Home Latest News ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ
Latest NewsHomenamma chikmagalurTarikere

ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ

Share
Share

ತರೀಕೆರೆ: ಸುಟ್ಟು ಹೋದ ಟ್ರಾನ್ಸ್‌ಫಾರ್ಮರ್‌ 72 ಗಂಟೆಯೊಳಗೆ ರೈತರಿಗೆ ಸಿಗುತ್ತಿಲ್ಲ. ಪವರ್‌ಮೆನ್‌ಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ತುಂಡಾಗಿ ನೆಲಕ್ಕೆ ಬೀಳುತ್ತಿರುವ ಹಳೆಯ ವಿದ್ಯುತ್ ವೈರ್‌ಗಳನ್ನು ಬದಲಾಯಿಸುತ್ತಿಲ್ಲ. ಟಿ.ಸಿ ಸರಬರಾಜಿಗೆ ವಾಹನಗಳ ಕೊರತೆಯಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಹಿರಿಯ ಅಧಿಕಾರಿಗಳ ಸಮ್ಮಖದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ರೈತರು ಮತ್ತು ಸಾರ್ವಜನಿಕರು ಸಮಸ್ಯೆಗಳ ಸುರಿಮಳೆಗೈದರು.

ಭಾರತೀಯ ಕಿಸಾನ್ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಮೇಶ್ವರಪ್ಪ ಮಾತನಾಡಿ, ಸುಟ್ಟ ಟಿ.ಸಿಗಳನ್ನು ದುರಸ್ತಿಪಡಿಸಿ 72 ಗಂಟೆಯೊಳಗೆ ರೈತರಿಗೆ ನೀಡಬೇಕು ಎಂಬ ನಿಯಮವನ್ನು ಮೆಸ್ಕಾಂ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸುತ್ತಿಲ್ಲ. ರಿಪೇರಿಯಾದ ಟಿ.ಸಿಗಳನ್ನು ರೈತರು ತಮ್ಮ ಖರ್ಚಿನಲ್ಲಿಯೇ ತೆಗೆದುಕೊಂಡು ಹೋದರೂ ಕೂಡ, ಅಳವಡಿಸಲು ಸಿಬ್ಬಂದಿ ಬರುವುದಿಲ್ಲ. ಟಿಸಿ ತುಂಬಿದ್ದ ವಾಹನಕ್ಕಾಗಿ ವಾರಗಟ್ಟೆಲೆ ಕಾಯುವ ಪರಿಪಾಟವಿದೆ ಎಂದು ದೂರಿದರು.

ರೈತ ಸಂತೋಷ್ ಮಾತನಾಡಿ, ದೋರನಾಳು ಭಾಗದಲ್ಲಿ ವಿದ್ಯುತ್ ತಂತಿಗಳು ತುಂಡಾಗಿ ಬೀಳುತ್ತಿವೆ. ಹಳೆಯ ವೈರ್ ಬದಲಾಯಿಸುವಂತೆ ಹಲವು ಬಾರಿ ಅರ್ಜಿ ಕೊಟ್ಟರೂ ಯಾವುದೇ ಪ್ರಯೋಜನವಾಗಿಲ್ಲ. ವಿದ್ಯುತ್‌ಗೆ ಸಂಬಂಧಿಸಿದ ಯಾವುದೇ ಅವಘಡ, ಎಷ್ಟೊತ್ತಿಗೆ ನಡೆದಿದ್ದರೂ ಕೂಡ ಪವರ್‌ಮೆನ್‌ಗಳು ಬರುವುದು ಮಾತ್ರ ಬೆಳಿಗ್ಗೆ 10 ಗಂಟೆಗೆ ಎಂದು ದೂರಿದರು.

‘ಸುಟ್ಟು ಹೋದ ಟಿ.ಸಿ.ಗಳನ್ನು ರಿಪೇರಿ ಮಾಡಿಸಿ ಬೀರೂರಿನಲ್ಲಿ ಇಡುವುದು ಬೇಡ. ದುರಸ್ತಿಯಾದ ಬಳಿಕ ರೈತರಿಗೆ ತುರ್ತಾಗಿ ವಿತರಿಸುವ ಕೆಲಸ ಮಾಡಬೇಕು ಎಂದು ಸೂಪರಿಂಟೆಂಡಿಂಗ್‌ ಎಂಜಿನಿಯರ್ ಮಂಜುನಾಥ್‌ ಸೂಚನೆ ನೀಡಿದರು.

ಮಾಚೇನಹಳ್ಳಿಯ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಾಸವಾಗುತ್ತಿದೆ. ವೋಲ್ಟೇಜ್ ಅವ್ಯವಸ್ಥೆಯಿಂದ ಮನೆಯಲ್ಲಿರುವ ಎಲೆಕ್ಟ್ರಾನಿಕ್ ಸಲಕರಣೆಗಳಿಗೆ ಹಾನಿಯಾಗುತ್ತಿದೆ. ಈ ಭಾಗಕ್ಕೆ ಪ್ರತ್ಯೇಕ ಟಿ.ಸಿ ಅಳವಡಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸ್ಥಳಿಯ ನಿವಾಸಿಗಳು ಮನವಿ ಮಾಡಿದರು.

ರೈತ ಮುಖಂಡರಾದ ಸುಣ್ಣದಹಳ್ಳಿ ಚಂದಪ್ಪ, ಹೊಸಳ್ಳಿ ತಾಂಡ್ಯದ ರಮೇಶ್‌ನಾಯ್ಕ, ಸುನಿಲ್ ಹಾಗೂ ಇತರರು ಸಭೆಯಲ್ಲಿ ಹಾಜರಿದ್ದು ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದರು.

Farmers are unable to get their burnt transformers back within 72 hours.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...