Home namma chikmagalur chikamagalur ವಿದ್ಯುತ್ ತಂತಿ ತಗುಲಿ ರೈತನ ಧಾರುಣ ಸಾವು
chikamagalurCrime NewsHomeLatest Newsnamma chikmagalur

ವಿದ್ಯುತ್ ತಂತಿ ತಗುಲಿ ರೈತನ ಧಾರುಣ ಸಾವು

Share
Share

ಕಡೂರು: ವಿದ್ಯುತ್ ತಂತಿ ತಗುಲಿ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರದೃಷ್ಟಕರ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ನಡೆದಿದೆ. ತೋಟದಲ್ಲಿದ್ದ ವಿದ್ಯುತ್ ತಂತಿ ತಗುಲಿ 43 ವರ್ಷದ ರೈತ ಹನುಮಂತಪ್ಪ ದುರ್ಮರಣಕ್ಕೀಡಾಗಿದ್ದಾರೆ.

ಈ ಸಾವಿಗೆ ಪಕ್ಕದ ತೋಟದ ಮಾಲೀಕ ರಮೇಶ್ ಅವರ ಅಕ್ರಮ ವಿದ್ಯುತ್ ಸಂಪರ್ಕವೇ ಕಾರಣ ಎಂದು ತಿಳಿದುಬಂದಿದೆ. ರಮೇಶ್ ತಮ್ಮ ತೆಂಗು ಮತ್ತು ಅಡಿಕೆ ತೋಟಕ್ಕೆ ಅಕ್ರಮವಾಗಿ ವಿದ್ಯುತ್ ಲೈನ್ ಎಳೆದಿದ್ದು, ಈ ವಿಷಯ ಮೆಸ್ಕಾಂ ಜೆ.ಇ ಬಸವರಾಜ್ ಅವರ ಗಮನಕ್ಕೆ ಬಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.

ಮೆಸ್ಕಾಂ ಅಧಿಕಾರಿಗಳ ಇಂತಹ ಬೇಜವಾಬ್ದಾರಿತನ ಮತ್ತು ನಿರ್ಲಕ್ಷ್ಯವೇ ರೈತನ ಪ್ರಾಣಕ್ಕೆ ಕಂಟಕವಾಗಿದೆ ಎಂದು ಮರಡಿಹಳ್ಳಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯಿಂದ ಆಕ್ರೋಶಗೊಂಡ ನೂರಾರು ಗ್ರಾಮಸ್ಥರು ಕಡೂರಿನ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ, ಕಚೇರಿ ಮುಂಭಾಗದಲ್ಲೇ ಮೃತರ ಶವವನ್ನಿಟ್ಟು ಭಾರೀ ಪ್ರತಿಭಟನೆ ನಡೆಸಿದ್ದಾರೆ. ಅಕ್ರಮವಾಗಿ ವಿದ್ಯುತ್ ಲೈನ್ ಎಳೆದ ತೋಟದ ಮಾಲೀಕ ರಮೇಶ್ ಹಾಗೂ ಕರ್ತವ್ಯ ಲೋಪ ಎಸಗಿದ ಜೆ.ಇ ಬಸವರಾಜ್ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.

ಇಂಧನ ಸಚಿವ ಕೆ.ಜೆ ಜಾರ್ಜ್ ಅವರ ಉಸ್ತುವಾರಿ ಇರುವ ಜಿಲ್ಲೆಯಲ್ಲೇ ಇಂತಹ ಘೋರ ನಿರ್ಲಕ್ಷ್ಯ ನಡೆದಿರುವುದು ಸಾರ್ವಜನಿಕರ ಆಕ್ರೋಶವನ್ನು ಮತ್ತಷ್ಟು ಹೆಚ್ಚಿಸಿದೆ. “ನಮಗೆ ನ್ಯಾಯ ಬೇಕು” ಎಂದು ರಸ್ತೆಗಿಳಿದಿರುವ ಗ್ರಾಮಸ್ಥರು ಮೆಸ್ಕಾಂ ವಿರುದ್ಧ ಸರಣಿ ಘೋಷಣೆಗಳನ್ನು ಕೂಗಿದ್ದಾರೆ.

ಮೃತ ಹನುಮಂತಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಮತ್ತು ಈ ಇಡೀ ದುರಂತದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಸಾರ್ವಜನಿಕರು ಮತ್ತು ರೈತ ಸಂಘಟನೆಗಳು ಆಗ್ರಹಿಸಿವೆ.

Farmer dies after being electrocuted by electric wire

Share

Leave a comment

Leave a Reply

Your email address will not be published. Required fields are marked *

Don't Miss

ಲಕ್ಯಾ-ಸಖರಾಯಪಟ್ಟಣ ಹೋಬಳಿ ವಿದ್ಯುತ್ ಸಮಸ್ಯೆ ನಿವಾರಣೆಗೆ ಇಂಧನ ಸಚಿವ ಮನವಿ

ಚಿಕ್ಕಮಗಳೂರು: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಲಕ್ಯಾ ಹಾಗೂ ಸಖರಾಯಪಟ್ಟಣ ಹೋಬಳಿಗಳಲ್ಲಿ ರೈತರು ಎದುರಿಸುತ್ತಿರುವ ತೀವ್ರ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ವಿಧಾನ ಪರಿಷತ್ ಸದಸ್ಯ ಡಾ. ರವಿ ಸಿ.ಟಿ ಅವರು...

ಬಿರಂಜಿ ಹೊಳೆಯಿಂದ ರೈತಾಪಿ ವರ್ಗದ ಬೃಹತ್ ಪಾದಯಾತ್ರೆ

ಚಿಕ್ಕಮಗಳೂರು:  ಜಾವಣಿಗೆ ನಾಡಿನ ರೈತರ ಜಮೀನುಗಳಿಗೆ ನೀರು ಹರಿಸುವಲ್ಲಿ ವಿಫಲಗೊ ಂಡಿರುವ ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಮಂಗಳವಾರ ರೈತ ಸಂಘ- ಹಸಿರುಸೇನೆ ತಾಲ್ಲೂಕು ಘಟ ಕ ಕರೆ ನೀಡಿದ್ಧ ಪ್ರತಿಭಟನೆಯಲ್ಲಿ...

Related Articles

ದೊಣ್ಣೆಯಿಂದ ಹಲ್ಲೆಯಾದ ಭಿಕ್ಷುಕನ ಸಾವು

ತರೀಕೆರೆ: ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ಸುಮಾರು 65 ವರ್ಷದ ವ್ಯಕ್ತಿಯೊಬ್ಬರನ್ನು ದೊಣ್ಣೆಯಿಂದ ಹೊಡೆದು, ಕಾಲಿನಿಂದ...

ಅಜ್ಜಂಪುರದಲ್ಲಿ ಅಪರಿಚಿತ ವಾಹನ ಡಿಕ್ಕಿಗೆ ವ್ಯಕ್ತಿ ಸಾವು

ಅಜ್ಜಂಪುರ: ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯ ರೈತ ಸಂಘ ಪ್ರತಿಭಟನೆ

ಚಿಕ್ಕಮಗಳೂರು: ಜಿಲ್ಲೆಯ ಭೀಕರ ಬರಗಾರದ ಸಂಕಷ್ಟಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಚಿಕ್ಕಮಗಳೂರು ತಾಲ್ಲೂಕನ್ನು...

ಜ್ಞಾನೇಶ್ ಕುಮಾರ್ ವಜಾಗೊಳಿಸಿ ಬಂಧಕ್ಕೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರ ಧರಣಿ

ಚಿಕ್ಕಮಗಳೂರು: ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ಜೊತೆಗೆ ಬಿಜೆಪಿ...