Home namma chikmagalur chikamagalur ಜಿಲ್ಲೆಯಲ್ಲಿ ಪಾರದರ್ಶಕವಾಗಿ ಸನ್ನದು ವಿತರಿಸಲು ಅಬಕಾರಿ ಇಲಾಖೆ ಕ್ರಮ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಪಾರದರ್ಶಕವಾಗಿ ಸನ್ನದು ವಿತರಿಸಲು ಅಬಕಾರಿ ಇಲಾಖೆ ಕ್ರಮ

Share
Share

ಚಿಕ್ಕಮಗಳೂರು: ಸರ್ಕಾರದ ನಿರ್ದೇಶನದಂತೆ ಜಿಲ್ಲೆಗೆ ಅಗತ್ಯವಿರುವ ೧೨ ವಿವಿಧ ರೀತಿಯ ಸನ್ನದುಗಳನ್ನು ಸರ್ಕಾರದ ನಿಯಮಾನುಸಾರ ಜಿಲ್ಲೆಯ ವಿವಿಧ ತಾಲ್ಲೂಕುಗಳಿಗೆ ಸಮುದಾಯವಾರು ಮೀಸಲಿಟ್ಟು ಪಾರದರ್ಶಕವಾಗಿ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ದಾವಣಗೆರೆ ವಿಭಾಗದ ಅಬಕಾರಿ ಜಂಟಿ ಆಯುಕ್ತರಾದ ಬಿ.ಎಂ.ಅಶ್ವಿನಿ ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂದು ಅಬಕಾರಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಇ-ಹರಾಜು ಪ್ರಕ್ರಿಯೆಯಲ್ಲಿ ಭಾಗವಹಿಸುವ ಅರ್ಜಿದಾರರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇ-ಹರಾಜು ಜನವರಿ ೧೩ ರಂದು ಪ್ರಾರಂಭವಾಗಲಿದ್ದು, ಆಸಕ್ತಿ ಇರುವವರು ಅರ್ಜಿ ಸಲ್ಲಿಸಿ ಯಾವ ರೀತಿಯಲ್ಲಿ ಹರಾಜಿನಲ್ಲಿ ಭಾಗವಹಿಸಬೇಕು ಎಂಬ ಬಗ್ಗೆ ತರಬೇತುದಾರರು ತಿಳಿಸಿಕೊಡಲಿದ್ದಾರೆ. ಎಲ್ಲರಿಗೂ ಇದೊಂದು ಸುವರ್ಣಾವಕಾಶವಾಗಿದ್ದು, ಪ್ರತಿಯೊಬ್ಬರೂ ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಚಿಕ್ಕಮಗಳೂರು ಅಬಕಾರಿ ಉಪ ಆಯುಕ್ತರಾದ ಎಂ.ರೂಪ ಅವರು, ರಾಜ್ಯ ಅಬಕಾರಿ ಇಲಾಖೆ ರಾಜ್ಯದ ಎರಡನೇ ಅತೀದೊಡ್ಡ ರಾಜಸ್ವ ಸಂಗ್ರಹ ಇಲಾಖೆಯಾಗಿದೆ. ೨೦೨೬ನೇ ಸಾಲಿನಲ್ಲಿ ೪೩ ಸಾವಿರ ಕೋಟಿ ರೂ.ಗಳ ಸಂಗ್ರಹ ಗುರಿಯನ್ನು ಹೊಂದಿದೆ. ಜಿಲ್ಲೆಯಲ್ಲಿ ಒಟ್ಟಾರೆ ೨೬೭ ಸನ್ನದುಗಳು ಕಾರ್ಯ ನಿರ್ವಹಿಸುತ್ತಿವೆ. ಉಳಿದ ೧೨ ಸನ್ನದುಗಳ ಪ್ರಕ್ರಿಯೆ ಜಾರಿಯಲ್ಲಿದ್ದು, ಅಗತ್ಯ ಪ್ರಚಾರ ಕಾರ್ಯ ಕೈಗೊಳ್ಳಲಾಗಿದೆ. ವಿವಿಧ ತಾಲ್ಲೂಕುಗಳ ಅರ್ಜಿದಾರರು ಸರ್ಕಾರ ನೀಡಿರುವ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ಅಬಕಾರಿ ಉಪ ಆಯುಕ್ತ ವೀರೇಶ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಂಎಸ್‌ಟಿಸಿ ತಂಡದವರಾದ ಬ್ರಿಜೇಶ್ ಮತ್ತಿತರರು ತರಬೇತಿ ನೀಡಿದರು. ಕಡೂರು ವಲಯದ ಅಬಕಾರಿ ನಿರೀಕ್ಷಕರಾದ ಎಲ್.ಸಿ.ಸಂದೀಪ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಮೂಡಿಗೆರೆ ಉಪವಿಭಾಗದ ಉಪ ಅಧೀಕ್ಷಕ ಕೀರ್ತಿ ಕುಮಾರ್ ವಂದಿಸಿದರು. ಜಿಲ್ಲೆಯ ವಿವಿಧೆಡೆಗಳಿಂದ ಆಗಮಿಸಿದ್ದ ಅರ್ಜಿದಾರರು ಹಾಗೂ ಇಲಾಖೆಯ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.

Excise Department takes steps to distribute charters transparently in the district

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...