ಚಿಕ್ಕಮಗಳೂರು: ಹೊಲದಲ್ಲಿ ಬಾಳೆ ಗಿಡ ನೆಡುವ ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಮೇಲೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿದ ಪರಿಣಾಮ ವೃದ್ಧ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಶಿವಪ್ಪ (58) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಬಾಳೆ ಗಿಡ ನೆಡುವ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ನೂರಾರು ಜೇನುನೊಣಗಳು ಕಾರ್ಮಿಕರ ಮೇಲೆ ದಾಳಿ ನಡೆಸಿವೆ. ಈ ವೇಳೆ ಇಬ್ಬರು ಕಾರ್ಮಿಕರು ದಾಳಿಯಿಂದ ತಪ್ಪಿಸಿಕೊಂಡಿದ್ದು, ಶಿವಪ್ಪ ಅವರು ಜೇನುನೊಣಗಳ ದಾಳಿಗೆ ಸಿಲುಕಿದ್ದಾರೆ.
ಶಿವಪ್ಪ ಅವರ ಮುಖ, ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಜೇನುನೊಣಗಳು ತೀವ್ರವಾಗಿ ಕಚ್ಚಿವೆ. ತಕ್ಷಣ ಅವರನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Elderly worker falls victim to honeybee attack
Leave a comment