Home namma chikmagalur chikamagalur ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ
chikamagalurHomeLatest Newsnamma chikmagalur

ಕೃಷಿ ಸಾಲಕ್ಕೆ ಶೇ.50 ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಗೆ ವಂಚನೆ

Share
Share

ಶೃಂಗೇರಿ: ಬ್ಯಾಂಕ್‌ನಿಂದ ಕೃಷಿ ಸಾಲ ಮಂಜೂರು ಮಾಡಿಸಿ, ಸರ್ಕಾರದಿಂದ ಶೇ.50ರಷ್ಟು ಸಬ್ಸಿಡಿ ಕೊಡಿಸುವುದಾಗಿ ನಂಬಿಸಿ ರೈತರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿರುವ ಆರೋಪ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೇಳಿಬಂದಿದೆ.

ನೆಮ್ಮಾರು ಗ್ರಾಮದ ನಿವಾಸಿ ಗಿರೀಶ್ ಹಾಗೂ ಅವರ ಸ್ನೇಹಿತ ಜ್ಞಾನೇಂದ್ರ ಅವರಿಗೆ ರವಿಕುಮಾರ್ ಎಂಬಾತ ಪರಿಚಯವಾಗಿದ್ದು, ಬ್ಯಾಂಕ್‌ನಲ್ಲಿ ತನಗೆ ಪ್ರಭಾವಿ ಸಂಪರ್ಕವಿದೆ ಎಂದು ಹೇಳಿಕೊಂಡಿದ್ದ ಎನ್ನಲಾಗಿದೆ.

ಕೃಷಿ ಅಭಿವೃದ್ಧಿಗಾಗಿ ಇಬ್ಬರಿಗೂ ತಲಾ ₹25 ಲಕ್ಷ ಸಾಲ ಕೊಡಿಸುವುದಾಗಿ ಹಾಗೂ ಸಾಲದ ಮೊತ್ತದಲ್ಲಿ ಶೇ.50ರಷ್ಟು ಸಬ್ಸಿಡಿ ಮತ್ತು ಕಡಿಮೆ ಬಡ್ಡಿದರದ ಸೌಲಭ್ಯ ದೊರೆಯಲಿದೆ ಎಂದು ರವಿಕುಮಾರ್ ಆಮಿಷವೊಡ್ಡಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಸಾಲದ ಪ್ರಕ್ರಿಯೆ ಶುಲ್ಕ ಹಾಗೂ ದಾಖಲೆಗಳ ಪರಿಶೀಲನೆಗಾಗಿ ಹಣ ಬೇಕೆಂದು ಹೇಳಿ, ಹಂತ ಹಂತವಾಗಿ ಬ್ಯಾಂಕ್ ಖಾತೆಗೆ ಒಟ್ಟು ₹3.60 ಲಕ್ಷ ವರ್ಗಾವಣೆ ಮಾಡಿಸಿಕೊಂಡಿದ್ದಾನೆ ಎನ್ನಲಾಗಿದೆ. ಹಣ ಪಡೆದ ಬಳಿಕ ಸಾಲವನ್ನು ಮಂಜೂರು ಮಾಡಿಸದೆ, ಸಂತ್ರಸ್ತರು ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಸಂಪರ್ಕಕ್ಕೆ ಸಿಗದೆ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.

ವಂಚನೆಗೊಳಗಾಗಿರುವುದು ಅರಿವಿಗೆ ಬಂದ ಬಳಿಕ ಗಿರೀಶ್ ಹಾಗೂ ಜ್ಞಾನೇಂದ್ರ ಶೃಂಗೇರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ವಂಚನೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆ ಹಾಗೂ ಹಣದ ವಹಿವಾಟಿನ ಕುರಿತು ತನಿಖೆ ಮುಂದುವರಿಸಿದ್ದಾರೆ.

Farmers defrauded after being led to believe they would receive a 50% subsidy on agricultural loans.

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ ಮಾಂಗಲ್ಯ ಸರ ಕಳವು

ಮೂಡಿಗೆರೆ: ಮಹಿಳೆಯ ಮುಖಕ್ಕೆ ಖಾರದ ಪುಡಿ ಎರಚಿ, ಕುತ್ತಿಗೆಗೆ ಕೈ ಹಾಕಿ 24 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಮೂಡಿಗೆರೆ ಪಟ್ಟಣದ ಕುರ್ಕಮಕ್ಕಿ ವಾರ್ಡ್‌ನಲ್ಲಿ ಸೆ.5ರಂದು ನಡೆದಿದೆ....

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು ನೇಮಕ ಮಾಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡಿದ್ದು, ಚುನಾವಣಾ ದಿನಾಂಕ ಘೋಷಣೆಯಷ್ಟೇ ಬಾಕಿ ಉಳಿದಿದೆ....

Related Articles

ಪೊಲೀಸ್ ಅಧಿಕಾರಿ ಖಾಕಿ ಸಮವಸ್ತ್ರ ಧರಿಸಿ ಗೂಂಡಾಗಿರಿ

ಚಿಕ್ಕಮಗಳೂರು: ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತರಿಗೆ ಇನ್ಸ್‌ಪೆಕ್ಟರ್ ಧನಂಜಯ್ ಧಮ್ಕಿ ಹಾಕಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ: ಸರ್ಕಾರಿ ಬಸ್ ಹರಿದು ಇಬ್ಬರು ಸಾವು

ಕಡೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ರಸ್ತೆಗೆ ಬಿದ್ದ ಸವಾರರ ಮೇಲೆ...

ಮನೆಯ ಹಿತ್ತಲಿಗೆ ನುಗ್ಗಿ ನೀರು ಕುಡಿದ ಚಿರತೆ

ಕಡೂರು: ಕಾಫಿನಾಡಿನ ಬಯಲು ಭಾಗದಲ್ಲಿ ಚಿರತೆಗಳ ಓಡಾಟ ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಮನೆಯ ಹಿತ್ತಲಿಗೆ...

ಸೆ.14ರಂದು ಮುಳ್ಳಯ್ಯನಗಿರಿ ಸೇರಿದಂತೆ ಗಿರಿಧಾಮಗಳಿಗೆ ಪ್ರವಾಸಿಗರ ಪ್ರವೇಶ ನಿರ್ಬಂಧ

ಚಿಕ್ಕಮಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದ್ರದ್ರೋಣ ಪರ್ವತ ಸಾಲಿನ ಪ್ರಮುಖ ಪ್ರವಾಸಿ ತಾಣಗಳಿಗೆ ಸೆಪ್ಟೆಂಬರ್ 14ರಂದು...