Home Crime News ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು
Crime NewsHomeLatest Newsnamma chikmagalurTarikere

ಕೆಎಸ್‌ಆರ್‌ಟಿಸಿ ಬಸ್–ಟ್ರ್ಯಾಕ್ಟರ್ ಇಂಜಿನ್ ಡಿಕ್ಕಿಗೆ ಚಾಲಕ ಸಾವು

Share
Share

ತರೀಕೆರೆ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟ್ರ್ಯಾಕ್ಟರ್ ಇಂಜಿನ್ ನಡುವೆ ಸಂಭವಿಸಿದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಟ್ರ್ಯಾಕ್ಟರ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಬೇಲೇನಹಳ್ಳಿ ಸಮೀಪ ನಡೆದಿದೆ.

ಮೃತರನ್ನು ತಮಿಳುನಾಡು ಮೂಲದ ಮುನಿಯಾನ್ ಎಂದು ಗುರುತಿಸಲಾಗಿದೆ.

ಘಟನೆ ವಿವರ: ಭದ್ರಾವತಿ ತಾಲೂಕಿನ ಧಡಮಗಟ್ಟ ಗ್ರಾಮದ ಖಾದರ್ ಬೇಗ್ ಎಂಬುವವರ ಬಳಿ ಇದ್ದ KA-14-TA-6419 ನೋಂದಣಿ ಸಂಖ್ಯೆಯ ಟ್ರ್ಯಾಕ್ಟರ್ ಇಂಜಿನ್ ಅನ್ನು ಖರೀದಿಸಲು ತಮಿಳುನಾಡಿನಿಂದ ಅರೀಶ್, ಮುನಿಯಾನ್ ಹಾಗೂ ಮತ್ತಿಬ್ಬರು ಸೆ.1ರಂದು ಧಡಮಗಟ್ಟಕ್ಕೆ ಬಂದಿದ್ದರು. ₹2.85 ಲಕ್ಷಕ್ಕೆ ಇಂಜಿನ್ ಖರೀದಿಸುವ ಒಪ್ಪಂದವಾಗಿದ್ದು, ₹1.50 ಲಕ್ಷವನ್ನು ಮುಂಗಡವಾಗಿ ಪಾವತಿಸಿ, ಉಳಿದ ಹಣವನ್ನು ಟ್ರ್ಯಾಕ್ಟರ್‌ನ ಎನ್‌ಒಸಿ ಬಂದ ಬಳಿಕ ನೀಡುವುದಾಗಿ ತಿಳಿಸಿದ್ದರು.
ಬಳಿಕ ಮುನಿಯಾನ್ ಅವರು ಟ್ರ್ಯಾಕ್ಟರ್ ಇಂಜಿನ್‌ನ್ನು ಭದ್ರಾವತಿಗೆ ಚಾಲನೆ ಮಾಡಿಕೊಂಡು ಹೋಗಿದ್ದರು. ಅಲ್ಲಿ ಲಾರಿಯಲ್ಲಿ ಲೋಡ್ ಮಾಡಿಕೊಂಡು ತಮಿಳುನಾಡಿಗೆ ಕೊಂಡೊಯ್ಯಲು ಉದ್ದೇಶಿಸಿದ್ದರು.

ಆದರೆ ಅ.2ರಂದು ಮುಂಜಾನೆ ಸುಮಾರು 4.15ಕ್ಕೆ, ಮುನಿಯಾನ್ ಅವರ ಮೊಬೈಲ್‌ನಿಂದ ಕರೆ ಮಾಡಿ, ತರೀಕೆರೆ ಸಮೀಪದ ಬೇಲೇನಹಳ್ಳಿ ಬಳಿ ಟ್ರ್ಯಾಕ್ಟರ್ ಇಂಜಿನ್‌ಗೆ ಅಪಘಾತವಾಗಿರುವುದಾಗಿ ಮಾಹಿತಿ ನೀಡಲಾಯಿತು. ಖಾದರ್ ಬೇಗ್ ಹಾಗೂ ಮಹಮ್ಮದ್ ಶಫಿವುಲ್ಲಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಟ್ರ್ಯಾಕ್ಟರ್ ಇಂಜಿನ್ ಹಾಗೂ KA-09-F-5654 ನೋಂದಣಿ ಸಂಖ್ಯೆಯ ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿರುವುದು ಕಂಡುಬಂದಿದೆ.

ಅಪಘಾತದಲ್ಲಿ ಮುನಿಯಾನ್ ಅವರ ಎದೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೊದಲು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ವೈದ್ಯರ ಸಲಹೆಯಂತೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅ.2ರಂದು ಮಧ್ಯಾಹ್ನ 2.30ಕ್ಕೆ ಮುನಿಯಾನ್ ಮೃತಪಟ್ಟಿದ್ದಾರೆ.

ಕೆಎಸ್‌ಆರ್‌ಟಿಸಿ ಬಸ್ ಚಾಲಕ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಬಸ್ ಚಲಾಯಿಸಿ ಟ್ರ್ಯಾಕ್ಟರ್ ಇಂಜಿನ್‌ಗೆ ಡಿಕ್ಕಿ ಹೊಡೆದಿರುವುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಈ ಸಂಬಂಧ ಖಾದರ್ ಬೇಗ್ ನೀಡಿದ ದೂರಿನ ಮೇರೆಗೆ ತರೀಕೆರೆ ಪೊಲೀಸ್ ಠಾಣೆಯಲ್ಲಿ ಮೊ.ನಂ. 257/2026ರಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Driver dies in collision between KSRTC bus and tractor engine.

 

Share

Leave a comment

Leave a Reply

Your email address will not be published. Required fields are marked *

Don't Miss

ಗ್ರಾಮ ಪಂಚಾಯಿತಿ ನೌಕರರ ಬೇಡಿಕೆ ಈಡೇರಿಸಲು ಸೆ.29ರಂದು ಧರಣಿ

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ನೌಕರರಿಗೆ ಪರಿಷ್ಕೃತ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಫೆಡರೇಶನ್ (AITUC) ವತಿಯಿಂದ ಸೆ.29ರಂದು...

ಮ್ಯಾಟ್ರಿಮೋನಿಯಲ್ ಸೈಟ್‌ನಲ್ಲಿ ಸುಳ್ಳು ಮಾಹಿತಿ ನೀಡಿ ₹2.20 ಲಕ್ಷ ವಂಚನೆ

ಚಿಕ್ಕಮಗಳೂರು: ಮ್ಯಾಟ್ರಿಮೋನಿಯಲ್ ವೆಬ್‌ಸೈಟ್‌ನಲ್ಲಿ ಸುಳ್ಳು ವೈಯಕ್ತಿಕ ಮಾಹಿತಿ ನೀಡಿ ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಂದ ಹಂತ ಹಂತವಾಗಿ *₹2.20 ಲಕ್ಷ ಹಣ ಹಾಗೂ ಮೊಬೈಲ್ ಫೋನ್ ಪಡೆದು ವಂಚಿಸಿರುವ ಆರೋಪ* ಕೇಳಿಬಂದಿದೆ. ಈ...

Related Articles

12 ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಚಾಲನೆ

ಚಿಕ್ಕಮಗಳೂರು: ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬೆನ್ನಲ್ಲೇ ಜಿಲ್ಲೆಯ 12...

ಕಳಸದಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ

ಕಳಸ : ಮನೆಯಂಗಳದಲ್ಲೇ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷವಾಗಿ ಸ್ಥಳೀಯರನ್ನು ಬೆಚ್ಚಿಬೀಳಿಸಿದ ಘಟನೆ ಕಳಸ ತಾಲೂಕಿನ...

ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಪ್ರಜಾಸೇವ ಆಂದೋಲನದ ಉದ್ದೇಶ

ಚಿಕ್ಕಮಗಳೂರು:  ಜನರ ಸಮಸ್ಯೆಗಳನ್ನು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಒಗ್ಗೂಡಿ ಆಲಿಸಿ, ಸಾಧ್ಯವಾದಷು ಶೀಘ್ರವಾಗಿ ಇತ್ಯರ್ಥ ಪಡಿಸುವ...

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಕ್ಕೆ ಅ.31ರೊಳಗೆ ಪ್ರಕ್ರಿಯೆ ಪೂರ್ಣ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ 12 ಬ್ಲಾಕ್ ಕಾಂಗ್ರೆಸ್ ಸಮಿತಿಗಳಿಗೆ...