Home namma chikmagalur chikamagalur ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಕೊಚ್ಚಿ ಕೊಲೆ
chikamagalurCrime NewsHomeLatest Newsnamma chikmagalur

ಕುಡಿದ ಮತ್ತಿನಲ್ಲಿ ತಂದೆಯಿಂದ ಮಗನ ಕೊಚ್ಚಿ ಕೊಲೆ

Share
Share

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.

ಕುಡಿದ ಮತ್ತಿನಲ್ಲಿ ತಂದೆಯೇ ತನ್ನ ಮಗನನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಗ್ರಾಮಸ್ಥರನ್ನು ಬೆಚ್ಚಿಬೀಳಿಸಿದೆ. ಈ ದಾರುಣ ಘಟನೆಯಲ್ಲಿ ಪ್ರದೀಪ್ ಆಚಾರ್ (29) ಎಂಬ ಯುವಕ ಮೃತಪಟ್ಟಿದ್ದಾನೆ.

ಮೃತ ಪ್ರದೀಪ್‌ನ ತಂದೆ ರಮೇಶ್ ಆಚಾರ್ ಕ್ಷುಲ್ಲಕ ಕಾರಣಗಳಿಗೂ ಆಗಾಗ್ಗೆ ಮನೆಯಲ್ಲೇ ಗಲಾಟೆ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಅಪ್ಪ-ಮಗನ ನಡುವೆ ಮದ್ಯದ ವಿಚಾರವಾಗಿ ನಿರಂತರ ಜಗಳಗಳು ನಡೆಯುತ್ತಿದ್ದು, ಅವರ ಕಾಟ ತಾಳಲಾರದೆ ಪ್ರದೀಪ್‌ನ ತಾಯಿ ಕೆಲ ಸಮಯದ ಹಿಂದೆಯೇ ಮನೆ ಬಿಟ್ಟು ಹೋಗಿದ್ದರು.

ಈ ಹಿನ್ನೆಲೆಯಲ್ಲಿ ಮನೆಯಲ್ಲಿ ಅಪ್ಪ ಮತ್ತು ಮಗ ಇಬ್ಬರೇ ವಾಸವಿದ್ದರು ಎನ್ನಲಾಗಿದೆ. ನಿನ್ನೆ ರಾತ್ರಿ ಮದ್ಯಪಾನ ಮಾಡಿದ ರಮೇಶ್ ಆಚಾರ್ ಮಗನೊಂದಿಗೆ ಜಗಳವಾಡಿ ಆಕ್ರೋಶದ ಮಿತಿಮೀರಿ ಮಚ್ಚಿನಿಂದ ಪ್ರದೀಪ್ ಮೇಲೆ ಹಲ್ಲೆ ನಡೆಸಿದ್ದಾನೆ.

ತೀವ್ರವಾಗಿ ಗಾಯಗೊಂಡ ಪ್ರದೀಪ್ ರಕ್ತದ ಮಡುವಿನಲ್ಲಿ ಬಿದ್ದಿದು ಆರೋಪಿಯು ಯಾವುದೇ ಸಹಾಯ ಮಾಡದೇ ಮಲಗಿದ್ದಾನೆ ಎನ್ನಲಾಗಿದೆ.

ಇಡೀ ರಾತ್ರಿ ರಕ್ತಸ್ರಾವದಿಂದ ಬಳಲಿದ ಪ್ರದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಬೆಳಿಗ್ಗೆ ಎದ್ದು ನೋಡಿದ ರಮೇಶ್ ಆಚಾರ್, ಮಗನ ಮೃತದೇಹವನ್ನು ಮನೆಯ ಹಾಲ್‌ನಿಂದ ಹೊರಾಂಗಣಕ್ಕೆ ಎಳೆದು ತಂದಿರುವುದು ಅಕ್ಕಪಕ್ಕದವರ ಗಮನಕ್ಕೆ ಬಂದಿದೆ.

ಅನುಮಾನಗೊಂಡ ಗ್ರಾಮಸ್ಥರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು

Drunk father hacks son to death

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...