ಮೂಡಿಗೆರೆ: ವಿದ್ಯುತ್ ತಂತಿ ಸ್ಪರ್ಶಿಸಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಮೂಡಿಗೆರೆ ತಾಲೂಕಿನ ಊರುಬಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೈರಾಪುರ ಗ್ರಾಮದಲ್ಲಿ ನಡೆದಿದೆ
ಬೈರಾಪುರ ಗ್ರಾಮದ ಕೃಷಿಕರಾದ ನಾಗೇಶ್ ಗೌಡ (72 ವರ್ಷ) ಆಕಸ್ಮಿಕ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ.
ನಾಗೇಶ್ ಗೌಡ ಅವರು ಇಂದು ಮಂಗಳವಾರ ಮಧ್ಯಾಹ್ನ ತಮ್ಮ ಜಾನುವಾರುಗಳನ್ನು ಮೇಯಿಸಲು ತೆರಳಿದ್ದ ವೇಳೆ ಬೈರಾಪುರ ಸರ್ಕಾರಿ ಶಾಲೆಯ ಸಮೀಪ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ
11 ಕೆಂ.ವಿ. ವಿದ್ಯುತ್ ಪವರ್ ಲೈನ್ ಕಂಬದ ಬಳಿ ವಿದ್ಯುತ್ ಗೌಂಡ್ ಆಗಿದ್ದು ಘಟನೆಗೆ ಕಾರಣ ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.
ಆ ಸ್ಥಳದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋದಾಗ ನಾಗೇಶ್ ಗೌಡರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲಿಯೇ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕು.
ನಾಗೇಶ್ ಗೌಡ ಅವರು ಗ್ರಾಮದ ಹಿರಿಯ ಕೃಷಿಕರಾಗಿದ್ದರು. ಅವರು ಪತ್ನಿ ಹಾಗೂ ಇಬ್ಬರು ಪುತ್ರರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ
Farmer dies after touching electric wire
Leave a comment