Home namma chikmagalur chikamagalur ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೃಷಿ ಪರಿಕರಗಳ ಮಾರಾಟ ಸಂಘದ ವತಿಯಿಂದ ಜಿಲ್ಲೆಯಲ್ಲಿ ಸೌಹಾಧ ಬ್ಯಾಂಕ್ ಸ್ಥಾಪನೆ ಮಾಡಲು ಅಗತ್ಯವಾಗಿ ಬೇಕಾದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಸಂಘದ ರಾಜ್ಯಾಧ್ಯಕ್ಷ ಬಸವನಗೌಡ ಮಾಲಿ ಪಾಟೀಲ್ ಭರವಸೆ ನೀಡಿದರು.

ಅವರು ಮಂಗಳವಾರ ಎಐಟಿ ಕಾಲೇಜು ವೃತ್ತದಲ್ಲಿ ಇರುವ ಒಕ್ಕಲಿಗರ ಸಮುದಾಯ ಭವನದಲ್ಲಿ ಜಿಲ್ಲಾ ಕೃಷಿ ಪರಿಕರಗಳ ಮಾರಾಟಗಾರರ ಸಂಘ ಏರ್ಪಡಿಸಿದ್ದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿ  ಮುಂದಿನ ದಿನಗಳಲ್ಲಿ ರೈತರಿಗೆ ಕೃಷಿ ಇಲಾಖೆ ಸಹಯೋಗದಲ್ಲಿದೊರೆಯುವ ಹಲವಾರು ಸಾಮಾಜಿಕ ಕಾರ್ಯಗಳ ಜೊತೆಗೆ ಲಭ್ಯವಿರುವ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿರುವುದಾಗಿಅವರು ಹೇಳಿ ವಿದ್ಯಾರ್ಥಿಯುವಜನರಿಗಾಗಿಟಾಟಾ, ಇನ್ಫೋಸಿಸ್, ಟೋಯಾಟಾ ಮುಂತಾದ ಪ್ರಸಿದ್ಧ ಕಂಪೆನಿಗಳಿಂದ ಉದ್ಯೋಗ ಮೇಳ ನೆಡೆಸುವಂತೆಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದಜಿಲ್ಲಾಧ್ಯಕ್ಷಕೆ.ಆರ್‌ಯೋಗೀಶ್ ಮಾತನಾಡಿರೈತರ ಒಳಿತಿಗಾಗಿ ಸಾಮಾಜಿಕ, ಸ್ವತಂತ್ರ ಹೋರಾಟಗಾರರಿಗೆ, ಯೋಧರಿಗೆ, ಸಮಾಜದಲ್ಲಿಆರ್ಥಿಕ ಸಂಕಷ್ಟದಲ್ಲಿರುವ ಬಡವರಿಗೆಜಿಲ್ಲಾ ಸಂಘದ ವತಿಯಿಂದಆರ್ಥಿಕ ನೆರವು ನೀಡಲು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ಸಂಘದ ಸರ್ವ ಸದಸ್ಯರ ಸಭೆಕರೆದುಚರ್ಚಿಸಿ ವಿವಿದೋದ್ದೇಶಸೌಹಾರ್ಧ ಬ್ಯಾಂಕ್ ಸ್ಥಾಪಿಸಲು ನಿರ್ಧರಿಸುವುದಾಗಿ ಭರವಸೆ ನೀಡಿದರು.

ಕೃಷಿ ಇಲಾಖೆಯಜಂಟಿ ನಿರ್ದೇಶಕಡಾ. ತಿರುಮಲೇಶ್ ಮಾತನಾಡಿಹಾಲು ಉತ್ಪಾಧಕರ ಸಹಕಾರ ಸಂಘ, ಮಾವು ಬೆಳೆಗಾರರ ಸಂಘ, ಕಾಫೀ ಬೆಳೆಗಾರರ ಸಂಘ ಮುಂತಾದ ಸಂಘಗಳು ಶೂನ್ಯದಿಂದಆರಂಭವಾಗಿಕೋಟ್ಯಾಂತರರೂ ವಹಿವಾಟು ನೆಡೆಸುತ್ತಿರುವುದನ್ನುಕಾಣುತ್ತಿದ್ದು. ಇದೇ ಮಾದರಿಯಲ್ಲಿಕೃಷಿ ಪರಿಕರ ಮಾರಾಟಗಾರರ ಸಂಘ ಸೌಹಾರ್ಧ ಬ್ಯಾಂಕ್ ಸ್ಥಾಪಿಸುವ ಮೂಲಕ ಆರ್ಥಿಕ ಸದೃಢರಾಗಬೇಕೆಂದುಕರೆ ನೀಡಿದರು.

ಈ ಸಂದರ್ಭದಲ್ಲಿರಾಜ್ಯಉಪಾಧ್ಯಕ್ಷಡಾ. ಮಹಾಬಲ, ಮೈಸೂರು ಕಾರ್ಯದರ್ಶಿ ಮಾಲತೇಶ್, ಬಳ್ಳಾರಿ ತಿಮ್ಮೇಗೌಡ, ಜಿಲ್ಲಾ ಉಪಾಧ್ಯಕ್ಷರುಗಳಾದ ಉದಯ್ ಪೈ, ಟಿ.ಡಿತಿಮ್ಮಯ್ಯ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಿ.ಮನೂಪ್‌ಉಪಸ್ಥಿತರಿದ್ದರು.

Establishment of Souhadha Bank in the district

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...