Home namma chikmagalur ಡಾ. ಬಿ.ಎಂ.ಪುಟ್ಟಯ್ಯಗೆ ಸಾಹಿತ್ಯಶ್ರೀ ಪ್ರಶಸ್ತಿ
namma chikmagalurchikamagalurHomeLatest News

ಡಾ. ಬಿ.ಎಂ.ಪುಟ್ಟಯ್ಯಗೆ ಸಾಹಿತ್ಯಶ್ರೀ ಪ್ರಶಸ್ತಿ

Share
Share

ಚಿಕ್ಕಮಗಳೂರು: ಹಂಪಿ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕ, ಚಿಕ್ಕಮಗಳೂರು ಜಿಲ್ಲೆಯ ಸೃಜನಾತ್ಮಕ ಸಾಹಿತಿಗಳಲ್ಲಿ ಒಬ್ಬರಾದ ಡಾ. ಬಿ.ಎಂ ಪುಟ್ಟಯ್ಯ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಕೊಡಮಾಡುವ ೨೦೨೪ ನೇ ಸಾಲಿನ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜ್ ತಿಳಿಸಿದ್ದಾರೆ.

ಡಾ. ಬಿ.ಎಂ. ಪುಟ್ಟಯ್ಯ, ಪ್ರಸ್ತುತ ಕನ್ನಡ ವಿಶ್ವವಿದ್ಯಾಲಯದ ಹಿರಿಯ ಪ್ರಾಧ್ಯಾಪಕರಾಗಿ ಮತ್ತು ಕುಪ್ಪಳಿಯ ಕುವೆಂಪು ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅನಕ್ಷರಸ್ಥ ಕುಟುಂಬವೊಂದರಲ್ಲಿ ಹುಟ್ಟಿ ಬೆಳೆದ ಪುಟ್ಟಯ್ಯನವರು ಪ್ರೌಢಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಕವನಗಳನ್ನು ಬರೆಯುತ್ತಿದ್ದರು. ಜೊತೆಗೆ ಉತ್ತಮ ಚರ್ಚಾಪಟುವಾಗಿದ್ದರು. ಆಣೂರು ಪ್ರೌಢಶಾಲೆ ೧೦ನೇ ತರಗತಿ ಉತ್ತೀರ್ಣರಾದ ಬಳಿಕ ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜಿನಲ್ಲಿ ಪ್ರಥಮ ಪಿ.ಯು.ಸಿ.ಯಿಂದ ಪದವಿಯವರೆಗೆ ಅಭ್ಯಾಸ ಮಾಡಿ, ಮುಂದೆ ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಕನ್ನಡ ಎಂ.ಎ.ಯಲ್ಲಿ ಪ್ರಥಮ ರ್‍ಯಾಂಕ್ ಪಡೆದುಕೊಂಡವರು.

ಹಂಪಿ ಕನ್ನಡ ವಿಶ್ವವಿದ್ಯಾಲಯದಲ್ಲಿ `ಅಲಕ್ಷಿತ ವಚನಕಾರರ ಲೋಕದೃಷ್ಟಿ’ ವಿಷಯ ಕುರಿತು ಎಂ.ಫಿಲ್. ಪದವಿ ಮತ್ತು `ಕನ್ನಡ ದಲಿತ ಸಾಹಿತ್ಯ ಮತ್ತು ಪ್ರತಿಸಂಸ್ಕೃತಿ’ ವಿಷಯ ಕುರಿತು ಪಿಎಚ್.ಡಿ. ಪದವಿ ಪಡೆದು ಅದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾಗಿ ನೇಮಕವಾದರು.
ಕಳೆದ ೩೦ ವರ್ಷಗಳಿಂದ ಪ್ರಾಧ್ಯಾಪಕರಾಗಿ, ಹಿರಿಯ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ,

ದೇವನೂರು ಮಹಾದೇವ. ಕಾಲ್ನಡಿಗೆ. ಕರಡು. ಮುಖಾಮುಖಿ ಇವರ ವಿಮರ್ಶಾ ಕೃತಿಗಳು.ಅಲಕ್ಷಿತಾ ವಚನಕಾರರ ಲೋಕ ದೃಷ್ಟಿ. ಆತ್ಮಕಥೆಗಳಲ್ಲಿ ಕರ್ನಾಟಕದ ಕಥೆ ಇವರ ಸಂಶೋಧನಾ ಕೃತಿಗಳಾಗಿವೆ. ಸಾವು, ಒಂದು ಚಿಂತನೆ, ದಲಿತರು ಮತ್ತು ಭೂಮಿಯ ಪ್ರಶ್ನೆ, ಹರಿಶ್ಚಂದ್ರ ಚಾರಿತ್ರ, ಸತ್ಯದ ತೊಡಕು, ತಾತ್ವಿಕ ಆಯಾಮಗಳು, ಶ್ರಮಭಾಷೆ, ಕಾಲಿಡಿಗೆ, ಒಂದನೇ ತರಗತಿಯಿಂದಲೇ ಉರುಳು, ಜಾತಿ ವಿಶ್ಲೇಷಣೆಯ ಸಮಸ್ಯೆ, ಬರಿ ನಿದ್ದೆಯಲ್ಲವೋ ಅಣ್ಣ, ವಡ್ಡಾರಾಧನೆ, ಸಾಂಸ್ಕೃತಿಕ ಮುಖಾಮುಖಿ. ಧರ್ಮಾಮೃತ, ಆದಿಪುರಾಣ, ದಲಿತ ಸಾಹಿತ್ಯ ಸಂಪುಟ, ಬೆಂಕಿಯ ಮಳೆ ಹೀಗೆ ವಿಚಾರ ವಿಮರ್ಶಾ ಕೃತಿಗಳು, ಸೃಜನಶೀಲ ಕೃತಿಗಳು, ಸಂಪಾದನಾ ಕೃತಿಗಳನ್ನು ಹೊರತಂದು ಸಾಹಿತ್ಯ ಲೋಕಕ್ಕೆ ಹೊಸ ನೋಟವನ್ನು ಕಟ್ಟಿಕೊಟ್ಟಿದ್ದಾರೆ.

ಅಂತಾರಾಷ್ಟ್ರೀಯ, ರಾಷ್ಟ್ರೀಯ ಮತ್ತು ವಿವಿಧ ವಿಶ್ವವಿದ್ಯಾಲಯಗಳಲ್ಲಿ ಸುಮಾರು ೩೦೦ಕ್ಕೂ ಹೆಚ್ಚು ವಿಚಾರ ಪೂರ್ಣ ಪ್ರಬಂಧಗಳನ್ನು ಮಂಡಿಸಿ, ೩೫೦ಕ್ಕೂ ಹೆಚ್ಚು ಸಂಶೋಧನಾ ಲೇಖನಗಳನ್ನು ಪ್ರಕಟಿಸಿದ್ದಾರೆ. ಮಲೆನಾಡಿನ ತವರೂರು ಚಿಕ್ಕಮಗಳೂರು ತಾಲೂಕಿನ ಬಸಾಪುರ ಗ್ರಾಮದ ಕುಳುವಾಡಿ ಮಂಜಯ್ಯ ಮತ್ತು ಸಿದ್ದಮ್ಮ ದಂಪತಿಗಳ ಪುತ್ರರಾದ ಡಾ. ಬಿ ಎಂ ಪುಟ್ಟಯ್ಯನವರು ಅತ್ಯಂತ ಕಡು ಬಡತನದಲಿ ಹುಟ್ಟಿ , ಶಿಕ್ಷಣವನ್ನು ಪಡೆದು, ಮಹಾಪ್ರಬಂಧವನ್ನು ಮಂಡಿಸಿ ಡಾಕ್ಟರೇಟ್ ಪದವಿ ಪಡೆದು, ವಿಶ್ವವಿದ್ಯಾಲಯದಲ್ಲಿ ಹಿರಿಯ ಅಧ್ಯಾಪಕರಾಗಿ ಕರ್ತವ್ಯವನ್ನು ನಿರ್ವಹಿಸುತ್ತಾ, ಸುಮಾರು ೨೧ ಕೃತಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ.

ಡಾ. ಬಿ. ಎಂ ಪುಟ್ಟಯ್ಯನವರ ಈ ಎಲ್ಲ ಸಾಹಿತ್ಯದ ಕೃಷಿಯನ್ನು ಪರಿಗಣಿಸಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಸಾಹಿತ್ಯಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಿರುವುದಕ್ಕೆ ಜಿಲ್ಲೆಯ ಅನೇಕ ಸಾಹಿತ್ಯಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Dr. B. M. Puttaiah Sahitya Shri Award

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...