ಅಭ್ಯರ್ಥಿಗಳು ಪಿಯುಸಿ, ವಿಜ್ಞಾನ ವಿಭಾಗದಲ್ಲಿ ಶೇ 50ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಡಿಪ್ಲೊಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೊಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‌ಸ್ಟ್ರುಮೆಂಟ್ ಟೆಕ್ನಾಲಜಿ, ಇನ್‌ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಇಲ್ಲವೇ 2 ವರ್ಷದ ವೃತ್ತಿಪರ ಕೋರ್ಸ್‌ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ 50ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು. 2007ರ ಜನವರಿ 2ಕ್ಕಿಂತ ಮೊದಲು ಮತ್ತು 2009ರ ಜು. 2ರ ನಂತರ ಜನಿಸಿರಬಾರದು. ಒಬಿಸಿ, ಎಸ್‌ಸಿ, ಎಸ್‌ಟಿ, ಇಎಸ್‌ಎಂ ಹಾಗೂ ಇತರ ನಿರ್ದಿಷ್ಟ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಮಾಹಿತಿಗೆ https://.agnipathvayu.cdac.in ಅಥವಾ 08262-295538 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
Examination Application Invitation for Agniveer Posts
Leave a comment