Home casteless society:ಕ್ಯಾಸ್ಟ್‌ಲೆಸ್ ಸಮಾಜ ಕಟ್ಟುವ ಸಂಕಲ್ಪ ಎಲ್ಲರೂ ಮಾಡಬೇಕಿದೆ
Homenamma chikmagalur

casteless society:ಕ್ಯಾಸ್ಟ್‌ಲೆಸ್ ಸಮಾಜ ಕಟ್ಟುವ ಸಂಕಲ್ಪ ಎಲ್ಲರೂ ಮಾಡಬೇಕಿದೆ

Share
ಆಲ್ದೂರಿನಲ್ಲಿ ನಡೆದ ಸ್ವಾಭಿಮಾನಿ ಸಮ್ಮೇಳನ
ಆಲ್ದೂರಿನಲ್ಲಿ ನಡೆದ ಸ್ವಾಭಿಮಾನಿ ಸಮ್ಮೇಳನ
Share

ಚಿಕ್ಕಮಗಳೂರು: ಈ ದೇಶಕ್ಕೆ ಜಾತಿ ಎನ್ನುವುದೇ ದೊಡ್ಡ ಸಮಸ್ಯೆಯಾಗಿದೆ. ಕ್ಯಾಶ್‌ಲೆಶ್ ಸಮಾಜ ನಮಗೆ ಬೇಕಿಲ್ಲ ಕಾಸ್ಟ್‌ಲೆಸ್ ಸಮಾಜ ಕಟ್ಟುವ ಸಂಕಲ್ಪವನ್ನು ಎಲ್ಲರೂ ಮಾಡಬೇಕಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಹೇಳಿದರು.

ತಾಲೂಕಿನ ಆಲ್ದೂರಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿ ನಿರ್ಮಾಣ ಸಮಿತಿ ಬುಧವಾರ ಏರ್ಪಡಿಸಿದ್ದ ಸ್ವಾಭಿಮಾನಿ ಸಮ್ಮೇಳನದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಪುತ್ಥಳಿ ನಿರ್ಮಿಸಿದ ಮೇಲೆ ನಿಮ್ಮ ಜವಾಬ್ದಾರಿ ಬಹಳ ಜಾಸ್ತಿ ಇದೆ. ಕನಿಷ್ಠ ೨೦ ಕಿಮೀ ರೇಡಿಯೇಶನ್ ದೂರದವರೆಗೆ ಒಬ್ಬ ದಲಿತ ಐಎಎಸ್, ಐಪಿಎಸ್, ಡಾಕ್ಟರ್, ಎಂಜಿನಿಯರ್ ಹುಟ್ಟಿ ಬರುವಂತಹ ಸ್ಥಿತಿ ನಿರ್ಮಾಣವಾಗಬೇಕು ಎಂದರು.

ಸಂವಿಧಾನ ಜಾರಿಯಾದ ನಂತರ ಜಾತಿ ಪದ್ದತಿ ಇರಕೂಡದು ಎಂದು ಅಂಬೇಡ್ಕರ್ ಬಯಸಿದ್ದರು. ಇಂದು ದೇಶದಲ್ಲಿ ಪ್ರಧಾನಿ ಕ್ಯಾಶ್‌ಲೆಶ್ ಎಕಾನಮಿ ಕೊಟ್ಟಿದ್ದಾರೆ. ಆದರೆ, ಭ್ರಷ್ಟಾಚಾರ ತಡೆಯಲಾಗಿಲ್ಲ. ಒಂದು ದೇಶ ಒಂದು ಚುನಾವಣೆ ಎನ್ನುತ್ತಿದ್ದಾರೆ. ಬೇಕಿರುವುದು ಅದಲ್ಲ. ಒಂದು ದೇಶ, ಒಂದೇ ತರಹದ ಶಿಕ್ಷಣ ಪದ್ದತಿ ಬೇಕು ಎಂದು ಪ್ರತಿಪಾದಿಸಿದರು.

ಹೋದಲೆಲ್ಲಾ ಅಂಬೇಡ್ಕರ್ ನಿಮಗೆ ಉಳಿಸಿರುವ ಆಸ್ತಿ ಎಷ್ಟು ಎಂದು ಜನ ನನ್ನನ್ನು ಕೇಳುತ್ತಾರೆ. ಈ ದೇಶದಲ್ಲಿ ಒಮ್ಮೆ ಮಂತ್ರಿ ಮಹೋದಯರಾದರೆ ತಮ್ಮ ಏಳು ಸಂತತಿಗೆ ಆಗುವಷ್ಟು ಸಂಪತ್ತು ಕೂಡಿಡುತ್ತಾರೆ. ಆದರೆ, ಸಂಸತ್ತಿನಲಿ ನಾಲ್ಕು ಖಾತೆ ನಿಭಾಯಿಸಿದ್ದ ಅಂಬೇಡ್ಕರ್ ಮರಣ ಹೊಂದಿದ್ದಾಗ ಅವರ ಬಳಿ ಕೇವಲ ೧೫೨೩೭ ರೂ. ಮಾತ್ರ ಇತ್ತು ಎಂದು ಹೇಳಿದರು. ನಾನೂ ಹೋದಲೆಲ್ಲ ಹೂಮಳೆ ಸುರಿಸುತ್ತಾರೆ. ಅದು ಏಕೆ ಎಂದು ತನ್ನ ತಂದೆಯನ್ನು ಕೇಳಿದಾಗ ಅದು ನೀನೇನೋ ಮಾಡಿದ್ದೀಯ ಎಂದು ಹೂಮಳೆ ಹಾಕುವುದಿಲ್ಲ. ನೀನು ಅಂಬೇಡ್ಕರ್ ರಕ್ತ ಹಂಚಿಕೊಂಡು ಹುಟ್ಟಿದೀಯ ಎನ್ನುವ ಕಾರಣಕ್ಕೆ ಎಂದು ತಂದೆ ಹೇಳಿದ್ದರು ಎಂದು ಸ್ಮರಿಸಿದರು.

ಮಾಜಿ ಸಭಾಪತಿ ರಮೇಶ್ ಕುಮಾರ್ ಮಾತನಾಡಿ, ಅಂಬೇಡ್ಕರ್ ಯಾವುದೋ ಒಂದು ಸಮುದಾಯಕ್ಕೆ ಸೇರಿದವರಲ್ಲ ಇಡೀ ಮನುಕುಲಕ್ಕೆ ಸೇರಿದವರು. ಅವರ ಬಗ್ಗೆ ಅಧ್ಯಯನ ಮಾಡದೆ, ಅವರ ವಿಚಾರಗಳನ್ನು ಅರ್ಥಮಾಡಿಕೊಳ್ಳದೆ ದಲಿತೇತರರು ಪೂರ್ವಗ್ರಹ ಪೀಡಿತರಾಗಿ ಅಂಬೇಡ್ಕರ್ ಅವರನ್ನು ಸಣ್ಣವರನ್ನಾಗಿ ಮಾಡುವುದು ಬೇಡ ಎಂದರು. ಅವರು ಎಲ್ಲರ ಪರವಾಗಿ ಮಾತಾಡಿದ್ದಾರೆ. ನಮಗೆ ತಿಳಿದುಕೊಳ್ಳಲು ಸಮಯ ಇಲ್ಲ ಎಂದರು.

ನಿವೃತ್ತ ಡಿಡಿಪಿಯು ಎಚ್.ಎಂ.ರುದ್ರಸ್ವಾಮಿ ಮಾತನಾಡಿ, ಅಂಬೇಡ್ಕರ್ ಪ್ರತಿಮೆ ನಮಗೆ ಹೋರಾಟದ ಸ್ಪೂರ್ತಿಯಾಗಿರಬೇಕೆ ವಿನಾ ಆರಾಧನೆಗಲ್ಲ. ಅಂಬೇಡ್ಕರ್ ಎಂದೂ ನನ್ನನ್ನು ಆರಾಸಿ ಎಂದು ಹೇಳೀರಲಿಲ್ಲ. ಇತ್ತೀಚೆಗೆ ದಲಿತರು ಒಗ್ಗಾಟ್ಟಾಗಿ ಜಾಗೃತಿ ಮೂಡುತ್ತಿರುವುದು ಸಾಮಾಜಿಕ ಚಲನೆಯ ಸಂಕೇತ ಎಂದು ಬಣ್ಣಿಸಿದರು. ಯಲಗುಡಿಗೆ ಹೊನ್ನಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪುತ್ಥಳಿ ನಿರ್ಮಾಣ ಸಮಿತಿಯ ನವರಾಜ್ ಸಮ್ಮೇಳನ ಉದ್ಘಾಟಿಸಿದರು. ಸಮಿತಿಯ ಅಧ್ಯಕ್ಷ ಗಣೇಶ್ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಮೋಟಮ್ಮ, ಬಿ.ಬಿ.ನಿಂಗಯ್ಯ, ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ, ಭೀಮ್ ಆರ್ಮಿ ಗಿರೀಶ್, ದಲಿತ ಸಮಘಟನೆಗಳ ಮುಖಂಡರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಮತ್ತಿತರೆ ಗಣ್ಯರು ಉಪಸ್ಥಿತರಿದ್ದರು.

ಹೆಡದಾಳ್ ಕುಮಾರ್ ನಿರೂಪಿಸಿದರು. ಅಂಬೇಡ್ಕರ್ ವೃತ್ತ ನಿರ್ಮಾಣ ಸಂದರ್ಭ ಆದ ಸಂಘರ್ಷದಲ್ಲಿ ಸೆರೆಮನೆ ವಾಸ ಅನುಭವಿಸಿದ್ದ ಗ್ರಾಮಪಂಚಾಯಿತಿ ಸದಸ್ಯರು ಸಂಘಟನೆಯ ಮುಖಂಡರನ್ನು ಸನ್ಮಾನಿಸಲಾಯಿತು. ಸ್ವಾಭಿಮಾನಿ ಸಮ್ಮೇಳನದ ಹಿನ್ನೆಲೆಯಲ್ಲಿ ನಗರದ ಬಿರಂಜಿ ಹಳ್ಳದಿಂದ ವೇದಿಕೆವರೆಗೂ ಡಿಜೆ ಧ್ವನಿವರ್ಧಕದ ಸಂಗೀತಕ್ಕೆ ಯುವ ಸಮೂಹ ಕುಣಿದು ಕುಪ್ಪಳಿಸಿತು. ರಾಜರತ್ನ ಅಂಬೇಡ್ಕರ್ ಅವರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು. ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು. ಸಮ್ಮೇಳನದ ಹಿಂದನ ದಿನ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಆಲ್ದೂರಿನ ವೃತ್ತದಲ್ಲಿ ಉದ್ಘಾಟಿಸಲಾಗಿತ್ತು.

Everyone must resolve to build a casteless society.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...