Home Crime News ಹಿಂದು ದೇವರುಗಳ ಬಗ್ಗೆ ಅಶ್ಲೀಲ ಪೋಸ್ಟ್ : ಎಫ್ಐಆರ್ ದಾಖಲು
Crime News

ಹಿಂದು ದೇವರುಗಳ ಬಗ್ಗೆ ಅಶ್ಲೀಲ ಪೋಸ್ಟ್ : ಎಫ್ಐಆರ್ ದಾಖಲು

Share
Share

ಚಿಕ್ಕಮಗಳೂರು : ಸಾಮಾಜಿಕ ಜಾಲತಾಣದಲ್ಲಿ ದೇವಾಲಯದ ಬಗ್ಗೆ ಅಶ್ಲೀಲ ಕಾಮೆಂಟ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಳಸ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದ್ ರಫಿ ದೂರಿನ ಹಿನ್ನೆಲೆಯಲ್ಲಿ ಕಳಸ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಈ ನಡುವೆ ಇಂದು ಅದರ ಜೊತೆಗೆ ಅದೇ ಪ್ರಕರಣ ಸಂಬಂಧ ಆರೋಪಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಹಾಗೂ ದೇವಸ್ಥಾನದ ಭಕ್ತರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಿಂದೂ ದೇವಾಲಯಗಳ ಬಗ್ಗೆ ಅಂಜುಮ್ ಶೇಖ್ ಹೆಸರಿನಲ್ಲಿ ಶೃಂಗೇರಿ ಶಾರದಾಂಬೆ ದೇವಾಲಯ, ಕೊಲ್ಲೂರು ಮೂಕಾಂಬಿಕ, ತಿರುಪತಿ ತಿಮ್ಮಪ್ಪ, ಹೊರನಾಡು ಅನ್ನಪೂರ್ಣೇಶ್ವರಿ ಮತ್ತು ಗಣಪತಿ ದೇವರುಗಳ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಾಮೆಂಟ್ ಮಾಡಿದ್ದಾನೆ.

ಇದು ಹಿಂದೂ ಮತ್ತು ಮುಸ್ಲಿಂಮರ ನಡುವೆ ಕೋಮುದ್ವೇಷವನ್ನು ಹಚ್ಚು ಹಾಕುವ ಉದ್ದೇಶದಿಂದ, ಎರಡು ಪಂಗಡಗಳ ನಡುವೆ ದ್ವೇಷ ಸೃಷ್ಠಿ ಮಾಡುವ ಕಾರಣದಿಂದ ಉದ್ದೇಶಪೂರ್ವಕವಾಗಿಯೇ ಮಾಡಲಾಗಿದೆ. ಹೀಗಾಗಿ ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್‌ ಹಾಗೂ ಹೊರನಾಡು ಅನ್ನಪೂರ್ಣೇಶ್ವರಿ ದೇವಸ್ಥಾನದ ಭಕ್ತರು ಕಳಸ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...

₹8 ಕೋಟಿ ಹಣ, ಚಿನ್ನಾಭರಣ ದೋಚಿ 9 ವರ್ಷದ ಮಗನೊಂದಿಗೆ ಪತಿ ಪರಾರಿ

ಕೊಪ್ಪ: ಪತಿಯೊಬ್ಬ ತನ್ನ ಪತ್ನಿಗೆ ದೀರ್ಘಕಾಲದಿಂದ ದೈಹಿಕ, ಮಾನಸಿಕ ಹಿಂಸೆ ನೀಡಿ, ಕೋಟ್ಯಂತರ ರೂಪಾಯಿ ಹಣ,...

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...