Home namma chikmagalur chikamagalur ಶಿಕ್ಷಕರು-ಉಪನ್ಯಾಸಕರ ನೇಮಕ ಮಾಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು
chikamagalurHomeLatest Newsnamma chikmagalur

ಶಿಕ್ಷಕರು-ಉಪನ್ಯಾಸಕರ ನೇಮಕ ಮಾಡಿ ಶಿಕ್ಷಣಕ್ಕೆ ಆದ್ಯತೆ ನೀಡಬೇಕು

Share
Oplus_16908288
Share

ಚಿಕ್ಕಮಗಳೂರು- ಸಂವಿಧಾನ ಬದ್ಧ ಹಕ್ಕುಗಳಾದ ಶಿಕ್ಷಣ ಮತ್ತು ಆರೋಗ್ಯಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರು ಮತ್ತು ಉಪನ್ಯಾಸಕರನ್ನು ನೇಮಕ ಮಾಡುವ ಮೂಲಕ ಶಿಕ್ಷಣಕ್ಕೆ ಆದ್ಯತೆ ನೀಡಬೇಕು ಎಂದು ವಿಧಾನಪರಿಷತ್ ಶಾಸಕ ಎಸ್.ಎಲ್ ಬೋಜೇಗೌಡ ಆಗ್ರಹಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಹೇಳುವ ಸರ್ಕಾರ, ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಮೂಲ ಸೌಕರ್ಯಗಳ ಜೊತೆಗೆ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಬೇಕೆಂದು ಒತ್ತಾಯಿಸಿದರು.

ಶಿಕ್ಷಕರ ಕೊರತೆಯ ನಡುವೆಯು ಎಸ್‌ಎಸ್‌ಎಲ್‌ಸಿ, ಪಿಯುಸಿ ಯಲ್ಲಿ ಜಿಲ್ಲೆಯಲ್ಲಿ ಒಟ್ಟು ೧೬೫ ಶಾಲೆಗಳಲ್ಲಿ ಶೇ ೧೦೦ ರಷ್ಟು ಫಲಿತಾಂಶ ಬಂದಿದೆ, ಈ ನಿಟ್ಟಿನಲ್ಲಿ ಶೈಕ್ಷಣಿಕ ವರ್ಷದ ಆರಂಭದಲ್ಲೆ ಪಠ್ಯ-ಪುಸ್ತಕಗಳನ್ನು ವಿತರಣೆ ಮಾಡಬೇಕು, ಉಪನ್ಯಾಸಕರ ಕೊರತೆ ಎಂಬ ನೆಪವೊಡ್ಡಿ ಜೂನಿಯರ್ ಕಾಲೇಜುಗಳನ್ನು ಮುಚ್ಚುವ ಹುನ್ನಾರ ನೆಡೆಯುತ್ತಿದೆ, ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಪ್ರತಿ ವಿಷಯಕ್ಕೆ ಪೂರ್ಣ ಪ್ರಮಾಣದ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ಹೇಳಿದರು.

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬೋಧನೆ ಮಾಡುವುದನ್ನು ಹೊರತುಪಡಿಸಿ ಉಳಿದ ಎಲ್ಲಾ ಕೆಲಸಗಳನ್ನು ಶಿಕ್ಷಕರ ಹೆಗಲಿಗೆ ಹಾಕುತ್ತಿರುವ ಅವೈಜ್ಞಾನಿಕ ನೀತಿಯನ್ನು ಖಂಡಿಸಿದ ಅವರು ಕೂಡಲೇ ಅನ್ಯ ಕೆಲಸಗಳಿಗೆ ಶಿಕ್ಷಕರನ್ನು ಬಳಸಿಕೊಳ್ಳುತ್ತಿರುವುದನ್ನು ಕೈ ಬಿಡಬೇಕೆಂದು ಒತ್ತಾಯಿಸಿದರು.

ಪ್ರಸ್ತುತ ರಾಜ್ಯದಲ್ಲಿ ೧೩೪೦ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಿದ್ದು, ಈ ಕಾಲೇಜುಗಳಿಗೆ ಮಂಜೂರಾದ ಹುದ್ದೆಗಳ ಒಟ್ಟು ಸಂಖ್ಯೆ ೧೨೯೧೩ ಆಗಿದೆ ಆದರೆ ಪ್ರಸ್ತುತ ೭೬೪೪ ಉಪನ್ಯಾಸಕರು ಕಾರ್ಯ ನಿರ್ವಹಿಸುತ್ತಿದ್ದು, ೫೨೬೯ ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದರು.

ಈ ಉಪನ್ಯಾಸಕರಲ್ಲಿ ಸುಮಾರು ಶೇ ೫೦ ರಷ್ಟು, ಪ್ರಭಾರಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಮೂಲಭೂತ ಸೌಕರ್ಯಗಳ ಕೊರತೆ ಜೊತೆಗೆ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಡಿ’ ಹುದ್ದೆಗಳು ಖಾಲಿ ಇದ್ದರು ಅವುಗಳನ್ನು ನಿಭಾಯಿಸಿಕೊಂಡು ತರಗತಿಗಳನ್ನು ನೆಡೆಸಲಾಗುತ್ತಿದೆ, ಜಿಲ್ಲೆಯಲ್ಲಿ ಉತ್ತಮ ಫಲಿತಾಂಶ ಬರಲು ಶಿಕ್ಷಕರುಗಳ ಶ್ರಮ ಶ್ಲಾಘನೀಯ ಎಂದರು.

ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ. ಇಲಾಖೆ ಇತ್ತೀಚೆಗೆ ಹೊರಡಿಸಿರುವ ಆದೇಶದನ್ವಯ ಉಪನ್ಯಾಸಕರು ರಜಾ ಅವಧಿಯಲ್ಲಿ ಬಿರುಬಿಸಿಲಿನ ನಡುವೆ ದಾಖಲಾತಿ ಆಂದೋಲನ ನೆಡೆಸಬೇಕಾಗಿದೆ ಜೊತೆಗೆ ಇದೇ ಸಮಯದಲ್ಲಿ ೪ ಸಾವಿರಕ್ಕೂ ಹೆಚ್ಚು ಉಪನ್ಯಾಸಕರನ್ನು ವಾರದ ೩ ದಿನ ಬೇರೊಂದು ಕಾಲೇಜಿಗೆ ನಿಯೋಜನೆ ಮಾಡುವಂತೆ ನಿರ್ದೇಶಕರು ಜಿಲ್ಲಾ ಉಪ ನಿರ್ದೇಶಕರಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ನೀಟ್ ಪರೀಕ್ಷೆಯಲ್ಲಿ ನೆಡೆದಿರುವ ಹಗರಣಕ್ಕೆ ಸಂಬಂದಿಸಿದಂತೆ ವಿದ್ಯಾರ್ಥಿಗಳನ್ನು ತಪ್ಪಿತಸ್ಥರನ್ನಾಗಿ ಮಾಡುವುದನ್ನು ಬಿಟ್ಟು, ವ್ಯವಸ್ಥೆ ಮತ್ತು ಕಾರಣಕರ್ತರಾದವರನ್ನು ಪತ್ತೆಹಚ್ಚಿ ಶಿಕ್ಷೆಗೆ ಗುರಿಪಡಿಸಬೇಕೆಂದು ಆಗ್ರಹಿಸಿದ ಅವರು ಇದರ ಹೊಣೆಯನ್ನು ಸರ್ಕಾರ ಹೊರಬೇಕು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ಮುಖಂಡರುಗಳಾದ ದಿನೇಶ್, ಸಿ.ಕೆ ಮೂರ್ತಿ, ದೇವಿಪ್ರಸಾದ್, ಸಂತೋಷ್, ಸತೀಶ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Education should be prioritized by appointing teachers and lecturers.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...