Home namma chikmagalur chikamagalur ಕಾಡುಕೋಣ ದಾಳಿಗೆ ಕೃಷಿಕನಿಗೆ ಗಾಯ
chikamagalurHomeLatest Newsnamma chikmagalur

ಕಾಡುಕೋಣ ದಾಳಿಗೆ ಕೃಷಿಕನಿಗೆ ಗಾಯ

Share
Share

ಕಾಡಾನೆಗಳ ಹಾವಳಿಯಿಂದ ತತ್ತರಿಸಿರುವ ಜನತೆಗೆ ಈಗ ಕಾಡುಕೋಣಗಳ ಉಪಟಳ ಹೊಸ ಆತಂಕ ತಂದೊಡ್ಡಿದೆ. ಕೊಪ್ಪ ತಾಲೂಕಿನ ಮೇಗುಂದ ಹೋಬಳಿಯ ಮುಂಡೋಳು ಗ್ರಾಮದಲ್ಲಿ ಇಂದು ಮುಂಜಾನೆ ಕೃಷಿಕರೊಬ್ಬರ ಮೇಲೆ ಕಾಡುಕೋಣ ದಾಳಿ ನಡೆಸಿದೆ.

ಶಿವಪ್ಪಗೌಡ (65) ಎಂಬುವವರೇ ಗಾಯಗೊಂಡ ಕೃಷಿಕ. ಇಂದು ಮುಂಜಾನೆ ಎಂದಿನಂತೆ ತಮ್ಮ ತೋಟಕ್ಕೆ ನೀರು ಹಾಯಿಸಲು ತೆರಳಿದ್ದ ಇವರು, ಮೋಟಾರ್ ಸ್ಟಾರ್ಟ್ ಮಾಡಲು ಮುಂದಾಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಹಿಂಬದಿಯಿಂದ ನುಗ್ಗಿ ಬಂದ ಕಾಡುಕೋಣ, ಕೊಂಬಿನಿಂದ ಶಿವಪ್ಪಗೌಡರ ಮೇಲೆ ಎಗರಿ ದಾಳಿ ಮಾಡಿದೆ.

ದಾಳಿಯ ತೀವ್ರತೆಗೆ ಶಿವಪ್ಪಗೌಡರ ತೊಡೆ ಹಾಗೂ ಬೆನ್ನಿನ ಭಾಗಕ್ಕೆ ಆಳವಾದ ಗಾಯಗಳಾಗಿದ್ದು, ಸ್ಥಳದಲ್ಲೇ ಕುಸಿದು ಬಿದ್ದಿದ್ದರು. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಗಾಯಗಳ ಸ್ವರೂಪ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ.

ಕಾಫಿನಾಡಿನ ಮಲೆನಾಡು ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಮಿತಿಮೀರುತ್ತಿದೆ. ಅತ್ತ ಆನೆಗಳ ಹಿಂಡು, ಇತ್ತ ಕಾಡುಕೋಣಗಳ ದಾಳಿಯಿಂದ ಕೃಷಿಕರು ತೋಟದ ಕೆಲಸಕ್ಕೇ ಹೋಗದಂತಹ ವಾತಾವರಣ ನಿರ್ಮಾಣವಾಗಿದೆ.

ಅರಣ್ಯ ಇಲಾಖೆ ತಕ್ಷಣವೇ ಕಾರ್ಯಪ್ರವೃತ್ತರಾಗಿ ಕಾಡುಕೋಣಗಳ ಹಾವಳಿ ತಡೆಗಟ್ಟಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

Farmer injured in wild buffalo attack

Share

Leave a comment

Leave a Reply

Your email address will not be published. Required fields are marked *

Don't Miss

ರಾಜಕಾರಣದಲ್ಲಿ ಮಠಗಳ, ಸಂಘಟನೆಗಳ “ಆರ್ಭಟ”

ರಾಜ್ಯ ರಾಜಕಾರಣದಲ್ಲಿ ಇತ್ತೀಚಿನ ವರ್ಷಗಳಲ್ಲಿ ಮಠಗಳ ಪ್ರಭಾವ ಮತ್ತು ಸಂಘಟನೆಗಳು ಆರ್ಭಟ ಮಾಡುತ್ತಿರುವುದು ನೋಡಿದರೆ ಎತ್ತ ಸಾಗುತ್ತಿದ್ದೇವೆ ಎನ್ನಿಸುತ್ತದೆ. ಮಠಗಳು ಮಿತಿ ದಾಟಿದರೆ ಸಂಘಟನೆಗಳು ಲಾಭಿ ಮಾಡುತ್ತಿರುವುದು “ಸೇವೆಗಾಗಿಯೋ” ಜಾತಿಗಾಗಿಯೋ ಆಥವಾ...

ಕಾಫಿ ಮೂಟೆ ಸಾಗಿಸುತ್ತಿದ್ದ ಲಾರಿ ಅಪಘಾತ

ಚಿಕ್ಕಮಗಳೂರು: ಕಾಫಿ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಚಿಕ್ಕಮಗಳೂರು ನಗರದ ಕೆ.ಎಂ. ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಲಾರಿ ಕಣಿವೆಯ...

Related Articles

ಮುದುಗುಂಡಿ ಗ್ರಾಮದಲ್ಲಿ ಹೆಣ್ಣು ಚಿರತೆ ಸೆರೆ

ತರೀಕೆರೆ: ತಾಲ್ಲೂಕಿನ ಮುದುಗುಂಡಿ ಗ್ರಾಮದಲ್ಲಿ ಸುಮಾರು 3 ವರ್ಷ ವಯಸ್ಸಿನ ಹೆಣ್ಣು ಚಿರತೆಯನ್ನು ಅರಣ್ಯ ಇಲಾಖೆ...

ಮಕ್ಕಳ ಲೈಂಗಿಕ ಶೋಷಣೆ ಚಿತ್ರ ದೃಶ್ಯ ಹಂಚಿಕೊಂಡ ನಗರದ ಮಹಿಳೆ

ಚಿಕ್ಕಮಗಳೂರು: ಮಕ್ಕಳ ಲೈಂಗಿಕ ಶೋಷಣೆ ಮತ್ತು ಆಕ್ಷೇಪಣಾರ್ಹ ಚಿತ್ರ ದೃಶ್ಯಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದ...

ನಂಜೇಶ್ ಬೆಣ್ಣೂರು ನವಮಾಧ್ಯಮದ ನವತಾರೆಯಾಗಿ ಬೆಳಗಲಿ…

ಚಿಕ್ಕಮಗಳೂರು:  ಜನಮುಖಿ ಮನಸ್ಸಿನ ನವಮಾಧ್ಯಮದ ಸಂವಹನಕಾರ ನಂಜೇಶ್ ಆರ್ ಬೆಣ್ಣೂರು ಈಗ ಭಾರತದ ಮಟ್ಟದಲ್ಲಿ ನವ...

ಕಾಫಿನಾಡಿನಲ್ಲಿ ಲಾಂಗು – ಮಚ್ಚುಗದ್ದೆ ಸುದ್ದಿ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಲಾಂಗು ಮತ್ತು ಮಚ್ಚುಗಳಂತಹ ಮಾರಕಾಸ್ತ್ರಗಳು ಬಳಕೆ ತೀರಾ ಸಾಮಾನ್ಯ...