ಚಿಕ್ಕಮಗಳೂರು: ನಗರದ ಪ್ರತಿಷ್ಠಿತ ಐಡಿಎಸ್ಜಿ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಡಾ. ಚೇತನ್ ಡಿ.ಎಂ. ಅವರು ನವೆಂಬರ್ 20ರಂದು ಅಧಿಕಾರ ಸ್ವೀಕರಿಸಿದರು.
ಡಾ. ಚೇತನ್ ಅವರು ಇದೇ ಐಡಿಎಸ್ಜಿ ಕಾಲೇಜಿನ ಹಳೆಯ ವಿದ್ಯಾರ್ಥಿಯಾಗಿದ್ದು, ಇದೀಗ ತಾವು ವಿದ್ಯಾಭ್ಯಾಸ ಮಾಡಿದ ಸಂಸ್ಥೆಯಲ್ಲೇ ಪ್ರಾಂಶುಪಾಲರಾಗಿ ಜವಾಬ್ದಾರಿ ವಹಿಸಿಕೊಂಡಿರುವುದು ವಿಶೇಷವಾಗಿದೆ.
ಪ್ರತಿಷ್ಠಿತ ನಿಟ್ಟೆ (ಪರಿಗಣಿತ ವಿಶ್ವವಿದ್ಯಾಲಯ)ದಲ್ಲಿ ಸಹ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿರುವ ಅವರು, ಎರಡು ದಶಕಗಳಿಗೂ ಹೆಚ್ಚು ಕಾಲದ ಬೋಧನಾ ಅನುಭವ ಹೊಂದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪಿಎಚ್.ಡಿ. ಪದವಿ ಪಡೆದಿರುವ ಡಾ. ಚೇತನ್ ಅವರು, ಇದೀಗ ಐಡಿಎಸ್ಜಿ ಕಾಲೇಜಿನ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.
Dr. Chetan D.M. assumes charge as Principal of IDSG
Leave a comment