Home Latest News ಕಡೂರು ತಹಶೀಲ್ದಾರ್ ಅಮಾನತಿಗೆ ರೈತಸಂಘ ಆಗ್ರಹ
Latest NewschikamagalurHomenamma chikmagalur

ಕಡೂರು ತಹಶೀಲ್ದಾರ್ ಅಮಾನತಿಗೆ ರೈತಸಂಘ ಆಗ್ರಹ

Share
Share

ಚಿಕ್ಕಮಗಳೂರು: ಹೈಕೋರ್ಟ್ ಆದೇಶವನ್ನು ಪಾಲಿಸದೆ ಒತ್ತುವರಿದಾರರಿಗೆ ಹಿಂಬರಹ ನೀಡಿರುವ ಕಡೂರು ತಹಶೀಲ್ದಾರ್ ಪೂರ್ಣಿಮಾ ಅವರನ್ನು ಕೂಡಲೇ ಸೇವೆಯಿಂದ ಅಮಾನತ್ತು ಮಾಡುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿರುವುದಾಗಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಡಿ. ಮಹೇಶ್ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತ, ಕಡೂರು ತಾಲ್ಲೂಕು ಬಾಣೂರು ಗ್ರಾಮದ ಸರ್ವೆ ನಂ ೧೩೫/೭ ರಲ್ಲಿ ಎಸ್. ಬಸವರಾಜಪ್ಪ ಎಂಬುವವರು ಹಳ್ಳವನ್ನು ಮುಚ್ಚಿ ೪ ಗುಂಟೆ ಜಾಗವನ್ನು ಒತ್ತುವರಿ ಮಾಡಿರುವ ಬಗ್ಗೆ ನ್ಯಾಯಾಲಯವು ೬ ವಾರಗಳ ಒಳಗೆ ತೆರವುಗೊಳಿಸುವಂತೆ ಅದೇಶ ನೀಡಿದ್ದರೂ ನಿಗಧಿತ ಗಡುವಿನೊಳಗೆ ಒತ್ತುವರಿ ತೆರವುಗೊಳಿಸಲು ಕಡೂರು ತಹಶೀಲ್ದಾರ್ ಮುಂದಾಗಿಲ್ಲ ಎಂದು ದೂರಿದರು.

ಕಡೂರು ತಹಶೀಲ್ದಾರ್‌ರು ಒತ್ತುವರಿದಾರರೊಂದಿಗೆ ಶಾಮೀಲಾಗಿ ಹೈಕೋರ್ಟ್ ಆದೇಶವನ್ನು ಉಲ್ಲಂಘಿಸಿರುವ ಬಗ್ಗೆ ಸೋಮಶೇಖರಪ್ಪ ರೈತ ಸಂಘಟನೆಗೆ ಸಹಾಯ ಕೋರಿದ ಹಿನ್ನೆಲೆಯಲ್ಲಿ ರೈತ ಸಂಘ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದ ಪರಿಣಾಮ ಮೇ.೨೬ ರಂದು ಸ್ಥಳ ಪರಿಶೀಲಿಸಿ ಭೂಮಾಪಕರಿಂದ ಒತ್ತುವರಿಯಾಗಿರುವ ೪ ಗುಂಟೆ ಜಾಗವನ್ನು ಗುರ್ತಿಸಿದ್ದಾರೆಂದು ತಿಳಿಸಿದರು.

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿರುವ ತಹಶೀಲ್ದಾರ್‌ರನ್ನು ಕೂಡಲೇ ಅಮಾನತ್ತು ಮಾಡಿ ಕಾನೂನು ಕ್ರಮ ಕೈಗೊಂಡು ದೂರುದಾರರು ಮಾಡಿರುವ ಖರ್ಚುವೆಚ್ಚವನ್ನು ದಂಡದ ರೂಪದಲ್ಲಿ ಬರಿಸಬೇಕೆಂದು ಒತ್ತಾಯಿಸಿದರು.

ರೈತ ಸಂಘಟನೆ ರೈತರ ಸಾಮಾಜಿಕ ಕಳಕಳಿಯಿಂದ ಕೆಲಸ ಮಾಡುತ್ತದೆಯೇ ವಿನಹಾಃ ಒತ್ತುವರಿದಾರರು ಆರೋಪಿಸಿರುವಂತೆ ಕೆಲಸ ಮಾಡುತ್ತಿಲ್ಲ, ನ್ಯಾಯಾಲಯ ಅದೇಶ ನೀಡಿರುವ ಹಳ್ಳದ ಹರಿವಿನ ೧೬.೫ ಅಡಿ ಅಗಲವನ್ನು ತುರ್ತಾಗಿ ತೆರವುಗೊಳಿಸಬೇಕೆಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ತಾಲ್ಲೂಕು ಅಧ್ಯಕ್ಷ ವೈ.ಸಿ. ಸುನಿಲ್ ಕುಮಾರ್, ಮುಖಂಡರಾದ ಆನಂದ್, ಮಲ್ಲುಂಡಪ್ಪ, ಲೋಕೇಶ್, ರಾಮೇಗೌಡ, ಅರುಣಾಕ್ಷಿ, ದೂರುದಾರರಾದ ಸೋಮಶೇಖರ್. ಬಿ.ಎಸ್ ಶಾರದಮ್ಮ, ಮಮತ, ಹಾಲಮ್ಮ ಉಪಸ್ಥಿತರಿದ್ದರು.

Farmers’ association demands suspension of Kadur Tahsildar

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...