Home namma chikmagalur chikamagalur ಅಕ್ಷಯಬಾರ್ ಬಳಿ ವೃದ್ಧೆಗೆ ಜೀಪ್ ಡಿಕ್ಕಿಯಲ್ಲಿ ಚಿಕಿತ್ಸೆ ಫಲಿಸದೆ ಸಾವು
chikamagalurCrime NewsHomeLatest Newsnamma chikmagalur

ಅಕ್ಷಯಬಾರ್ ಬಳಿ ವೃದ್ಧೆಗೆ ಜೀಪ್ ಡಿಕ್ಕಿಯಲ್ಲಿ ಚಿಕಿತ್ಸೆ ಫಲಿಸದೆ ಸಾವು

Share
Share

ಚಿಕ್ಕಮಗಳೂರು: ಮಲ್ಲಂದೂರು ರಸ್ತೆಯ ಅಕ್ಷಯ್ ಬಾರ್ ಬಳಿ ಕುಳಿತಿದ್ದ ವೃದ್ಧೆಯೊಬ್ಬರಿಗೆ ಜೀಪ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತರನ್ನು ಅಂಜಲಿ ಅಲಿಯಾಸ್ ಮೇರಿಯಮ್ಮ ಎಂದು ಗುರುತಿಸಲಾಗಿದೆ. ಅವರು ಮಲ್ಲಂದೂರು ರಸ್ತೆಯ ಗೋ ಗ್ಯಾಸ್‌ನಲ್ಲಿ ವಾಚ್‌ಮನ್ ಆಗಿ ಕೆಲಸ ಮಾಡುತ್ತಿದ್ದರು.

ಘಟನೆಗೆ ಸಂಬಂಧಿಸಿದಂತೆ ಮೃತರ ಮೊಮ್ಮಗ ಜೀವನ್ ಅವರು ನ.26ರಂದು ಸಂಚಾರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಪ್ರಕಾರ, ನ.24ರಂದು ಅಂಜಲಿ ಅವರು ಗೋ ಗ್ಯಾಸ್‌ನಲ್ಲಿಯೇ ರಾತ್ರಿ ಉಳಿದುಕೊಳ್ಳುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದರು. ನ.25ರಂದು ಬೆಳಗ್ಗೆ ಮಲ್ಲಂದೂರು ರಸ್ತೆಯ ಅಕ್ಷಯ್ ಬಾರ್ ಬಳಿ ನಿತ್ರಾಣ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅವರನ್ನು ಚಿಕ್ಕಮಗಳೂರು ಜಿಲ್ಲಾ ಎಂ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದರು.

ಈ ಸಂಬಂಧ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ.26/2026, ಕಲಂ 194 ಬಿಎನ್‌ಎಸ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಹಾಗೂ ಮೃತರ ಕುಟುಂಬಸ್ಥರು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಲಭ್ಯವಿದ್ದ ಸಿ.ಸಿ.ಟಿ.ವಿ. ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಪಘಾತದ ದೃಶ್ಯ ಬೆಳಕಿಗೆ ಬಂದಿದೆ.

ನ.25ರಂದು ಬೆಳಗ್ಗೆ ಸುಮಾರು 10.30ರ ವೇಳೆಗೆ ಅಂಜಲಿ ಅವರು ಅಕ್ಷಯ್ ಬಾರ್ ಮುಂಭಾಗ ಕುಳಿತಿದ್ದಾಗ, ಅಲ್ಲಿಗೆ ಬಂದ KA-18-MD-0002 ನೋಂದಣಿ ಸಂಖ್ಯೆಯ ಜೀಪ್‌ನ್ನು ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿಕೊಂಡು ಬಂದು ಅವರಿಗೆ ಡಿಕ್ಕಿ ಹೊಡೆದಿರುವುದು ಸಿ.ಸಿ.ಟಿ.ವಿ. ದೃಶ್ಯಾವಳಿಯಲ್ಲಿ ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಡಿಕ್ಕಿಯ ಪರಿಣಾಮ ಗಂಭೀರವಾಗಿ ಗಾಯಗೊಂಡ ಅಂಜಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊ.ನಂ.123/2026, ಕಲಂ 281, 106(1) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Elderly woman dies after being hit by a jeep near Akshaya Bar; treatment proves unsuccessful.

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ಜಿಪಂನ 36 ಕ್ಷೇತ್ರಗಳಿಗೆ ಅಂತಿಮ ಮೀಸಲಾತಿ ಪ್ರಕಟ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರು ಜಿಲ್ಲೆಯ 36 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳ ಅಂತಿಮ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ನವೆಂಬರ್ 23ರಂದು ಹೊರಡಿಸಿರುವ ಕರ್ನಾಟಕ ರಾಜಪತ್ರದ ಅಧಿಸೂಚನೆಯಲ್ಲಿ...

ಕನ್ನಡ ಸಾಹಿತ್ಯ ಪರಿಷತ್ ಘಟಕಗಳ ನಿರ್ವಹಣೆಗೆ ಆಡಳಿತಾಧಿಕಾರಿ ನೇಮಕ

ಕನ್ನಡ,ಕನ್ನಡ ಬನ್ನಿ ನಮ್ಮ ಸಂಗಡ ಎನ್ನುವ ಬದಲಿಗೆ ಕನ್ನಡ, ಕನ್ನಡ ನಮಗೆ ದೇಣಿಗೆ ನಿಮಗೆ ಬೇಕಾದ ಪ್ರಶಸ್ತಿಗಳು ಎನ್ನುವೇ ಅಂತಕ್ಕೆ ಸಾಹಿತ್ಯ ಪರಿಷತ್ ಗೆ ವಕ್ಕರಿಸಿರುವ ಕೆಲವರಿಗೆ ಊಟ,ತಿಂಡಿ,ನಿದ್ದೆ ಬರುವುದು ಕಡು...

Related Articles

ಸಚಿವರ ಸಭೆ ಬಹಿಷ್ಕರಿಸಲು ಸಿ.ಟಿ. ರವಿ ನಿರ್ಧಾರ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಬೇಲೂರು ಭಾಗದಿಂದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿಗೆ ಆಗಮಿಸಿರುವ ಕಾಡಾನೆಗಳನ್ನು ಭದ್ರಾ...

ಅನ್ನದಾತರ “ಕಿವಿಗೆ “ಹೂವು “ಶಾಸಕಿ ನಯನ ಹೈ ಡ್ರಾಮಾ.

ಮೂಡಿಗೆರೆ :  ಇಲ್ಲಿನ ಕಾಫಿ ಬೆಳೆಗಾರರು, ರಹಿತರು, ಕೂಲಿ ಕಾರ್ಮಿಕರು ಪ್ರಾಣ ಕಳೆದುಕೊಂಡು ಪ್ರತಿ ವರ್ಷ...

ಆನೆ ಹಾವಳಿಗೆ ಬೇಸತ್ತ ರೈತ-ಪ್ರತಿಭಟನೆ ಸ್ಥಳದಲ್ಲೇ ವಿಷ ಸೇವಿಸಲು ಯತ್ನ

ಚಿಕ್ಕಮಗಳೂರು: ಕಾಡಾನೆಗಳ ಹಾವಳಿಯಿಂದ ತೋಟ ಹಾಗೂ ಬದುಕು ಕಳೆದುಕೊಂಡ ರೈತನೊಬ್ಬ ಪ್ರತಿಭಟನೆ ನಡೆಯುತ್ತಿದ್ದ ಸ್ಥಳದಲ್ಲೇ ವಿಷ...

ಹೈಡ್ರಾಮಾಕ್ಕೆ ತಾತ್ಕಾಲಿಕ ತೆರೆ-ತವರು ಸೇರಿದ 21 ಗಜಪಡೆ

ಚಿಕ್ಕಮಗಳೂರು: ಹಾಸನ ಜಿಲ್ಲೆಯ ಕಾಡಾನೆಗಳನ್ನು ಚಿಕ್ಕಮಗಳೂರಿನ ಭದ್ರಾ ಅಭಯಾರಣ್ಯಕ್ಕೆ ಸ್ಥಳಾಂತರಿಸುವ ಸರ್ಕಾರದ ನಿರ್ಧಾರ ಕಾಫಿನಾಡಿನಲ್ಲಿ ಭಾರಿ...