Home Political News ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ
Political News

ಪ್ರತಿಪಕ್ಷವಾಗಿ ಎಡವಿದ್ಯಾ ಬಿಜೆಪಿ : ಹೋರಾಟ ರೂಪಿಸುವಲ್ಲಿ ವಿಫಲ

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ಕಥೆವ್ಯಥೆ ಎಲ್ಲರಿಗೂ ಗೊತ್ತು ಮನೆಯೊಂದು ಮೂರು ಬಾಗಿಲು ಆಗಿದೆ ಆದರೆ ಚಿಕ್ಕಮಗಳೂರು ಬಿಜೆಪಿಯಲ್ಲಿ‌ ಅಂತಹ ಪರಿಸ್ಥಿತಿ ಇಲ್ಲ ಆದರೂ ವಿರೋಧ ಪಕ್ಷವಾಗಿ ಒಗ್ಗಟ್ಟಿನ ಪ್ರದರ್ಶನ ಕಾಣುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ತಿರುಗುವುದು ಎಲ್ಲರಿಗೂ ಗೊತ್ತು.

ಚಿಕ್ಕಮಗಳೂರು ಜಿಲ್ಲಾ ಭಾರತೀಯ ಜನತಾ ಪಕ್ಷದ ಅಧ್ಯಕ್ಷ ದೇವರಾಜ್‌ ಶೆಟ್ಟಿ ಅತ್ಯಂತ ಚುರುಕಾಗಿ ಓಡಾಟ ಮಾಡುತ್ತಿದ್ದಾರೆ ಪಕ್ಷ ಕಟ್ಟಬೇಕೆಂಬ ಹಂಬಲ ,ಆಸೆ ಇದೆ ಆದರೆ ಆಡಳಿತ ಪಕ್ಷದ ವಿರುದ್ಧ ಹೋರಾಟ ರೂಪಿಸುವಲ್ಲಿ ಎಡುವುತ್ತಿದ್ದಾರೆ ಎಂದು ಬಿಜೆಪಿಯ ಕಾರ್ಯಕರ್ತರು ಮುಖಂಡರು ಹೇಳಿಕೊಂಡು ಓಡಾಡುತ್ತಿರೋದು ಸುಳ್ಳೇನಲ್ಲಾ

ವಿಧಾನ ಪರಿಷತ್ ಉಪ ಸಭಾಪತಿ ಪ್ರಾಣೇಶ್ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ ಅವರಿಗೆ ಇತಿ ಮಿತಿ ಇದೆ ಆದರೆ ಬೆಂಕಿ ಚೆಂಡು ಸಿ,ಟಿ, ರವಿ ಜಿಲ್ಲೆಯಲ್ಲಿ ಸೈಲೆಂಟ್ ರಾಜ್ಯದಲ್ಲಿ ವೈಲೆಂಟ್ ಆಗಿದ್ದಾರೆ ಎಂದರೆ ರಾಜ್ಯ ನಾಯಕ ಎನ್ನಿಸಿಕೊಳ್ಳಬೇಕೆಂಬ ಆಸೆ ಇರಬಹುದು. ಖಾಸಗಿಯಾಗಿ ಸಿಕ್ಕಾಗ ಇನ್ನೂ ಎರಡು ವರ್ಷ ಜಿಲ್ಲೆಯಲ್ಲಿ ಮಾತನಾಡುವುದಿಲ್ಲ ಏಕೆಂದರೆ ಸೋತು ಹತಾಶರಾಗಿದ್ದಾರೆ ಎನ್ನುತ್ತಾರೆಂದೆ ಜಾರಿಕೊಳ್ಳುತ್ತಿದ್ದಾರೆ.

ವಿಧಾನ ಸಭಾ ಚುನಾವಣೆಯಲ್ಲಿ ಐದು ಕ್ಷೇತ್ರದಲ್ಲಿ ಪರಾಭವ ಗೊಂಡಿರುವ ಬಿಜೆಪಿ ಕಾದು ನೋಡುವಾ ತಂತ್ರದಲ್ಲಿ ಇರಬಹುದು. ವಿಧಾನ ಸಭಾ ಚುನಾವಣೆಯಲ್ಲಿ ಸೋತರು ಲೋಕಸಭಾ ಚುನಾವಣೆಯಲ್ಲಿ ಫೀನಿಕ್ಸ್ ನಂತೆ ಐದು ಕ್ಷೇತ್ರದಲ್ಲಿ ಮೇಲುಗೈ ಸಾಧಿಸಿರುವ ಬಿಜೆಪಿ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪರಿಣಾಮಕಾರಿ ಹೋರಾಟ ರೂಪಿಸಿಲ್ಲ ಎಂಬ ದೂರಿದೆ.

ಬಿಜೆಪಿ ಜಿಲ್ಲಾ ಅಧ್ಯಕ್ಷರು ನೀಟಾಗಿ ಡ್ರೆಸ್ ಮಾಡಿಕೊಂಡು ನಗು,ನಗುತ್ತಾ ಎಲ್ಲರಿಗೂ ಮಾತನಾಡಿಸುವ ಕಲೆಗಾರಿಕೆ ಇದ್ದರು ಪಕ್ಷ ಸರಿಯಾದ ಹೋರಾಟ ಮಾಡುತ್ತಿಲ್ಲ ಎಂದು ಕಾರ್ಯಕರ್ತರು ಗೊಣಗುತ್ತಾ ಇರುವುದು ಗುಟ್ಟಾಗಿ ಉಳಿದಿಲ್ಲ, ಕಾಂಗ್ರೆಸ್ ನವರು ಅಭಿವೃದ್ಧಿ ಕೆಲಸವಿರಲಿ ಸಾಮಾನ್ಯ ಕೆಲಸವನ್ನು ಮಾಡದಿರುವ ಸಂದರ್ಭದಲ್ಲಿ ಬಿಜೆಪಿಯ ಮೌನ ರಹದಾರಿ ಮಾಡಿದಂತೆ ಆಗಿದೆ ಎಂದು ಅಸಮಾಧಾನ ಇರುವುದು ಮಾತ್ರ ನಿಜ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ...

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

ಡಿ.ಕೆ.ಗೆ ಪ್ರಾರಂಭದಲ್ಲಿ ಡಿಚ್ಚಿ ! ಹರಿ ಬ್ರೇಕ್, ಸಿದ್ದು ಸ್ಟೀರಿಂಗ್ ಯಾವ ಕಡೆ ತಿರುಗುತ್ತದೆ

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಯಾರನ್ನು ನಂಬಿದ್ದರು ಅವರೇ ಕೈ ಕೊಡುವ ಸೂಚನೆ ಅರಿತು ರಾಹುಲ್...