Home namma chikmagalur ಮರ ಬೆಳೆಸಿ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಿ
namma chikmagalurchikamagalurHomeLatest News

ಮರ ಬೆಳೆಸಿ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಿ

Share
????????????????????????????????????
Share

ಚಿಕ್ಕಮಗಳೂರು:  ಇಂದಿನ ಋತುಮಾನಗಳ ವ್ಯತ್ಯಾಸ, ತಾಪಮಾನದ ಹೆಚ್ಚಳದಲ್ಲಿ ಪರಿಸರದ ಪಾತ್ರ ಮುಖ್ಯವಾಗಿದೆ. ಸ್ವಚ್ಛ, ಸುಂದರ ಪರಿಸರ ಕಾಪಾಡಲು ಪ್ರತಿಯೊಬ್ಬರೂ ಕೈಜೋಡಿಸಬೇಕು. ಹಸಿರು ಪರಿಸರ ಪ್ರೀತಿ ಹೆಚ್ಚಲು, ಪರಿಸರದೊಂದಿಗೆ ಬಾಂಧವ್ಯ ಬೆಳೆಯಲು ಮನೆಯ ಸುತ್ತಮುತ್ತ ಮರ-ಗಿಡಗಳನ್ನು ಬೆಳೆಸಬೇಕೆಂದು ಗೌರವಾನ್ವಿತ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಭಾನುಮತಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ಜಿಲ್ಲಾ ಆಯುಷ್ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಇಂದು ನಗರದ ಆಯುಷ್ ಇಲಾಖೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಸಸಿ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

೧೯೭೨ರಲ್ಲಿ ವಿಶ್ವ ಸಂಸ್ಥೆ ವಿಶ್ವ ಪರಿಸರ ದಿನವನ್ನು ಘೋಷಿಸಿತು. ವಿಶ್ವದಾದ್ಯಂತ ಸುಮಾರು ೧೪೩ ದೇಶಗಳು ಇಂದು (ಜೂ.೫) ವಿಶ್ವ ಪರಿಸರ ದಿನವನ್ನು ಆಚರಿಸುತ್ತಿವೆ. ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮೂಡಿಸುವುದು ಇದರ ಮೂಲ ಉದ್ದೇಶವಾಗಿದೆ ಎಂದರು.

ಆಧುನಿಕ ಶೈಲಿಯಿಂದ ಪರಿಸರದ ಮೇಲೆ ಅನೇಕ ರೀತಿಯ ದುಷ್ಪರಿಣಾಮಗಳು ಉಂಟಾಗುತ್ತಿವೆ. ಪರಿಸರ ಕಾಳಜಿ, ಪ್ರತಿಯೊಬ್ಬರಲ್ಲೂ ಮೂಡಬೇಕು. `ಪ್ಲಾಸ್ಟಿಕ್ ತ್ಯಜಿಸಿ, ಪ್ಲಾಸ್ಟಿಕ್ ಬಳಸುವುದನ್ನು ಕೊನೆಗೊಳಿಸಿ’ ಎಂಬುದು ಈ ವರ್ಷದ ವಿಶ್ವ ಪರಿಸರ ದಿನಾಚರಣೆಯ ಧ್ಯೇಯವಾಕ್ಯವಾಗಿದೆ. ಮಕ್ಕಳಲ್ಲಿ ಪರಿಸರ ಪ್ರೇಮ ಬೆಳೆಸುವುದರಿಂದ ಗಿಡ-ಮರಗಳ ಬಗ್ಗೆ ಪ್ರೀತಿ ಹೆಚ್ಚಿ ಭವಿಷ್ಯದಲ್ಲಿ ಹಸಿರು ಪರಿಸರ, ಕಾಡು ಕಾಪಾಡಲು ಸಾಧ್ಯವಾಗುತ್ತದೆ ಎಂದರು.

ವಕೀಲರ ಸಂಘದ ಅಧ್ಯಕ್ಷ ಸುಜೇಂದ್ರ ಮಾತನಾಡಿ, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸಬೇಕು. ಹಳೆಯ ಮತ್ತು ತ್ಯಾಜ್ಯ ಉತ್ಪನ್ನಗಳನ್ನು ಮರುಬಳಕೆ ಮಾಡಬೇಕು. ಮರಗಿಡಗಳನ್ನು ನೆಡುವ ಮೂಲಕ ಪರಿಸರ ಕಾಪಾಡುವಂತೆ ಹೇಳಿದ ಅವರು, ವಿದ್ಯಾರ್ಥಿಗಳಲ್ಲಿ ಪರಿಸರ ಪ್ರೇಮವನ್ನು ಬೆಳೆಸುವಂತೆ ಪ್ರೇರೇಪಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ತ್ಯಜಿಸಿ ಪರಿಸರ ಸ್ವಚ್ಛತೆಗೆ ಕೈಜೋಡಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವಿ.ಹನುಮಂತಪ್ಪ ಮಾತನಾಡಿ, ಇಂದಿನ ದಿನಗಳಲ್ಲಿ ಮರಗಿಡಗಳನ್ನು ಕಡಿಯುತ್ತಿರುವುದರಿಂದ ಪರಿಸರದ ಅಸಮತೋಲನ ಉಂಟಾಗುತ್ತಿದೆ. ಇದರಿಂದ ಉಸಿರಾಡಲು ಪರಿಶುದ್ಧವಾದ ಗಾಳಿ ಸಿಗದಂತಹ ಸ್ಥಿತಿ ನಿರ್ಮಾಣವಾಗಿದೆ. ಪರಿಸರ ಸಮತೋಲನವನ್ನು ಕಾಪಾಡಲು ಹಾಗೂ ಮುಂದಿನ ಪೀಳಿಗೆಗೆ ಉತ್ತಮವಾದ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ. ಪ್ರತಿಯೊಬ್ಬರೂ ಮರಗಿಡಗಳನ್ನು ನೆಟ್ಟು ಪೋಷಿಸಬೇಕು ಎಂಬ ದೃಢ ಸಂಕಲ್ಪ ಮಾಡಿದರೆ ಉತ್ತಮವಾದ ಪರಿಸರವನ್ನು ಸೃಷ್ಟಿಸಲು ಸಾಧ್ಯ ಎಂದು ತಿಳಿಸಿದರು.

ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಮುಖ್ಯಸ್ಥರಾದ ಭಾಗ್ಯಕ್ಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಗೌರವಾನ್ವಿತ ನ್ಯಾಯಾಧೀಶರುಗಳಾದ ಪ್ರಕಾಶ್ ವಿ., ಕುಲಕರ್ಣಿ ಗುರುಪ್ರಸಾದ್ ರಾಘವೇಂದ್ರ, ಕು.ಸುಜಾತ, ಎಸ್.ಬಿ.ದ್ಯಾವಪ್ಪ, ಜೆ.ಲತಾ, ಹೆಚ್.ಟಿ.ಅನುರಾಧ, ಕೆ.ಎಸ್.ಶರತ್‌ಕುಮಾರ್, ಎಸ್.ಆರ್.ನಂದಿನಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಪೂರ್ಣಿಮಾ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಗೀತಾ, ಅರಣ್ಯ ಇಲಾಖೆ ಹಾಗೂ ಆಯುಷ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು.

Everyone joins hands to plant trees and protect the environment.

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...