Home namma chikmagalur ಅಗ್ನಿವೀರ್ ಹುದ್ದೆಗೆ ಪರೀಕ್ಷೆ ಅರ್ಜಿ ಆಹ್ವಾನ
namma chikmagalurchikamagalurHomeLatest News

ಅಗ್ನಿವೀರ್ ಹುದ್ದೆಗೆ ಪರೀಕ್ಷೆ ಅರ್ಜಿ ಆಹ್ವಾನ

Share
Share
ಚಿಕ್ಕಮಗಳೂರು: ವಾಯುಸೇನೆಯ ಅಗ್ನಿವೀರ್‌ ವಾಯು ಹುದ್ದೆಯಲ್ಲಿ ಸೇವೆ ಸಲ್ಲಿಸಲು ಅವಿವಾಹಿತ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಪಿಯುಸಿ, ವಿಜ್ಞಾನ ವಿಭಾಗದಲ್ಲಿ ಶೇ 50ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು. ಡಿಪ್ಲೊಮಾ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೊಮೊಬೈಲ್, ಕಂಪ್ಯೂಟರ್ ಸೈನ್ಸ್, ಇನ್‌ಸ್ಟ್ರುಮೆಂಟ್ ಟೆಕ್ನಾಲಜಿ, ಇನ್‌ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಇಲ್ಲವೇ 2 ವರ್ಷದ ವೃತ್ತಿಪರ ಕೋರ್ಸ್‌ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ 50ರಷ್ಟು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ 50ರಷ್ಟು ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು. 2007ರ ಜನವರಿ 2ಕ್ಕಿಂತ ಮೊದಲು ಮತ್ತು 2009ರ ಜು. 2ರ ನಂತರ ಜನಿಸಿರಬಾರದು. ಒಬಿಸಿ, ಎಸ್‌ಸಿ, ಎಸ್‌ಟಿ, ಇಎಸ್‌ಎಂ ಹಾಗೂ ಇತರ ನಿರ್ದಿಷ್ಟ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.

ಮಾಹಿತಿಗೆ  https://.agnipathvayu.cdac.in ಅಥವಾ 08262-295538 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Examination Application Invitation for Agniveer Posts

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...