Home namma chikmagalur chikamagalur ಲಕ್ಯ ಕ್ರಾಸ್ ಬಳಿ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಚಾಲಕ ಸಾವು
chikamagalurHomeLatest Newsnamma chikmagalur

ಲಕ್ಯ ಕ್ರಾಸ್ ಬಳಿ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಚಾಲಕ ಸಾವು

Share
Share

ಚಿಕ್ಕಮಗಳೂರು:  ನಗರದ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಲಕ್ಯ ಕ್ರಾಸ್ ಬಳಿ ಸೋಮವಾರ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಟಾಟಾ ಏಸ್ ವಾಹನದ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ.

ಮಾಹಿತಿಯ ಪ್ರಕಾರ, ಚಿಕ್ಕಮಗಳೂರಿನಿಂದ ಕಡೂರು ಕಡೆಗೆ ತೆರಳುತ್ತಿದ್ದ MH34 AB 7389 ನೋಂದಣಿಯ ಟಿಂಬರ್ ಲಾರಿಯ ಚಾಲಕ ಅತಿವೇಗ ಹಾಗೂ ಅಜಾಗರೂಕತೆಯಿಂದ ವಾಹನ ಚಲಾಯಿಸಿ, KA22 Z 8919 ಬೈಕ್, KA18 TA 6734 ಓಮ್ನಿ, ಟ್ರ್ಯಾಕ್ಟರ್ ಹಾಗೂ KA13 C 7303 ಟಾಟಾ ಏಸ್ ಮತ್ತು KA09 AA 1823 ಅನಿಲ (ಗ್ಯಾಸ್) ಸಾಗಣೆ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ.

ಅಪಘಾತದಲ್ಲಿ ಟಾಟಾ ಏಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓಮ್ನಿ ಚಾಲಕ, ಅದರಲ್ಲಿದ್ದ ಪ್ರಯಾಣಿಕರು ಹಾಗೂ ಬೈಕ್ ಸವಾರ ಗಾಯಗೊಂಡಿದ್ದು, ಅವರನ್ನು 108 ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಗಿದೆ.

112 ತುರ್ತು ಸೇವೆಗೆ ಚಂದನ್ ಎಂಬುವರು ಕರೆ ಮಾಡಿ ಅಪಘಾತದ ಮಾಹಿತಿ ನೀಡಿದ್ದರು. ಮಾಹಿತಿ ಮೇರೆಗೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು.

ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ. ಉದ್ದದ ವಾಹನ ದಟ್ಟಣೆ ಉಂಟಾಗಿದ್ದು, ಗ್ರಾಮಾಂತರ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿ ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿ ಸಂಚಾರವನ್ನು ಸುಗಮಗೊಳಿಸಿದರು.

ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಪಘಾತದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Driver dies in horrific series of road accidents near Lakya Cross

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಲ್ಲೆಯ ಯಾರಿಗೂ ಸಚಿವ ಸ್ಥಾನವಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಯಾವ ಶಾಸಕರಿಗೂ ಮಂತ್ರಿ ಸ್ಥಾನ ಸಿಗುವುದಿಲ್ಲ ಎಂದು ಖಚಿತ ಮಾಹಿತಿ ಇದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ನ ಐದು ಶಾಸಕರಿದ್ದು ಇಬ್ಬರು ವಿಧಾನ ಪರಿಷತ್ ಸದಸ್ಯರಿದ್ದಾರೆ ಹೀಗಾಗಿ ಮಂತ್ರಿ...

ಪಂಚಾಯತ್‌ರಾಜ್‌ನಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ

ಚಿಕ್ಕಮಗಳೂರು:  ಭಾರತ ಸ್ವಾತಂತ್ರ್ಯ ನಂತರ ಜಾರಿಗೆ ಬಂದ ಪಂಚಾಯತ್ ರಾಜ್ ವ್ಯವಸ್ಥೆಯಿಂದ ದೇಶದಲ್ಲಿ ಕ್ರಾಂತಿಕಾರಕ ಬದಲಾವಣೆ ಆಗಿದೆ. ಆದರೆ, ಇತ್ತೀಚೆಗೆ ಪಂಚಾಯತ್‌ರಾಜ್ ವ್ಯವಸ್ಥೆಯ ಅಧಿಕಾರ ಮೊಟುಕುಗೊಳಿಸುತ್ತಿರುವುದು ವಿಷಾದನೀಯ ಎಂದು ಎಂದು ಕೇಂದ್ರ...

Related Articles

ಶಾಹುರವರು ಜಾತೀಯತೆ ತೊಲಗಿಸಲು ಶ್ರಮಿಸಿದ ಮಾನವತಾವಧಿ

ಚಿಕ್ಕಮಗಳೂರು: ವೈಚಾರಿಕತೆಯ ಭದ್ರ ಬುನಾದಿಯನ್ನು ಸಾಮಾಜಿಕ ಪರಿವರ್ತನ ಚಳ ವಳಿಯ ಸಂದರ್ಭದಲ್ಲಿ ರಾಜಪ್ರಭುತ್ವದಲ್ಲಿ ಶಾಹೂ ಮಹಾರಾಜರು...

ಮಾಜಿ ಸೈನಿಕರಿಂದ ಕಾರ್ಗಿಲ್ ವಿಜಯೋತ್ಸವ ಸಂಭ್ರಮಾಚರಣೆ

ಚಿಕ್ಕಮಗಳೂರು: ೨೭ನೇ ಕಾರ್ಗಿಲ್ ವಿಜಯೋತ್ಸವ ಅಂಗವಾಗಿ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಭಾನುವಾರ ಜಿಲ್ಲಾ...

ಮಹಿಳೆಯರು ಧರಿಸುವ ‘ನೈಟಿ’ ಧರಸಿ ದೇವಸ್ಥಾನದಲ್ಲಿ ಕಳ್ಳತನ

ಚಿಕ್ಕಮಗಳೂರು:  ದೇವಸ್ಥಾನಗಳಲ್ಲಿ ಕಳ್ಳತನ ನಡೆಯುವುದು ಹೊಸದೇನಲ್ಲ. ಆದರೆ, ಪತ್ತೆಯಾಗಬಾರದು ಎಂದು ಕಳ್ಳರು ಹೂಡುವ ತಂತ್ರಗಳು ಮಾತ್ರ...

ಸಿ.ಟಿ.ರವಿ ಮನೆಗೆ ನೋಟೀಸ್ ನೀಡಲು ಹೋದ ಪೊಲೀಸರು ವಾಪಸ್

ಚಿಕ್ಕಮಗಳೂರು: ದ್ವೇಷ ಭಾಷಣ ಪ್ರಕರಣದಲ್ಲಿ ಎಂಎಲ್‌ಸಿ ಸಿ.ಟಿ. ರವಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ, ನಗರ...