Home Crime News ಒಂಟಿ ಕಾಡಾನೆ ದಾಳಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕ ಸಾವು
Crime News

ಒಂಟಿ ಕಾಡಾನೆ ದಾಳಿ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕ ಸಾವು

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಮತ್ತು ಮಾನವ ಸಂಘರ್ಷ ಮುಂದುವರೆದಿದೆ. ನರಸಿಂಹರಾಜಪುರ ತಾಲೂಕಿನ ಸೀತೂರು ಗ್ರಾಮದಲ್ಲಿ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೃಷಿಕನ ಮೇಲೆ ಒಂಟಿ ಕಾಡಾನೆ ಒಂದು ದಾಳಿ ನಡೆಸಿ ವಿಕೃತವಾಗಿ ಬಲಿ ಪಡೆದಿದೆ. ಆನೆ ದಾಳಿಗೆ ಉಮೇಶ್ (45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿಷಯ ತಿಳಿಯುತ್ತಿದಂತೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು ಕಳೆದ ಹಲವು ದಿನಗಳಿಂದ ಈ ಭಾಗದಲ್ಲಿ ಕಾಡಾನೆಗಳು ಉಪಟಳ ನೀಡುತ್ತಿರುವ ಕುರಿತು ಸ್ಥಳೀಯ ಶಾಸಕರು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದ್ರು ಯಾವುದೇ ಪ್ರಯೋಜನ ಆಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದೆರಡು ವರ್ಷದಲ್ಲಿ ಕಾಡಾನೆ ದಾಳಿಗೆ ಹತ್ತಾರು ಜೀವಗಳು ಬಲಿ ಪಡೆದಿದ್ದರೆ ಮತ್ತೊಂದೆಡೆ ಚಿಕ್ಕಮಗಳೂರು ತಾಲೂಕಿನಲ್ಲಿ ಬೀಟಮ್ಮ ಗ್ಯಾಂಗ್ ನ ಉಪಟಳ ಮುಂದುವರೆದಿದೆ.

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...