Home namma chikmagalur chikamagalur ಅಯ್ಯನಕೆರೆ ಕ್ರಾಸ್ ಬಳಿ ಬೈಕ್ ಡಿಕ್ಕಿಗೆ ಪಾದಚಾರಿ ವೃದ್ಧ ಸಾವು
chikamagalurCrime NewsHomeLatest Newsnamma chikmagalur

ಅಯ್ಯನಕೆರೆ ಕ್ರಾಸ್ ಬಳಿ ಬೈಕ್ ಡಿಕ್ಕಿಗೆ ಪಾದಚಾರಿ ವೃದ್ಧ ಸಾವು

Share
Share

ಸಖರಾಯಪಟ್ಟಣ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ಸಖರಾಯಪಟ್ಟಣದ ಅಯ್ಯನಕೆರೆ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಚಿನ್ನಪ್ಪ ಎಂದು ಗುರುತಿಸಲಾಗಿದೆ. ನ.25ರಂದು ಸಂಜೆ ಸುಮಾರು 4.30ಕ್ಕೆ ಅವರು ಅಯ್ಯನಕೆರೆ ಕ್ರಾಸ್ ಬಳಿ ನಡೆದುಕೊಂಡು ಹೋಗುತ್ತಿದ್ದಾಗ KA-18-W-2038 ಬೈಕ್‌ನ ಸವಾರ ಅಶೋಕ್, ಬುಕ್ಕಸಾಗರ, ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದಾನೆ ಎನ್ನಲಾಗಿದೆ.

ಅಪಘಾತದಲ್ಲಿ ಚಿನ್ನಪ್ಪ ಅವರ ತಲೆ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಚಿಕ್ಕಮಗಳೂರು, ಹಾಸನ ಹಾಗೂ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಚಿಕ್ಕಮಗಳೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನ.26ರಂದು ಬೆಳಗ್ಗೆ ಸುಮಾರು 4.45ಕ್ಕೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತರ ಮೊಮ್ಮಗಳು ಅರ್ಪಿತಾ ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಬೈಕ್ ಸವಾರ ಅಶೋಕ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Elderly pedestrian dies after being hit by a bike near Ayyanakere Cross

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಪಂನ 36 ಕ್ಷೇತ್ರಗಳಿಗೆ ಅಂತಿಮ ಮೀಸಲಾತಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ನವೆಂಬರ್ 23ರಂದು ಹೊರಡಿಸಿರುವ ಕರ್ನಾಟಕ ರಾಜಪತ್ರದ ಅಧಿಸೂಚನೆಯಲ್ಲಿ...

ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಕ

ಕನ್ನಡ,ಕನ್ನಡ ಬನ್ನಿ ನಮ್ಮ ಸಂಗಡ ಎನ್ನುವ ಬದಲಿಗೆ ಕನ್ನಡ, ಕನ್ನಡ ನಮಗೆ ದೇಣಿಗೆ ನಿಮಗೆ ಬೇಕಾದ ಪ್ರಶಸ್ತಿಗಳು ಎನ್ನುವೇ ಅಂತಕ್ಕೆ ಸಾಹಿತ್ಯ ಪರಿಷತ್ ಗೆ ವಕ್ಕರಿಸಿರುವ ಕೆಲವರಿಗೆ ಊಟ,ತಿಂಡಿ,ನಿದ್ದೆ ಬರುವುದು ಕಡು...

Related Articles

ಸಚಿವರ ಸಭೆ ಬಹಿಷ್ಕರಿಸಲು ಸಿ.ಟಿ. ರವಿ ನಿರ್ಧಾರ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿಗೆ ಆಗಮಿಸಿರುವ ಕಾಡಾನೆಗಳನ್ನು ಭದ್ರಾ...

ಅನ್ನದಾತರ “ಕಿವಿಗೆ “ಹೂವು “ಶಾಸಕಿ ನಯನ ಹೈ ಡ್ರಾಮಾ.

ಮೂಡಿಗೆರೆ :  ಇಲ್ಲಿನ ಕಾಫಿ ಬೆಳೆಗಾರರು, ರಹಿತರು, ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡು ಪ್ರತಿ ವರ್ಷ...

ಆನೆ ಹಾವಳಿಗೆ ಬೇಸತ್ತ ರೈತ-ಪ್ರತಿಭಟನೆ ಸ್ಥಳದಲ್ಲೇ ವಿಷ ಸೇವಿಸಲು ಯತ್ನ

ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ತೋಟ ಹಾಗೂ ಬದುಕು ಕಳೆದುಕೊಂಡ ರೈತನೊಬ್ಬ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲೇ ವಿಷ...

ಹೈಡ್ರಾಮಾಕ್ಕೆ ತಾತ್ಕಾಲಿಕ ತೆರೆ-ತವರು ಸೇರಿದ 21 ಗಜಪಡೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಕಾಡಾನೆಗಳನ್ನು ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರ ಕಾಫಿನಾಡಿನಲ್ಲಿ ಭಾರಿ...