Home Crime News ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು
Crime NewsHomeKadurLatest Newsnamma chikmagalur

ಎಮ್ಮೆದೊಡ್ಡಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ವೃದ್ಧನ ಸಾವು

Share
Share

ಕಡೂರು: ತಾಲ್ಲೂಕಿನ ಎಮ್ಮೆದೊಡ್ಡಿ ರಸ್ತೆಯ ಕರಿಯಮ್ಮ ದೇವಸ್ಥಾನದ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೃದ್ಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ಮೃತರನ್ನು ಶೇಖರಪ್ಪ ಎಂದು ಗುರುತಿಸಲಾಗಿದ್ದು, ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಡೂರು ಕಡೆಯಿಂದ ಬಂದ ಕೆ.ಎ-14 ಇ.ಕ್ಯೂ-7678 ಸಂಖ್ಯೆಯ ಮೋಟಾರ್ ಸೈಕಲ್ ಚಾಲಕ ಅತಿವೇಗ ಮತ್ತು ಅಜಾಗರುಕತೆಯಿಂದ ಚಾಲನೆ ಮಾಡಿ ಡಿಕ್ಕಿ ಹೊಡೆದಿದ್ದಾನೆ.

ಈ ಅಪಘಾತದ ತೀವ್ರತೆಗೆ ಶೇಖರಪ್ಪ ಅವರ ತಲೆ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗಿತ್ತು.

ಅಪಘಾತಕ್ಕೀಡು ಮಾಡಿದ ಮೋಟಾರ್ ಸೈಕಲ್ ಚಾಲಕ ಹರಳಘಟ್ಟ ಗ್ರಾಮದ ಮನ್ ದೀಪ್ ಎಂಬುವವರಿಗೂ ಗಾಯಗಳಾಗಿದ್ದು, ಗಾಯಾಳು ಶೇಖರಪ್ಪ ಅವರನ್ನು ತಕ್ಷಣವೇ ಕಡೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮತ್ತಿಘಟ್ಟದ ಬಳಿ ಅವರು ಕೊನೆಯುಸಿರೆಳೆದಿದ್ದಾರೆ.

ಈ ಸಂಬಂಧ ಮೃತರ ಪುತ್ರ ಮನುದೀಪ್ ಬಿನ್ ಪುಟ್ಟರಂಗಪ್ಪ ಅವರು ನೀಡಿದ ದೂರಿನ ಮೇರೆಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Elderly man dies in accident on Emmedoddi road

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...