Home namma chikmagalur chikamagalur ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ
chikamagalurCrime NewsHomeLatest Newsnamma chikmagalur

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿ

Share
Share

ಚಿಕ್ಕಮಗಳೂರು: ಬೇಲಿ ದಾಟುವಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಬಲಿಯಾಗಿರುವ ಘಟನೆ ಕಡೂರು ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಸನ್ನ (43) ಮೃತ ದುರ್ದೈವಿ.

ಒಂದೇ ವಾರದಲ್ಲಿ ಕಡೂರು ತಾಲೂಕಿನಲ್ಲಿ ಎರಡು ದುರಂತ ಸಂಭವಿಸಿದ್ದು ಕಳೆದ ವಾರವಷ್ಟೇ ತಾಲೂಕಿನ ಮರಡಿಹಳ್ಳಿಯಲ್ಲಿ ಹನುಮಂತಪ್ಪ ಎಂಬುವರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಾಗ ಗ್ರಾಮಸ್ಥರು ಶವವನ್ನಿಟ್ಟು ಮೆಸ್ಕಾಂ ಕಚೇರಿ ಮುಂದೆ ಭಾರಿ ಪ್ರತಿಭಟನೆ ನಡೆಸಿದ್ದರು. ಆದರೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳ ನಿರ್ಲಕ್ಷ್ಯ ಈಗ ಮತ್ತೊಬ್ಬ ರೈತನನ್ನು ಬಲಿಪಡೆದಿದೆ.

ಖುದ್ದೂ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ಉಸ್ತುವಾರಿ ಜಿಲ್ಲೆಯಲ್ಲೇ ವಾರದ ಅಂತರದಲ್ಲಿ ಇಂತಹ ಎರಡು ಘಟನೆಗಳು ಮರುಕಳಿಸಿರುವುದು ಮೆಸ್ಕಾಂ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಿದೆ.

ಮೃತ ಪ್ರಸನ್ನ ಅವರಿಗೆ ಕೇವಲ 5 ತಿಂಗಳ ಹೆಣ್ಣು ಮಗುವಿದ್ದು, ಮನೆಗೆ ಆಸರೆಯಾಗಿದ್ದ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Farmer dies after touching downed electric wire

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...