾಗಿದೆ. ಬೆಟ್ಟದ ಮಾರ್ಗದ 5 ಕಡೆ ಮೆಗಾಫೋನ್ ಮೂಲಕ ಭಕ್ತರಲ್ಲಿ ಜಾಗೃತಿ ಮೂಡಿಸಲಿದ್ದಾರೆ.‌ ಮಾರ್ಗದುದ್ದಕ್ಕೂ ಅಲ್ಲಲ್ಲೇ, ಪೊಲೀಸ್, ಆರೋಗ್ಯ ಸಿಬ್ಬಂದಿ, ಅಗ್ನಿಶಾಮಕ, ಸ್ವಯಂಸೇವಕರು ಭಕ್ತರ ಅನುಕೂಲಕ್ಕೆ ಸಿದ್ಧರಿರ್ತಾರೆ. ಬೆಟ್ಟ ಹತ್ತಲು ಸುಸ್ತಾದರೆ ರೋಪ್ (ಹಗ್ಗ) ಹಿಡಿದು ಹತ್ತೋದಕ್ಕೂ ಸ್ವಯಂ ಸೇವಕರು, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿಗಳು ನೆರವಿಗೆ ಬರಲಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....