Home ಡಿ.22ಕ್ಕೆ ಉದ್ದೇಬೋರನಹಳ್ಳಿಯಲ್ಲಿ ‘ರೈತ ದಿನಾಚರಣೆ’
HomeLatest Newsnamma chikmagalur

ಡಿ.22ಕ್ಕೆ ಉದ್ದೇಬೋರನಹಳ್ಳಿಯಲ್ಲಿ ‘ರೈತ ದಿನಾಚರಣೆ’

Share
Share

ಚಿಕ್ಕಮಗಳೂರು: ರೈತರಲ್ಲಿ ಜಾಗೃತಿ ಮೂಡಿಸುವ ಜೊತೆಗೆ ಕೃಷಿ ಇಲಾಖೆಯಿಂದ ದೊರೆಯುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಉದ್ದೇಶವೇ ‘ರೈತ ದಿನಾಚರಣೆ’ ಎಂದು ರೈತ ಸಂಘದ ಹೋಬಳಿ ಘಟಕ ಗ್ರಾಮ ಶಾಖೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ದೇವರಾಜೇಗೌಡ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಉದ್ದೇಬೋರನಹಳ್ಳಿ ರೈತ ಸಂಘದ ಶಾಖೆ ಹಾಗೂ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಡಿ.೨೨ ರಂದು ಸೋಮವಾರ ಬೆಳಗ್ಗೆ ೧೦ ಗಂಟೆಗೆ ರೈತ ದಿನಾಚರಣೆಯನ್ನು ಉದ್ದೇಬೋರನಹಳ್ಳಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.

ಈ ಸಂಬಂಧ ನೈಸರ್ಗಿಕ ಕೃಷಿ ಕುರಿತು ಚಂದ್ರಶೇಖರ್ ನಾರಾಣಾಪುರ ಉಪನ್ಯಾಸ ನೀಡಲಿದ್ದಾರೆ. ಸಿರಿಧಾನ್ಯ ಮತ್ತು ಬಳಕೆ ಬಗ್ಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಾಹಿತಿ ನೀಡಲಿರುವರು, ತೋಟಗಾರಿಕೆ ಕೃಷಿ ಬಗ್ಗೆ ತೋಟಗಾರಿಕಾ ಇಲಾಖೆ ಅಧಿಕಾರಿ ವಿವರಣೆ ನೀಡಲಿದ್ದಾರೆಂದು ಹೇಳಿದರು.

ಈ ರೈತ ದಿನಾಚರಣೆಯ ಅಂಗವಾಗಿ ಬಿಳೇಕಲ್ಲಳ್ಳಿಯಿಂದ ಉದ್ದೇಬೋರನಹಳ್ಳಿವರೆಗೆ ಜಾನಪದ ಕಲಾ ಮೇಳಗಳು ಹಾಗೂ ಜೋಡೆತ್ತಿನ ಗಾಡಿ ಮೆರವಣಿಗೆ ಮತ್ತು ಬೃಹತ್ ರೈತರ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಪ್ರಗತಿಪರ ರೈತರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲು ನಿರ್ಧರಿಸಲಾಗಿದೆ ಎಂದ ಅವರು, ಕೃಷಿ, ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕೃಷಿ ಯಂತ್ರೋಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದ್ದು, ಈ ಭಾಗದ ಸುತ್ತಮುತ್ತಲ ಗ್ರಾಮಗಳ ರೈತರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಸುದುಪಯೋಗ ಪಡೆದುಕೊಳ್ಳಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಕುಮಾರಸ್ವಾಮಿ, ಗೌರವಾಧ್ಯಕ್ಷ ಬಸವರಾಜು, ಹೋಬಳಿ ಸಂಘಟನಾ ಕಾರ್ಯದರ್ಶಿ ರವಿಕುಮಾರ್, ಕಾರ್ಯದರ್ಶಿ ಪ್ರಕಾಶ್, ಮುಖಂಡ ಬಸವರಾಜು ಉಪಸ್ಥಿತರಿದ್ದರು.

‘Farmers’ Day’ to be celebrated in Uddeboranahalli on December 22

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...