Home namma chikmagalur ವಿಷ ಸೇವಿಸಿ ಹೊಸಹಳ್ಳಿ ತಾಂಡ್ಯದ ರೈತ ಆತ್ಮಹತ್ಯೆ
namma chikmagalurHomeLatest NewsTarikere

ವಿಷ ಸೇವಿಸಿ ಹೊಸಹಳ್ಳಿ ತಾಂಡ್ಯದ ರೈತ ಆತ್ಮಹತ್ಯೆ

Share
Share

ತರೀಕೆರೆ: ಬ್ಯಾಂಕ್‌ ನಿಂದ ಭೂ ಅಭಿವೃದ್ಧಿ ಸಾಲ ಪಡೆದಿದ್ದ ತಾಲ್ಲೂಕಿನ ಹೊಸಹಳ್ಳಿ ತಾಂಡ್ಯದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂ ಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

‘ಹುಣಸಘಟ್ಟ ಯುನಿಯನ್ ಬ್ಯಾಂಕ್‌ ಶಾಖೆಯಿಂದ ಮೂರು ವರ್ಷಗಳ ಹಿಂದೆ ₹5 ಲಕ್ಷ ಸಾಲ ಪಡೆದಿದ್ದ ಹನುಮಂತ ನಾಯ್ಕ ಕೊಳವೆಬಾವಿ ಕೊರೆಸಿ ಹೊಸದಾಗಿ ಅಡಿಕೆ ತೋಟ ಮಾಡಿದ್ದರು.

ಈಗ ಬಡ್ಡಿ ಸೇರಿ ₹7 ಲಕ್ಷವಾಗಿದ್ದು, ಒಂದು ವರ್ಷದ ಹಿಂದೆ ಬ್ಯಾಂಕ್ ಅಧಿಕಾರಿಗಳು ನೋಟಿಸ್ ನೀಡಿದ್ದರು. ಇತ್ತೀಚೆಗೆ ಮನೆಗೆ ಬಂದು ಮರುಪಾವತಿ ಮಾಡುವಂತೆ ತಿಳಿಸಿದ್ದರು. ಇದರಿಂದ ನೊಂದಿದ್ದ ಹನಮಂತ ನಾಯ್ಕ ವಿಷ ಸೇವಿಸಿದ್ದಾರೆ’ ಎಂದು ಸಂಬಂಧಿಕರು ದೂರಿದ್ದಾರೆ.

ತರೀಕೆರೆ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಶಿವಮೊಗ್ಗ ಮತ್ತು ಮಂಗಳೂರಿನ ಆಸ್ಪತ್ರೆಗಳಿಗೂ ಕರೆದೊಯ್ಯಲಾಗಿತ್ತು. 10 ದಿನ ಆಸ್ಪತ್ರೆಯಲ್ಲಿದ್ದ ಹನುಮಂತ ನಾಯ್ಕ ಮೃತಪಟ್ಟಿದ್ದಾರೆ ಎಂದು ತಂದೆ ಪುಟ್ಟನಾಯ್ಕ ದೂರು ನೀಡಿದ್ದಾರೆ. ಅಜ್ಜಂಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Farmer from Hosahalli Tandya commits suicide by consuming poison

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...