Home ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ
HomechikamagalurLatest Newsnamma chikmagalur

ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮ

Share
Share

ಚಿಕ್ಕಮಗಳೂರು: ಜ್ಯೋತಿನಗರದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣ ದಲ್ಲಿ ಈಚೆಗೆ ಭಾರತ ಸರ್ಕಾರ, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯ, ಬೆಂಗಳೂರು, ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ, ನಿರುದ್ಯೋಗಿ ಯುವಕರ ಅನುಕೂಲಕ್ಕಾಗಿ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ನಡೆಸಲಾಯಿತು.

ಲೀಡ್ ಬ್ಯಾಂಕ್ ಮ್ಯಾನೇಜರ್ ಹೆಚ್.ಎನ್.ಮಹೇಶ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜಿಲ್ಲೆಯಲ್ಲಿ ಲಭ್ಯವಿರುವ ನೈಸರ್ಗಿಕ ಸಂಪನ್ಮೂಲ, ಮಾರುಕಟ್ಟೆ, ಬೇಡಿಕೆ ಆಧಾರಿತ ಉತ್ಪನ್ನಗಳನ್ನು ಎಂಎಸ್ ಎಂಇಗಳ ಸ್ಥಾಪನೆಗೆ ಬಳಸಿಕೊಳ್ಳಬೇಕು. ಜೊತೆಗೆ ಬ್ಯಾಂಕ್‌ಗಳಲ್ಲಿ ಲಭ್ಯವಿರುವ ಹಣಕಾಸು ಯೋಜನೆಗಳ ಬಗ್ಗೆ ಮಾಹಿತಿ ಅರಿವು ಹೊಂದಿರಬೇಕು ಎಂದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಹೇಶ್ ಕುಮಾರ್ ಅಧ್ಯಕ್ಷತೆ ವಹಿಸಿ ಮಾತನಾಡಿ ಉದ್ಯಮಿ, ಉದ್ಯಮಶೀಲತೆ, ಗುಣಗಳು, ಯೋಜನಾ ವರದಿಗಳನ್ನು ಹೇಗೆ ತಯಾರಿಸುವುದು ಮತ್ತು ಸಲ್ಲಿಸು ವುದು ಮತ್ತು ಯಶಸ್ಸಿನ ಕಥೆಗಳ ಬಗ್ಗೆ ಕೈಗಾರಿಕಾ ಕೇಂದ್ರವನ್ನು ನೇರವಾಗಿ ಸಂಪರ್ಕಿಸಬಹುದು ಎಂದು ತಿಳಿಸಿದರು.

ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಸಹಾಯಕ ನಿರ್ದೇ ಶಕ ಜಿ.ನಾಗರಾಜ ಉದ್ಯಮಶೀಲತಾ ಜಾಗೃತಿ ಕಾರ್ಯಕ್ರಮವನ್ನು ಸಂಯೋಜಿಸಿದರು ಮತ್ತು ಅಭಿವೃದ್ಧಿ ಆಯುಕ್ತರ ಕಚೇರಿಯ ಹಾಗೂ ವಿಶೇ? ಯೋಜನೆಗಳು ಮತ್ತು ಹೊಸ ಉದ್ಯಮಗಳನ್ನು ಸ್ಥಾಪಿಸಲು ಆಸಕ್ತಿ ಹೊಂದಿರುವವರಿಗೆ ಮತ್ತು ಅಸ್ತಿತ್ವದಲ್ಲಿರುವ ಉದ್ಯಮಿಗಳಿಗೆ ಮಾರ್ಗಸೂಚಿಗಳನ್ನು ಮಾಹಿತಿ ನೀಡಿದರು.

ಈ ಸಂದರ್ಬದಲ್ಲಿ ಸಂಪನ್ಮೂಲ ವ್ಯಕ್ತಿ ಮೋಹನ್‌ಶಂಕರ್ ಡಿಜಿಟಲ್ ಮಾರ್ಕೆಟಿಂಗ್, ಕೃತಕ ಬುದ್ಧಿ ಮತ್ತೆ, ಪರಿಕರಗಳ ವೆಬ್‌ಸೈಟ್ ವಿನ್ಯಾಸ ಉಪನ್ಯಾಸ ನೀಡಿದರು. ಜಿಲ್ಲೆಯಲ್ಲಿ ಸುಮಾರು ೬೦ ಜನರು ಉದ್ಯ ಮಶೀಲತಾ ಜಾಗೃತಿ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Entrepreneurship Awareness Program for Youth

 

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...